ಮಣಿಪುರದಲ್ಲಿ 2023ರಿಂದ ಆರಂಭವಾಗಿರುವ ಜನಾಂಗೀಯ ಹಿಂಸಾಚಾರ, ಘರ್ಷಣೆ ಇನ್ನೂ ಪೂರ್ಣ ಪ್ರಮಾಣದಲ್ಲಿ ಶಮನವಾಗಿಲ್ಲ. ಹೊಸ ಸರ್ಕಾರ ರಚನೆಯಾದ ಬಳಿಕ ಸರ್ಕಾರ ರಚನೆ ವಿರುದ್ಧವಾಗಿ ಕುಕಿ ಸಮುದಾಯ ಪ್ರತಿಭಟನೆ ನಡೆಸುತ್ತಿದೆ. ಉಖ್ರುಲ್ ಜಿಲ್ಲೆಯಲ್ಲಿ ಭಾನುವಾರ ಸಂಜೆ ಎರಡು ಬುಡಕಟ್ಟು ಗುಂಪುಗಳು ನಡುವೆ ಹಿಂಸಾಚಾರ ನಡೆದಿದ್ದು, ಜಿಲ್ಲಾಡಳಿತವು ಬಿಎನ್‌ಎಸ್‌ಎಸ್‌ನ ಸೆಕ್ಷನ್ 163 ರ ಅಡಿಯಲ್ಲಿ ನಿಷೇಧಾಜ್ಞೆಯನ್ನು ಜಾರಿಗೊಳಿಸಿದೆ. ಉಖ್ರುಲ್‌ನಲ್ಲಿ ಎರಡು ಗುಂಪುಗಳು ಕಲ್ಲು ತೂರಾಟ ನಡೆಸಿದೆ. ಈ ಘಟನೆ ನಡೆಯುತ್ತಿದ್ದಂತೆ ಜಿಲ್ಲೆಯ “ಲಿಟನ್ ಪ್ರದೇಶದಲ್ಲಿ ಶಾಂತಿ ಮತ್ತು ಸಾರ್ವಜನಿಕ ಸಾಮರಸ್ಯಕ್ಕೆ ಭಂಗ ಬರಬಹುದೆಂಬ ಆತಂಕದ ಹಿನ್ನೆಲೆಯಲ್ಲಿ ನಿಷೇಧಾಜ್ಞೆಗಳನ್ನು ಹೊರಡಿಸಲಾಗಿದೆ” ಎಂದು ಉಖ್ರುಲ್ ಜಿಲ್ಲಾ ಮ್ಯಾಜಿಸ್ಟ್ರೇಟ್ ಆಶಿಶ್ ದಾಸ್ ಹೇಳಿದ್ದಾರೆ.




