ಜಮ್ಮು ಕಾಶ್ಮೀರದಲ್ಲಿ ಮತ್ತೆ ಮೇಘಸ್ಫೋಟ ಸಂಭವಿಸಿದೆ. ರಂಬನ್ ಜಿಲ್ಲೆಯ ದೂರದ ಹಳ್ಳಿಯಲ್ಲಿ ಮೇಘಸ್ಫೋಟವಾಗಿದ್ದು ಮೂವರು ಪ್ರಾಣ ಕಳೆದುಕೊಂಡಿದ್ದಾರೆ. ಇಬ್ಬರು ಕಾಣೆಯಾಗಿದ್ದಾರೆ ಎಂದು ಅಧಿಕಾರಿಗಳು ಶನಿವಾರ ತಿಳಿಸಿದ್ದಾರೆ. ಜಿಲ್ಲಾ ಕೇಂದ್ರದಿಂದ ಸುಮಾರು 25 ಕಿಲೋಮೀಟರ್ ದೂರದಲ್ಲಿರುವ ಪರ್ವತ ಗ್ರಾಮವಾದ ರಾಜ್‌ಗಢದಲ್ಲಿ ಬೆಳಗಿನ ಜಾವ ಮೇಘಸ್ಫೋಟ ಸಂಭವಿಸಿದೆ. ಇದರಿಂದಾಗಿ ಹಠಾತ್ ಪ್ರವಾಹ ಉಂಟಾಗಿ ಹಲವಾರು ಮಂದಿ ಸಾವನ್ನಪ್ಪಿದರು.




