ಮಾಜಿ ರೈಲ್ವೆ ಸಚಿವ, ಈ ಹಿಂದೆ ತೃಣಮೂಲ ಕಾಂಗ್ರೆಸ್(ಟಿಎಂಸಿ)ಯ ಎರಡನೇ ಉನ್ನತ ನಾಯಕ ಎನಿಸಿಕೊಂಡಿದ್ದ, ಈ ಹಿಂದೆ ಪಶ್ಚಿಮ ಬಂಗಾಳದ ‘ರಾಜಕೀಯ ಚಾಣಕ್ಯ’ ಎಂದೇ ಖ್ಯಾತಿ ಪಡೆದಿದ್ದ ಮುಕುಲ್ ರಾಯ್ ನಿಧನರಾಗಿದ್ದಾರೆ. 71 ವರ್ಷದ ಮುಕುಲ್ ರಾಯ್ ಕೋಲ್ಕತ್ತಾದ ಖಾಸಗಿ ಆಸ್ಪತ್ರೆಯಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಬೆಳಗಿನ ಜಾವ 1.30ರ ಸುಮಾರಿಗೆ ಕೊನೆಯುಸಿರೆಳೆದಿದ್ದಾರೆ. “ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದರು. ನಿನ್ನೆ ರಾತ್ರಿ ಸುಮಾರು 1.30ರ ಸುಮಾರಿಗೆ ಅವರಿಗೆ ತೀವ್ರ ಹೃದಯಾಘಾತ ಉಂಟಾಗಿದೆ. ವೈದ್ಯರು ಎಷ್ಟು ಪ್ರಯತ್ನ ಪಟ್ಟರೂ ಅವರನ್ನು ಬದುಕುಳಿಸಲು ಸಾಧ್ಯವಾಗಲಿಲ್ಲ” ಎಂದು ಮುಕುಲ್ ಮಗ ಸುಭ್ರಂಗ್ಶು ರಾಯ್ ಹೇಳಿದ್ದಾರೆ.




