ಬೆಂಗಳೂರು ನಗರದ ಹಲವೆಡೆ ಫೆಬ್ರವರಿ 20 (ಶುಕ್ರವಾರ) ಹಾಗೂ 21ರಂದು (ಶನಿವಾರ) ವಿದ್ಯುತ್ ವ್ಯತ್ಯಯವಾಗಲಿದೆ. ಪ್ರಮುಖವಾಗಿ ಹೆಬ್ಬಾಳ ವಿಭಾಗದ ಸಿ-7 ಉಪ ವಿಭಾಗದಲ್ಲಿ ವಿದ್ಯುತ್ ಪೂರೈಕೆ ಸಮಸ್ಯೆ ಉಂಟಾಗಲಿದೆ ಎಂದು ಬೆಸ್ಕಾಂ ಮಾಹಿತಿ ನೀಡಿದೆ. ಶುಕ್ರವಾರ, ಶನಿವಾರ ಬೆಳಿಗ್ಗೆ 10ರಿಂದ ಸಂಜೆ 6 ಗಂಟೆವರೆಗೆ ವಿವಿಧ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಈ ಅವಧಿಗೆ ಪರ್ಯಾಯ ವ್ಯವಸ್ಥೆಯನ್ನು ಮಾಡಿಕೊಳ್ಳುವಂತೆ ಬೆಸ್ಕಾಂ ವಿನಂತಿಸಿದೆ.




