ಅಫ್ಘಾನಿಸ್ತಾನದ ವಿರುದ್ಧ ಯುದ್ಧ ಘೋಷಿಸಿದ ಪಾಕಿಸ್ತಾನ

Date:

ಅಫ್ಘಾನಿಸ್ತಾನದ ತಾಲಿಬಾನ್ ನಡೆಸಿದೆ ಎನ್ನಲಾದ ಗಡಿ ದಾಳಿಗಳಿಗೆ ಪ್ರತಿಯಾಗಿ ಪಾಕಿಸ್ತಾನ ಕಾಬೂಲ್, ಕಂದಹಾರ್ ಮೇಲೆ ಪ್ರತೀಕಾರದ ದಾಳಿ ನಡೆಸಿದ್ದು ಅಫ್ಘಾನಿಸ್ತಾನದ ವಿರುದ್ಧ ಯುದ್ಧ ಘೋಷಿಸಿದೆ. ಹಾಗೆಯೇ ದಾಳಿಯಲ್ಲಿ 130ಕ್ಕೂ ಹೆಚ್ಚು ತಾಲಿಬಾನಿಗಳನ್ನು ಕೊಂದಿದೆ ಎಂದು ಹೇಳಿದೆ. ಪಾಕಿಸ್ತಾನ ರಕ್ಷಣಾ ಸಚಿವ ಖವಾಜಾ ಆಸಿಫ್ ಕಾರ್ಯಾಚರಣೆ ನಡೆಯುತ್ತಿದೆ. ಸಶಸ್ತ್ರ ಪಡೆಗಳು ಪ್ರಸ್ತುತ ಅಫ್ಘಾನ್ ತಾಲಿಬಾನ್‌ನ ಆಕ್ರಮಣಕ್ಕೆ ಬಲವಾದ ಪ್ರತಿಕ್ರಿಯೆ ನೀಡುತ್ತಿವೆ ಎಂದು ಹೇಳಿದರು. ಹಾಗೆಯೇ ತಾಲಿಬಾನ್ ಸರ್ಕಾರದ ಮೇಲೆ “ಮುಕ್ತ ಯುದ್ಧ” ಘೋಷಿಸಿದರು. “ನಮ್ಮ ತಾಳ್ಮೆ ಮಿತಿಯನ್ನು ದಾಟಿದೆ. ಈಗ ಅದು ನಮ್ಮ ಮತ್ತು ನಿಮ್ಮ ನಡುವಿನ ಮುಕ್ತ ಯುದ್ಧ” ಎಂದು ಆಸಿಫ್ X ನಲ್ಲಿ ಪೋಸ್ಟ್ ಮಾಡಿದ್ದಾರೆ. ಇನ್ನು ಮಾಹಿತಿ ಸಚಿವ ಅತ್ತೌಲ್ಲಾ ತರಾರ್ ಕನಿಷ್ಠ 133 ಅಫ್ಘಾನ್ ತಾಲಿಬಾನಿಗಳು ಸಾವನ್ನಪ್ಪಿದ್ದಾರೆ ಮತ್ತು 200 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದಾರೆ. ಕಾಬೂಲ್, ಪಕ್ತಿಯಾ ಮತ್ತು ಕಂದಹಾರ್‌ನಲ್ಲಿರುವ ಅಫ್ಘಾನ್ ತಾಲಿಬಾನ್ ರಕ್ಷಣಾ ಸ್ಥಳಗಳನ್ನು ಗುರಿಯಾಗಿಸಲಾಯಿತು. ಹೆಚ್ಚಿನ ಸಾವುನೋವುಗಳು ಸಂಭವಿಸುವ ಸಾಧ್ಯತೆಯಿದೆ. ಅಫ್ಘಾನ್ ತಾಲಿಬಾನ್ ಆಡಳಿತದ ಕನಿಷ್ಠ 27 ಪೋಸ್ಟ್‌ಗಳು ನಾಶವಾಗಿದೆ. ಒಂಬತ್ತು ಪೋಸ್ಟ್‌ಗಳನ್ನು ವಶಪಡಿಸಿಕೊಳ್ಳಲಾಗಿದೆ” ಎಂದು ಹೇಳಿದರು.

    WhatsApp Image 2025 11 17 at 3.21.17 PM
    ಈ ದಿನ ಡೆಸ್ಕ್
    + posts

    ಪೋಸ್ಟ್ ಹಂಚಿಕೊಳ್ಳಿ:

    ಪೋಸ್ಟ್ ಹಂಚಿಕೊಳ್ಳಿ:

    ಈ ಹೊತ್ತಿನ ಪ್ರಮುಖ ಸುದ್ದಿ

    ವಿಡಿಯೋ

    ಇದೇ ರೀತಿಯ ಇನ್ನಷ್ಟು ಲೇಖನಗಳು
    Related

    ಮಾಜಿ ರೈಲ್ವೆ ಸಚಿವ ಮುಕುಲ್ ರಾಯ್ ನಿಧನ

    ಮಾಜಿ ರೈಲ್ವೆ ಸಚಿವ, ಈ ಹಿಂದೆ ತೃಣಮೂಲ ಕಾಂಗ್ರೆಸ್‌(ಟಿಎಂಸಿ)ಯ ಎರಡನೇ ಉನ್ನತ...

    ಟ್ರಂಪ್ ಸುಂಕ 15%ಗೆ ಏರಿಕೆ!

    ನಾನಾ ರಾಷ್ಟ್ರಗಳ ಮೇಲೆ ಅಮೆರಿಕ ಅಧ್ಯಕ್ಷ ಟ್ರಂಪ್ ಹೇರಿದ್ದ ಭಾರೀ ಸುಂಕವನ್ನು...

    ಇಂದಿನಿಂದ ಒಂದೆಡೆ ರಂಗೋತ್ಸವ

    ಫೆಬ್ರವರಿ 21 ಮತ್ತು 22ರಂದು ಬೆಂಗಳೂರು ನಗರದ ನ್ಯಾಷನಲ್ ಗ್ಯಾಲರಿ ಆಫ್...

    ಬೆಂಗಳೂರಿನಲ್ಲಿ ವಿದ್ಯುತ್ ವ್ಯತ್ಯಯ

    ಬೆಂಗಳೂರು ನಗರದ ಹಲವೆಡೆ ಫೆಬ್ರವರಿ 20 (ಶುಕ್ರವಾರ) ಹಾಗೂ 21ರಂದು (ಶನಿವಾರ)...