ಪಾಕಿಸ್ತಾನ ಕ್ರಿಕೆಟ್ ತಂಡವು ತನ್ನ ಸರ್ಕಾರದ ಆದೇಶದ ಮೇರೆಗೆ ಫೆಬ್ರವರಿ 15ರಂದು ಭಾರತ ಕ್ರಿಕೆಟ್ ತಂಡದೊಂದಿಗೆ ಟಿ20 ವಿಶ್ವಕಪ್ ಪಂದ್ಯವನ್ನು ಆಡಲು ನಿರ್ಧರಿಸಿದೆ. ಈ ಹಿಂದೆ ಭೌಗೋಳಿಕ ರಾಜಕೀಯ ಉದ್ವಿಗ್ನತೆಯನ್ನು ಉಲ್ಲೇಖಿಸಿ ಭಾರತದೊಂದಿಗೆ ಪಂದ್ಯವನ್ನು ಬಹಿಷ್ಕರಿಸಿತ್ತು. ಸೋಮವಾರ ಹೇಳಿಕೆಯನ್ನು ಹೊರಡಿಸಿದ್ದು, “ಪಾಕಿಸ್ತಾನ ಸರ್ಕಾರವು 2026ರ ಫೆಬ್ರವರಿ 15ರಂದು ಐಸಿಸಿ ಪುರುಷರ ಟಿ20 ವಿಶ್ವಕಪ್‌ನಲ್ಲಿ ನಿಗದಿತ ಪಂದ್ಯಕ್ಕಾಗಿ ಪಾಕಿಸ್ತಾನ ತಂಡವನ್ನು ಮೈದಾನಕ್ಕೆ ಇಳಿಸಲು ಈ ಮೂಲಕ ಆದೇಶಿಸುತ್ತದೆ” ಎಂದು ತಿಳಿಸಿದೆ. ಕ್ರೀಡಾ ಸ್ಫೂರ್ತಿಯನ್ನು ಎತ್ತಿಹಿಡಿಯಲು ಮತ್ತು ಜಾಗತಿಕ ಕ್ರಿಕೆಟ್‌ಗೆ ಬೆಂಬಲ ನೀಡಲು ಈ ನಿರ್ಧಾರ ಕೈಗೊಂಡಿರುವುದಾಗಿ ಪಾಕಿಸ್ತಾನ ಸರ್ಕಾರ ತಿಳಿಸಿದೆ. ಪಾಕಿಸ್ತಾನ ಕ್ರಿಕೆಟ್ ಮಂಡಳಿ (ಪಿಸಿಬಿ) ಅಧ್ಯಕ್ಷ ಮೊಹ್ಸಿನ್ ನಖ್ವಿ ಅವರು ಪ್ರಧಾನಿ ಶೆಹಬಾಜ್ ಷರೀಫ್ ಅವರನ್ನು ಭೇಟಿ ಮಾಡಿ ಅಂತಾರಾಷ್ಟ್ರೀಯ ಕ್ರಿಕೆಟ್ ಮಂಡಳಿ (ಐಸಿಸಿ) ಮತ್ತು ಬಾಂಗ್ಲಾದೇಶ ಕ್ರಿಕೆಟ್ ಮಂಡಳಿ (ಬಿಸಿಬಿ) ಪ್ರತಿನಿಧಿಗಳೊಂದಿಗೆ ನಡೆಸಿದ ತಮ್ಮ ಸಭೆಯ ಬಗ್ಗೆ ತಿಳಿಸಿದೆ ಕೆಲವೇ ಸಮಯದ ನಂತರ ಪಾಕಿಸ್ತಾನ ಸರ್ಕಾರ ಈ ಪ್ರಕಟಣೆ ಹೊರಡಿಸಿದೆ.

ಪತ್ರಕರ್ತೆ, 2019ರಿಂದ ಪತ್ರಿಕೋದ್ಯಮವೇ ಬದುಕು. ರಾಜಕೀಯ, ಬ್ಯುಜಿನೆಸ್ ಸುದ್ದಿಗಳಲ್ಲಿ ಆಸಕ್ತಿ.




