ಹಕ್ಕಿ ಡಿಕ್ಕಿಯಾದ ಕಾರಣ ಸುಮಾರು 186 ಪ್ರಯಾಣಿಕರಿದ್ದ ಇಂಡಿಗೋ ವಿಮಾನಕ್ಕೆ ಹಾನಿಯಾದ ಘಟನೆ ಉತ್ತರಾಖಂಡದ ಡೆಹ್ರಾಡೂನ್‌ನ ರಿಷಿಕೇಶ ಬಳಿಯ ಜಾಲಿ ಗ್ರಾಂಟ್ ವಿಮಾನ ನಿಲ್ದಾಣದ ರನ್‌ವೇಯಲ್ಲಿ ನಡೆದಿದೆ. ಮುಂಬೈನಿಂದ ಪ್ರಯಾಣಿಕರನ್ನು ಕರೆದೊಯ್ಯುತ್ತಿದ್ದ ಇಂಡಿಗೋ ವಿಮಾನಕ್ಕೆ ಹಕ್ಕಿ ಡಿಕ್ಕಿ ಹೊಡೆದು ಹಾನಿಯಾಗಿದೆ. ವಿಮಾನದಲ್ಲಿದ್ದ ಎಲ್ಲಾ 186 ಪ್ರಯಾಣಿಕರು ಸುರಕ್ಷಿತರಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.




