ಮದ್ದೂರು | ಸಂಘಪರಿವಾರದ ಕಾರ್ಯಕರ್ತರಿಂದ ಪ್ರತಿಭಟನೆ, ಮತ್ತೆ ಕಲ್ಲು ತೂರಾಟ

Date:

ಮಂಡ್ಯ ಜಿಲ್ಲೆಯ ಮದ್ದೂರಿನಲ್ಲಿ ಭಾನುವಾರ ರಾತ್ರಿ ಗಣೇಶ ಮುರ್ತಿ ವಿಸರ್ಜನಾ ಮೆರವಣಿಗೆ ವೇಳೆ ನಡೆದ ಕಲ್ಲು ತೂರಾಟ ಘಟನೆ ಖಂಡಿಸಿ ಸೋಮವಾರ ಬಿಜೆಪಿ, ಬಜರಂಗದಳ ಹಾಗೂ ಸಂಘಪರಿವಾರದ ಕಾರ್ಯಕರ್ತರು ಮದ್ದೂರು ಪಟ್ಟಣದಲ್ಲಿ ಬೃಹತ್ ಪ್ರತಿಭಟನಾ ಮೆರವಣಿಗೆ ನಡೆಸಿದರು.

ಕೋಟೆ ಬೀದಿಯ ಉಗ್ರನರಸಿಂಹಸ್ವಾಮಿ ದೇವಸ್ಥಾನದ ಆವರಣದಿಂದ ಮೆರವಣಿಗೆ ಸಾಗಿತು. ಸಾವಿರಾರು ಸಂಘಪರಿವಾರದ ಕಾರ್ಯಕರ್ತರು ಭಾಗವಹಿಸಿ ರಾಜ್ಯ ಸರ್ಕಾರದ ವಿರುದ್ಧ ಹರಿಹಾಯ್ದರು. ಕೆಮ್ಮಣ್ಣು ನಾಲೆ ವೃತ್ತದ ಮಸೀದಿ ಬಳಿ ಮೆರವಣಿಗೆ ಆಗಮಿಸುತ್ತಿದ್ದಂತೆ ಬಿಗುವಿನ ವಾತಾವರಣ ಏರ್ಪಟ್ಟಿತು.

ಪ್ರತಿಭಟನೆಯಲ್ಲಿ ಭಾಗವಹಿಸಿದ್ದ ಕೆಲವು ಕಿಡಿಗೇಡಿಗಳು ಮಸೀದಿಯತ್ತ ಕಲ್ಲು ತೂರಾಟ ನಡೆಸಿದರು. ಈ ವೇಳೆ ಪೊಲೀಸರು ಲಘು ಲಾಠಿ ಪ್ರಹಾರ ನಡೆಸಿ, ಕಾರ್ಯಕರ್ತರನ್ನು ಚದುರಿಸಿದರು. ನಂತರ ಪರಿಸ್ಥಿತಿ ಸ್ವಲ್ಪ ನಿಯಂತ್ರಣಕ್ಕೆ ಬಂದಿದೆ.

    eedina
    ಈ ದಿನ ಡೆಸ್ಕ್‌
    Website |  + posts

    ಪೋಸ್ಟ್ ಹಂಚಿಕೊಳ್ಳಿ:

    ಪೋಸ್ಟ್ ಹಂಚಿಕೊಳ್ಳಿ:

    ಈ ಹೊತ್ತಿನ ಪ್ರಮುಖ ಸುದ್ದಿ

    ವಿಡಿಯೋ

    ಇದೇ ರೀತಿಯ ಇನ್ನಷ್ಟು ಲೇಖನಗಳು
    Related

    ಸಂಪುಟ ಪುನರ್‌ರಚನೆಗೆ ಕಾಂಗ್ರೆಸ್‌ ಶಾಸಕರ ಆಗ್ರಹ; ಹೈಕಮಾಂಡ್‌ಗೆ ಪತ್ರ

    ರಾಜ್ಯದಲ್ಲಿ ಮುಖ್ಯಮಂತ್ರಿ ಹುದ್ದೆ ಬದಲಾವಣೆ ಕುರಿತು ಪದೇ-ಪದೇ ಚರ್ಚೆಗಳು ನಡೆಯುತ್ತಿಲೇ ಇವೆ....

    ಮಾಜಿ ರೈಲ್ವೆ ಸಚಿವ ಮುಕುಲ್ ರಾಯ್ ನಿಧನ

    ಮಾಜಿ ರೈಲ್ವೆ ಸಚಿವ, ಈ ಹಿಂದೆ ತೃಣಮೂಲ ಕಾಂಗ್ರೆಸ್‌(ಟಿಎಂಸಿ)ಯ ಎರಡನೇ ಉನ್ನತ...

    ಟ್ರಂಪ್ ಸುಂಕ 15%ಗೆ ಏರಿಕೆ!

    ನಾನಾ ರಾಷ್ಟ್ರಗಳ ಮೇಲೆ ಅಮೆರಿಕ ಅಧ್ಯಕ್ಷ ಟ್ರಂಪ್ ಹೇರಿದ್ದ ಭಾರೀ ಸುಂಕವನ್ನು...

    ಇಂದಿನಿಂದ ಒಂದೆಡೆ ರಂಗೋತ್ಸವ

    ಫೆಬ್ರವರಿ 21 ಮತ್ತು 22ರಂದು ಬೆಂಗಳೂರು ನಗರದ ನ್ಯಾಷನಲ್ ಗ್ಯಾಲರಿ ಆಫ್...