ಹಾಂಗ್‌ಕಾಂಗ್‌ನಲ್ಲಿ ಬಹುಮಹಡಿ ಕಟ್ಟಡಗಳು ಬೆಂಕಿಗಾಹುತಿಯಾಗಿದ್ದು, ಸುಮಾರು 44 ಮಂದಿ ಸಾವನ್ನಪ್ಪಿದ್ದಾರೆ. ಅವಘಡದಲ್ಲಿ ನೂರಾರು ಮಂದಿ ನಾಪತ್ತೆಯಾಗಿದ್ದಾರೆ. ಬೆಂಕಿ ಇನ್ನೂ ಹೊಗೆಯಾಡುತ್ತಿದೆ. ಸುಮಾರು 2,000 ಅಪಾರ್ಟ್‌ಮೆಂಟ್ ಘಟಕಗಳನ್ನು ಹೊಂದಿರುವ ಎಂಟು ಕಟ್ಟಡಗಳ ಸಂಕೀರ್ಣದಲ್ಲಿ ಬುಧವಾರ ಮಧ್ಯಾಹ್ನ ಅಗ್ನ ಅವಘಡ ಸಂಭವಿಸಿದೆ. ವಿಶ್ವದ ಅತ್ಯಂತ ಜನನಿಬಿಡ ಮತ್ತು ಅತಿ ಎತ್ತರದ ವಸತಿ ಬ್ಲಾಕ್‌ಗಳನ್ನು ಹೊಂದಿರುವ ಪ್ರದೇಶ ಇದಾಗಿದೆ. ಗುರುವಾರ ಬೆಳಿಗ್ಗೆ ಪತ್ರಿಕಾಗೋಷ್ಠಿ ನಡೆಸಿದ ಅಗ್ನಿಶಾಮಕ ಇಲಾಖೆಯು ಸಾವಿನ ಸಂಖ್ಯೆ 36 ರಿಂದ 44 ಕ್ಕೆ ಏರಿದೆ ಎಂದಿದೆ. ಸದ್ಯ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೂವರು ಶಂಕಿತರನ್ನು ಪೊಲೀಸರು ಬಂಧಿಸಿದ್ದಾರೆ. ಆದರೆ ಅವರು ಯಾವ ರೀತಿಯಲ್ಲಿ ಈ ಅವಘಡಕ್ಕೆ ಕಾರಣರಾಗಿದ್ದಾರೆ ಎಂಬ ಬಗ್ಗೆ ಮಾಹಿತಿಯನ್ನು ನೀಡಿಲ್ಲ.




