ನಟ ಧ್ರುವ ಸರ್ಜಾಗೆ ಮುಂಬೈ ಕೋರ್ಟ್‌ನಿಂದ ತಾತ್ಕಾಲಿಕ ರಿಲೀಫ್

Date:

ಸ್ಯಾಂಡಲ್‌ವುಡ್ ನಟ ಧ್ರುವ ಸರ್ಜಾ ವಿರುದ್ಧ ದಾಖಲಾಗಿದ್ದ ವಂಚನೆ ಪ್ರಕರಣ ಸಂಬಂಧ ಕೋರ್ಟ್ ನಟನಿಗೆ ತಾತ್ಕಾಲಿಕ ರಿಲೀಪ್ ನೀಡಿದೆ.

ಧ್ರುವ ಸರ್ಜಾ ಅವರು, ಸಿನಿಮಾ ಮಾಡಿಕೊಡುವುದಾಗಿ ಹೇಳಿ 3.10 ಕೋಟಿ ರೂಪಾಯಿ ಹಣ ಪಡೆದು, ಸಿನಿಮಾ ಮಾಡಲು ಡೇಟ್ಸ್ ನೀಡದೆ ವಂಚನೆ ಮಾಡಿದ್ದಾರೆ ಎಂದು ರಾಘವೇಂದ್ರ ಹೆಗಡೆ ಎಂಬುವರು ಮುಂಬೈನ ಅಂಬೋಲಿ ಪೊಲೀಸ್ ಠಾಣೆಯಲ್ಲಿ ಆ‌ಗಸ್ಟ್‌ನಲ್ಲಿ ದೂರು ದಾಖಲಿಸಿದ್ದರು. ದೂರಿನ ಆಧಾರದಲ್ಲಿ ಪೊಲೀಸರು ಧ್ರುವ ಸರ್ಜಾ ವಿರುದ್ಧ ಎಫ್​​ಐಆರ್ ದಾಖಲಾಗಿತ್ತು.

ಧ್ರುವ ಸರ್ಜಾ ಅವರ ವಕೀಲರು ಈ ಸಂಬಂಧ ಬಾಂಬೆ ಹೈಕೋರ್ಟ್ ಮೆಟ್ಟಿಲೇರಿದ್ದರು. ವಿಚಾರಣೆ ನಡೆಸಿರುವ ನ್ಯಾಯಾಲಯ ಧ್ರುವ ಸರ್ಜಾ ವಿರುದ್ಧ ಆರೋಪ ಪಟ್ಟಿ ಸಲ್ಲಿಸದಂತೆ ಪೊಲೀಸರಿಗೆ ಸೂಚನೆ ನೀಡಿದೆ. ಈ ಪ್ರಕರಣ ಸಿವಿಲ್ ಮೊಕದ್ದಮೆಯಾಗಿದೆ, ಪೊಲೀಸರು ಇದನ್ನು ಕ್ರಿಮಿನಲ್ ಪ್ರಕರಣವಾಗಿ ದಾಖಲು ಮಾಡಿದ್ದಾರೆ ಎಂದು ಕೋರ್ಟ್ ಹೇಳಿದೆ. ಆ ಮೂಲಕ ಸದ್ಯದ ಮಟ್ಟಿಗೆ ಧ್ರುವ ಸರ್ಜಾ ಅವರು ವಿಚಾರಣೆಯಿಂದ ತಪ್ಪಿಸಿಕೊಂಡಂತಾಗಿದೆ.

    eedina
    ಈ ದಿನ ಡೆಸ್ಕ್‌
    Website |  + posts

    ಪೋಸ್ಟ್ ಹಂಚಿಕೊಳ್ಳಿ:

    ಪೋಸ್ಟ್ ಹಂಚಿಕೊಳ್ಳಿ:

    ಈ ಹೊತ್ತಿನ ಪ್ರಮುಖ ಸುದ್ದಿ

    ವಿಡಿಯೋ

    ಇದೇ ರೀತಿಯ ಇನ್ನಷ್ಟು ಲೇಖನಗಳು
    Related

    ಸಂಪುಟ ಪುನರ್‌ರಚನೆಗೆ ಕಾಂಗ್ರೆಸ್‌ ಶಾಸಕರ ಆಗ್ರಹ; ಹೈಕಮಾಂಡ್‌ಗೆ ಪತ್ರ

    ರಾಜ್ಯದಲ್ಲಿ ಮುಖ್ಯಮಂತ್ರಿ ಹುದ್ದೆ ಬದಲಾವಣೆ ಕುರಿತು ಪದೇ-ಪದೇ ಚರ್ಚೆಗಳು ನಡೆಯುತ್ತಿಲೇ ಇವೆ....

    ಮಾಜಿ ರೈಲ್ವೆ ಸಚಿವ ಮುಕುಲ್ ರಾಯ್ ನಿಧನ

    ಮಾಜಿ ರೈಲ್ವೆ ಸಚಿವ, ಈ ಹಿಂದೆ ತೃಣಮೂಲ ಕಾಂಗ್ರೆಸ್‌(ಟಿಎಂಸಿ)ಯ ಎರಡನೇ ಉನ್ನತ...

    ಟ್ರಂಪ್ ಸುಂಕ 15%ಗೆ ಏರಿಕೆ!

    ನಾನಾ ರಾಷ್ಟ್ರಗಳ ಮೇಲೆ ಅಮೆರಿಕ ಅಧ್ಯಕ್ಷ ಟ್ರಂಪ್ ಹೇರಿದ್ದ ಭಾರೀ ಸುಂಕವನ್ನು...

    ಇಂದಿನಿಂದ ಒಂದೆಡೆ ರಂಗೋತ್ಸವ

    ಫೆಬ್ರವರಿ 21 ಮತ್ತು 22ರಂದು ಬೆಂಗಳೂರು ನಗರದ ನ್ಯಾಷನಲ್ ಗ್ಯಾಲರಿ ಆಫ್...