ಆನ್‌ಲೈನ್ ಮನಿ ಗೇಮ್ಸ್ ಹೆಸರಿನಲ್ಲಿ ಅಕ್ರಮ ಹಣ ವರ್ಗಾವಣೆ ಮಾಡಿದ ಮತ್ತು ಅಕ್ರಮವಾಗಿ ಆನ್‌ಲೈನ್ ಬೆಟ್ಟಿಂಗ್ ಕಂಪನಿ ನಡೆಸುತ್ತಿದ್ದ ಆರೋಪದಲ್ಲಿ ಬಂಧನಕ್ಕೊಳಗಾಗಿರುವ ಕಾಂಗ್ರೆಸ್ ಶಾಸಕ ವೀರೇಂದ್ರ ಪಪ್ಪಿಯನ್ನು ಗುರುವಾರ ಜಾರಿ ನಿರ್ದೇಶನಾಲಯ ಅಧಿಕಾರಿಗಳು ನ್ಯಾಯಾಲಯಕ್ಕೆ ಹಾಜರುಪಡಿಸಿದರು.
ಕಸ್ಟಡಿ ಅವಧಿ ಅಂತ್ಯಗೊಂಡ ಕಾರಣ ಬೆಂಗಳೂರಿನ ಶಾಂತಿ ನಗರದಲ್ಲಿರುವ ಇಡಿ ಕಚೇರಿಯಿಂದ ಅವರನ್ನು ಕೋರ್ಟ್ಗೆ ಕರೆದೊಯ್ಯಲಾಯಿತು. ಆಗಸ್ಟ್ 22ರ ಬೆಳ್ಳಂಬೆಳಗ್ಗೆಯೇ ಜಾರಿ ನಿರ್ದೇಶನಾಲಯ ಅಧಿಕಾರಿಗಳು ವೀರೇಂದ್ರ ಪಪ್ಪಿ ಮನೆಗಳ ಮೇಲೆ ದಾಳಿ ನಡೆಸಿದ್ದರು. ನಂತರ ಸಿಕ್ಕಿಂನಿಂದ ಅವರನ್ನು ಬಂಧಿಸಲಾಗಿತ್ತು.




