ಬಿಹಾರ ಚುನಾವಣೆಯಲ್ಲಿ ವಿರೋಧ ಪಕ್ಷಗಳ ಒಕ್ಕೂಟದ ಸೋಲಿನ ಬಳಿಕ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಲೋಕಸಭೆ ವಿಪಕ್ಷ ನಾಯಕ, ಕಾಂಗ್ರೆಸ್ ಸಂಸದ ರಾಹುಲ್ ಗಾಂಧಿ, “ಮಹಾ ಮೈತ್ರಿಕೂಟದಲ್ಲಿ ನಂಬಿಕೆ ಇಟ್ಟ ಬಿಹಾರದ ಲಕ್ಷಾಂತರ ಮತದಾರರಿಗೆ ನನ್ನ ಹೃತ್ಪೂರ್ವಕ ಕೃತಜ್ಞತೆಯನ್ನು ವ್ಯಕ್ತಪಡಿಸುತ್ತೇನೆ. ಬಿಹಾರದಲ್ಲಿನ ಈ ಫಲಿತಾಂಶ ನಿಜಕ್ಕೂ ಆಘಾತಕಾರಿ. ಆರಂಭದಿಂದಲೂ ನ್ಯಾಯಯುತವಲ್ಲದ(ಅನ್ಯಾಯದ) ಚುನಾವಣೆಯಲ್ಲಿ ನಾವು ಗೆಲ್ಲಲು ವಿಫಲರಾಗಿದ್ದೇವೆ. ಸಂವಿಧಾನ ಮತ್ತು ಪ್ರಜಾಪ್ರಭುತ್ವವನ್ನು ರಕ್ಷಿಸುವ ಹೋರಾಟವಿದು. ಕಾಂಗ್ರೆಸ್ ಪಕ್ಷ ಮತ್ತು ಇಂಡಿಯಾ ಮೈತ್ರಿಕೂಟ ಈ ಫಲಿತಾಂಶವನ್ನು ಆಳವಾಗಿ ಪರಿಶೀಲಿಸುತ್ತವೆ. ಪ್ರಜಾಪ್ರಭುತ್ವವನ್ನು ರಕ್ಷಿಸುವ ಪ್ರಯತ್ನಗಳನ್ನು ಇನ್ನಷ್ಟು ಹೆಚ್ಚಿಸುತ್ತದೆ” ಎಂದು ಹೇಳಿದ್ದಾರೆ.
ಬಿಹಾರ ಚುನಾವಣೆಯಲ್ಲಿ ಅನ್ಯಾಯ: ರಾಹುಲ್ ಗಾಂಧಿ
Date:




