ಸೆಪ್ಟೆಂಬರ್ 9 ರಿಂದ ಯುಎಇಯಲ್ಲಿ ಟಿ-20 ಏಷ್ಯಾಕಪ್ ಶುರುವಾಗಲಿದ್ದು, ಟೂರ್ನಿಗೆ ಎಲ್ಲ ತಂಡಗಳು ಈಗಾಗಲೇ ಅಂತಿಮ ಹಂತದ ಸಿದ್ಧತೆ ನಡೆಸಿವೆ.
ಟೀಂ ಇಂಡಿಯಾ ಕೂಡ ತರಬೇತಿಯಲ್ಲಿ ನಿರತವಾಗಿದ್ದು, ಈ ನಡುವೆ ಮತ್ತೊಂದು ಸರಣಿಗಾಗಿ ಭಾರತ ಎ ತಂಡವನ್ನು ಇಂದು ಬಿಸಿಸಿಐ ಪ್ರಕಟಿಸಿದೆ. ಭಾರತ ಎ ತಂಡ ಆಸ್ಟ್ರೇಲಿಯಾ ಎ ವಿರುದ್ಧ ಇದೇ ಸೆಪ್ಟೆಂಬರ್ 16 ರಿಂದ ನಾಲ್ಕು ದಿನಗಳ 2 ಪಂದ್ಯಗಳನ್ನು ಆಡಲಿದೆ.
ಈ ಸರಣಿಯಲ್ಲಿ ಭಾರತ ತಂಡವನ್ನು ಶ್ರೇಯಸ್ ಅಯ್ಯರ್ ಮುನ್ನಡೆಸಲಿದ್ದಾರೆ. ಹಾಗೆಯೇ ವಿಕೆಟ್ ಕೀಪರ್ ಬ್ಯಾಟ್ಸ್‌ಮನ್ ಧ್ರುವ್ ಜುರೆಲ್ ಅವರಿಗೆ ಉಪನಾಯಕತ್ವದ ಜವಾಬ್ದಾರಿಯನ್ನು ನೀಡಲಾಗಿದೆ.
ಭಾರತ-ಎ ತಂಡ: ಶ್ರೇಯಸ್ ಅಯ್ಯರ್ (ನಾಯಕ), ಅಭಿಮನ್ಯು ಈಶ್ವರನ್, ನಾರಾಯಣ್ ಜಗದೀಸನ್ (ವಿಕೆಟ್ ಕೀಪರ್), ಸಾಯಿ ಸುದರ್ಶನ್, ಧ್ರುವ್ ಜುರೆಲ್ (ಉಪನಾಯಕ ಮತ್ತು ವಿಕೆಟ್ ಕೀಪರ್), ದೇವದತ್ ಪಡಿಕ್ಕಲ್, ಹರ್ಷ್ ದುಬೆ, ಆಯುಷ್ ಬಡೋನಿ, ನಿತೀಶ್ ಕುಮಾರ್ ರೆಡ್ಡಿ, ತನುಷ್ ಕೋಟ್ಯಾನ್, ಕೆ. ಸುತಾರ್, ಯಶ್ ಠಾಕೂರ್.





