ನೇಪಾಳಿ ಸೇರಿ 9 ಭಾಷೆಗಳಲ್ಲಿ ಬಿಡುಗಡೆಯಾಗಲಿದೆ ಸಂವಿಧಾನ

Date:

ಈ ವರ್ಷದ ಸಂವಿಧಾನ ದಿನಾಚರಣೆಯ ಅಂಗವಾಗಿ, ನೇಪಾಳಿ ಸೇರಿದಂತೆ ಒಂಬತ್ತು ಭಾಷೆಗಳಲ್ಲಿ ಭಾರತದ ಸಂವಿಧಾನದ ಅನುವಾದಿತ ಆವೃತ್ತಿಗಳನ್ನು ಸರ್ಕಾರ ಬಿಡುಗಡೆ ಮಾಡಲಿದೆ. ನೇಪಾಳಿಯಲ್ಲಿಯೂ ಸಂವಿಧಾನ ಬಿಡುಗಡೆ ಮಾಡುವುದರಿಂದ ಭಾರತದೊಂದಿಗೆ ಆಳವಾದ ಸಾಂಸ್ಕೃತಿಕ, ಧಾರ್ಮಿಕ ಸಂಬಂಧಗಳನ್ನು ಹೊಂದಿರುವ ನೆರೆಯ ನೇಪಾಳದ ಜನರು ತಮ್ಮದೇ ಆದ ಭಾಷೆಯಲ್ಲಿ ಸಂವಿಧಾನದ ಬಗ್ಗೆ ತಿಳಿಯಬಹುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಮಲಯಾಳಂ, ಮರಾಠಿ, ಪಂಜಾಬಿ, ಬೋಡೋ, ಕಾಶ್ಮೀರಿ, ತೆಲುಗು, ಒಡಿಯಾ ಮತ್ತು ಅಸ್ಸಾಮೀಸ್ ಸೇರಿದಂತೆ ಒಟ್ಟು ಒಂಬತ್ತು ಭಾಷೆಗಳಲ್ಲಿ ಸಂವಿಧಾನ ಬಿಡುಗಡೆಯಾಗಲಿದೆ. ಈ ಅನುವಾದಗಳನ್ನು ಕೇಂದ್ರ ಕಾನೂನು ಸಚಿವಾಲಯದ ಶಾಸಕಾಂಗ ಇಲಾಖೆ ಸಿದ್ಧಪಡಿಸಿದೆ. ಈ ಕಾರ್ಯಕ್ರಮವು ಬುಧವಾರ ಹಳೆಯ ಸಂಸತ್ತಿನ ಕಟ್ಟಡದ ಐತಿಹಾಸಿಕ ಕೇಂದ್ರ ಸಭಾಂಗಣದಲ್ಲಿ(ಸಂವಿಧಾನ ಸದನ) ನಡೆಯಲಿದೆ. ರಾಷ್ಟ್ರಪತಿ ದ್ರೌಪದಿ ಮುರ್ಮು ಮುಖ್ಯ ಅತಿಥಿಯಾಗಿ ಅಧ್ಯಕ್ಷತೆ ವಹಿಸಿ ಭಾಷಣ ಮಾಡಲಿದ್ದಾರೆ.

    WhatsApp Image 2025 11 17 at 3.21.17 PM
    ಈ ದಿನ ಡೆಸ್ಕ್
    + posts

    ಪೋಸ್ಟ್ ಹಂಚಿಕೊಳ್ಳಿ:

    ಪೋಸ್ಟ್ ಹಂಚಿಕೊಳ್ಳಿ:

    ಈ ಹೊತ್ತಿನ ಪ್ರಮುಖ ಸುದ್ದಿ

    ವಿಡಿಯೋ

    ಇದೇ ರೀತಿಯ ಇನ್ನಷ್ಟು ಲೇಖನಗಳು
    Related

    ಸಂಪುಟ ಪುನರ್‌ರಚನೆಗೆ ಕಾಂಗ್ರೆಸ್‌ ಶಾಸಕರ ಆಗ್ರಹ; ಹೈಕಮಾಂಡ್‌ಗೆ ಪತ್ರ

    ರಾಜ್ಯದಲ್ಲಿ ಮುಖ್ಯಮಂತ್ರಿ ಹುದ್ದೆ ಬದಲಾವಣೆ ಕುರಿತು ಪದೇ-ಪದೇ ಚರ್ಚೆಗಳು ನಡೆಯುತ್ತಿಲೇ ಇವೆ....

    ಮಾಜಿ ರೈಲ್ವೆ ಸಚಿವ ಮುಕುಲ್ ರಾಯ್ ನಿಧನ

    ಮಾಜಿ ರೈಲ್ವೆ ಸಚಿವ, ಈ ಹಿಂದೆ ತೃಣಮೂಲ ಕಾಂಗ್ರೆಸ್‌(ಟಿಎಂಸಿ)ಯ ಎರಡನೇ ಉನ್ನತ...

    ಟ್ರಂಪ್ ಸುಂಕ 15%ಗೆ ಏರಿಕೆ!

    ನಾನಾ ರಾಷ್ಟ್ರಗಳ ಮೇಲೆ ಅಮೆರಿಕ ಅಧ್ಯಕ್ಷ ಟ್ರಂಪ್ ಹೇರಿದ್ದ ಭಾರೀ ಸುಂಕವನ್ನು...

    ಇಂದಿನಿಂದ ಒಂದೆಡೆ ರಂಗೋತ್ಸವ

    ಫೆಬ್ರವರಿ 21 ಮತ್ತು 22ರಂದು ಬೆಂಗಳೂರು ನಗರದ ನ್ಯಾಷನಲ್ ಗ್ಯಾಲರಿ ಆಫ್...