ಪಾಕಿಸ್ತಾನದ ಪರ ಗೂಢಚಾರಿಕೆ: ಕುಲೇಂದ್ರ ಶರ್ಮ ಬಂಧನ

Date:

ಪಾಕಿಸ್ತಾನದ ಪರ ಗೂಢಚಾರಿಕೆ ಮಾಡಿ ದೇಶದ್ರೋಹ ಎಸಗಿದ ಆರೋಪದಲ್ಲಿ ಐಎಎಫ್‌ನ ನಿವೃತ್ತ ಅಧಿಕಾರಿ ಕುಲೇಂದ್ರ ಶರ್ಮ ಎಂಬಾತನನ್ನು ಅಸ್ಸಾಂನ ತೇಜ್‌ಪುರದಲ್ಲಿ ಬಂಧಿಸಲಾಗಿದೆ. ಇನ್ನೂ ನಾಲ್ವರನ್ನು ಕಳೆದ ಕೆಲವು ದಿನಗಳಲ್ಲಿ ಬಂಧಿಸಲಾಗಿದೆ ಎಂದು ವರದಿಯಾಗಿದೆ. ದೇಶದ ವಿರುದ್ಧ ಯುದ್ಧಕ್ಕೆ ಬೆಂಬಲಿಸುವುದು, ಕ್ರಿಮಿನಲ್ ಪಿತೂರಿ, ದೇಶದ ಸಾರ್ವಭೌಮತ್ವ, ಏಕತೆ ಮತ್ತು ಸಮಗ್ರತೆಗೆ ಅಪಾಯವನ್ನುಂಟುಮಾಡುವುದು ಮತ್ತು ಸಾಕ್ಷ್ಯಗಳನ್ನು ನಾಶಪಡಿಸಿದ್ದಕ್ಕಾಗಿ ಅಸ್ಸಾಂನ ಕುಲೇಂದ್ರ ಶರ್ಮ ವಿರುದ್ಧ ಬಿಎನ್‌ಎಸ್ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ. ಈ ಬಗ್ಗೆ ಮಾಹಿತಿ ನೀಡಿದ ಸೋನಿತ್‌ಪುರ ಜಿಲ್ಲಾ ಡಿಎಸ್‌ಪಿ (ಗಡಿ) ಹರಿಚರಣ್ ಭೂಮಿಜ್, “ಶರ್ಮ ಫೋನ್‌ಗಳು ಮತ್ತು ಲ್ಯಾಪ್‌ಟಾಪ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ. ಶರ್ಮ ಪಾಕಿಸ್ತಾನಿ ಗುಪ್ತಚರ ಸಂಸ್ಥೆಯೊಂದಿಗೆ ಸೂಕ್ಷ್ಮ ರಕ್ಷಣಾ ಸಂಬಂಧಿತ ದಾಖಲೆಗಳು ಮತ್ತು ಮಾಹಿತಿಯನ್ನು ಹಂಚಿಕೊಂಡಿದ್ದಾರೆ ಎಂಬುದು ಫೋನ್ ಮತ್ತು ಲ್ಯಾಪ್‌ಟಾಪ್‌ಗಳನ್ನು ಪರಿಶೀಲಿಸಿದಾಗ ತಿಳಿದುಬಂದಿದೆ. ಸದ್ಯ ಶರ್ಮ ಮಾಹಿತಿ ಹಂಚಿಕೊಂಡವರು ಯಾರು ಎಂಬ ಬಗ್ಗೆ ಗುರುತನ್ನು ಪರಿಶೀಲಿಸಲಾಗುತ್ತಿದೆ” ಎಂದು ಮಾಹಿತಿ ನೀಡಿದ್ದಾರೆ.

    WhatsApp Image 2025 11 17 at 3.21.17 PM
    ಈ ದಿನ ಡೆಸ್ಕ್
    + posts

    ಪೋಸ್ಟ್ ಹಂಚಿಕೊಳ್ಳಿ:

    ಪೋಸ್ಟ್ ಹಂಚಿಕೊಳ್ಳಿ:

    ಈ ಹೊತ್ತಿನ ಪ್ರಮುಖ ಸುದ್ದಿ

    ವಿಡಿಯೋ

    ಇದೇ ರೀತಿಯ ಇನ್ನಷ್ಟು ಲೇಖನಗಳು
    Related

    ಸಂಪುಟ ಪುನರ್‌ರಚನೆಗೆ ಕಾಂಗ್ರೆಸ್‌ ಶಾಸಕರ ಆಗ್ರಹ; ಹೈಕಮಾಂಡ್‌ಗೆ ಪತ್ರ

    ರಾಜ್ಯದಲ್ಲಿ ಮುಖ್ಯಮಂತ್ರಿ ಹುದ್ದೆ ಬದಲಾವಣೆ ಕುರಿತು ಪದೇ-ಪದೇ ಚರ್ಚೆಗಳು ನಡೆಯುತ್ತಿಲೇ ಇವೆ....

    ಮಾಜಿ ರೈಲ್ವೆ ಸಚಿವ ಮುಕುಲ್ ರಾಯ್ ನಿಧನ

    ಮಾಜಿ ರೈಲ್ವೆ ಸಚಿವ, ಈ ಹಿಂದೆ ತೃಣಮೂಲ ಕಾಂಗ್ರೆಸ್‌(ಟಿಎಂಸಿ)ಯ ಎರಡನೇ ಉನ್ನತ...

    ಟ್ರಂಪ್ ಸುಂಕ 15%ಗೆ ಏರಿಕೆ!

    ನಾನಾ ರಾಷ್ಟ್ರಗಳ ಮೇಲೆ ಅಮೆರಿಕ ಅಧ್ಯಕ್ಷ ಟ್ರಂಪ್ ಹೇರಿದ್ದ ಭಾರೀ ಸುಂಕವನ್ನು...

    ಇಂದಿನಿಂದ ಒಂದೆಡೆ ರಂಗೋತ್ಸವ

    ಫೆಬ್ರವರಿ 21 ಮತ್ತು 22ರಂದು ಬೆಂಗಳೂರು ನಗರದ ನ್ಯಾಷನಲ್ ಗ್ಯಾಲರಿ ಆಫ್...