ಪ್ರಧಾನಿ ನರೇಂದ್ರ ಮೋದಿ ಅವರು ಸುದ್ದಿಸಂಸ್ಥೆ ಪಿಟಿಐ ಜತೆ ನಡೆಸಿದ ಸಂದರ್ಶನವನ್ನು ಕಾಂಗ್ರೆಸ್ ಟೀಕಿಸಿದೆ. “ಇದು ಸಂದರ್ಶನವಲ್ಲ. ಇದು ಎಚ್ಚರಿಕೆಯಿಂದ ಸಿದ್ಧಪಡಿಸಿದ ‘ಸ್ಕ್ರಿಪ್ಟ್’ ಮತ್ತು ಹತಾಶೆಯ ಪಿಆರ್ ಕಸರತ್ತು” ಎಂದು ಹೇಳಿದೆ. ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ಕಾಂಗ್ರೆಸ್ ಸಂವಹನ ಪ್ರಧಾನ ಕಾರ್ಯದರ್ಶಿ ಜೈರಾಮ್ ರಮೇಶ್, “ಅಮೆರಿಕಾದೊಂದಿಗಿನ ವ್ಯಾಪಾರ ಒಪ್ಪಂದದಲ್ಲಿ ಭಾರತ ಶರಣಾಗಿದೆ. ಇದೀಗ ರೈತರ ಸಮಸ್ಯೆಗಳಿಂದ ಜನರ ಗಮನವನ್ನು ಬೇರೆಡೆಗೆ ಸೆಳೆಯಲು ಮೋದಿ ಅವರು ‘ಹೆಡ್‌ಲೈನ್ ಮ್ಯಾನೇಜ್‌ಮೆಂಟ್’ ತಂತ್ರವನ್ನು ಬಳಸುತ್ತಿದ್ದಾರೆ” ಎಂದು ರಮೇಶ್ ಆರೋಪಿಸಿದ್ದಾರೆ.




