ತೇಜಸ್ವಿ ಯಾದವ್‌ರ ಎರಡನೇ ಮತದಾರರ ಗುರುತಿನ ಚೀಟಿ ನಕಲಿ ಎಂದ ಚುನಾವಣಾ ಆಯೋಗ

Date:

ಬಿಹಾರ ವಿಧಾನಸಭೆಯ ವಿಪಕ್ಷ ನಾಯಕ ತೇಜಸ್ವಿ ಪ್ರಸಾದ್ ಯಾದವ್ ಅವರು ಪತ್ರಿಕಾಗೋಷ್ಠಿಯಲ್ಲಿ ಪ್ರದರ್ಶಿಸಿದ ಮತದಾರರ ಗುರುತಿನ ಚೀಟಿ ಸಂಖ್ಯೆ ನಕಲಿ ಎಂದು ಭಾರತೀಯ ಚುನಾವಣಾ ಆಯೋಗ (ಇಸಿಐ) ಘೋಷಿಸಿದೆ. ಹಾಗೆಯೇ 2025ರ ಆಗಸ್ಟ್ 16ರ ಸಂಜೆ ಐದು ಗಂಟೆಯೊಳಗೆ ಪರಿಶೀಲನೆಗಾಗಿ ತಮ್ಮ ಮೂಲ ಮತದಾರರ ಫೋಟೋ ಗುರುತಿನ ಚೀಟಿ (EPIC) ಯನ್ನು ಸಲ್ಲಿಸುವಂತೆ ಇಸಿಐ ತಿಳಿಸಿದೆ. ಈ ಸಂಬಂಧ ಪಟನಾ ಸದರ್‌ನ ಉಪ-ವಿಭಾಗಾಧಿಕಾರಿ (ಎಸ್‌ಡಿಒ) ಆಗಿರುವ ದಿಘಾ ವಿಧಾನಸಭಾ ಕ್ಷೇತ್ರದ ಚುನಾವಣಾ ನೋಂದಣಿ ಅಧಿಕಾರಿ (ಇಆರ್‌ಒ) ತೇಜಸ್ವಿಗೆ ನೋಟಿಸ್ ನೀಡಿದ್ದಾರೆ. ತೇಜಸ್ವಿ ಯಾದವ್ ಪತ್ರಿಕಾಗೋಷ್ಠಿಯಲ್ಲಿ ತೋರಿಸಿದ EPIC ಸಂಖ್ಯೆ – RAB2916120 – ಚುನಾವಣಾ ಆಯೋಗದ ಡೇಟಾಬೇಸ್‌ ಜೊತೆ ಹೊಂದಿಕೆಯಾಗದ ಕಾರಣ ಆ ಮತದಾರರ ಗುರುತಿನ ಚೀಟಿ ನಕಲಿ, ಅನಧಿಕೃತ ಎಂದು ಇಆರ್‌ಒ ಹೇಳಿದ್ದಾರೆ.

    WhatsApp Image 2025 11 17 at 3.21.17 PM
    ಈ ದಿನ ಡೆಸ್ಕ್
    + posts

    ಪೋಸ್ಟ್ ಹಂಚಿಕೊಳ್ಳಿ:

    ಪೋಸ್ಟ್ ಹಂಚಿಕೊಳ್ಳಿ:

    ಈ ಹೊತ್ತಿನ ಪ್ರಮುಖ ಸುದ್ದಿ

    ವಿಡಿಯೋ

    ಇದೇ ರೀತಿಯ ಇನ್ನಷ್ಟು ಲೇಖನಗಳು
    Related

    ಸಂಪುಟ ಪುನರ್‌ರಚನೆಗೆ ಕಾಂಗ್ರೆಸ್‌ ಶಾಸಕರ ಆಗ್ರಹ; ಹೈಕಮಾಂಡ್‌ಗೆ ಪತ್ರ

    ರಾಜ್ಯದಲ್ಲಿ ಮುಖ್ಯಮಂತ್ರಿ ಹುದ್ದೆ ಬದಲಾವಣೆ ಕುರಿತು ಪದೇ-ಪದೇ ಚರ್ಚೆಗಳು ನಡೆಯುತ್ತಿಲೇ ಇವೆ....

    ಮಾಜಿ ರೈಲ್ವೆ ಸಚಿವ ಮುಕುಲ್ ರಾಯ್ ನಿಧನ

    ಮಾಜಿ ರೈಲ್ವೆ ಸಚಿವ, ಈ ಹಿಂದೆ ತೃಣಮೂಲ ಕಾಂಗ್ರೆಸ್‌(ಟಿಎಂಸಿ)ಯ ಎರಡನೇ ಉನ್ನತ...

    ಟ್ರಂಪ್ ಸುಂಕ 15%ಗೆ ಏರಿಕೆ!

    ನಾನಾ ರಾಷ್ಟ್ರಗಳ ಮೇಲೆ ಅಮೆರಿಕ ಅಧ್ಯಕ್ಷ ಟ್ರಂಪ್ ಹೇರಿದ್ದ ಭಾರೀ ಸುಂಕವನ್ನು...

    ಇಂದಿನಿಂದ ಒಂದೆಡೆ ರಂಗೋತ್ಸವ

    ಫೆಬ್ರವರಿ 21 ಮತ್ತು 22ರಂದು ಬೆಂಗಳೂರು ನಗರದ ನ್ಯಾಷನಲ್ ಗ್ಯಾಲರಿ ಆಫ್...