ಮುಂಬರುವ ಲೋಕಸಭೆ ಚುನಾವಣೆಗೆ ಬಿಜೆಪಿಯು ಭಾನುವಾರ ಅಭ್ಯರ್ಥಿಗಳ 5ನೇ ಪಟ್ಟಿಯನ್ನು ಬಿಡುಗಡೆ ಮಾಡಿದ್ದು, ಇದರಲ್ಲಿ ಕರ್ನಾಟಕದಲ್ಲಿ ಬಾಕಿ ಇರಿಸಿದ್ದ ಐದು ಕ್ಷೇತ್ರಗಳ ಪೈಕಿ ನಾಲ್ಕು ಕ್ಷೇತ್ರದ ಅಭ್ಯರ್ಥಿಗಳ ಹೆಸರನ್ನು ಘೋಷಿಸಿದೆ.
ಉತ್ತರ ಕನ್ನಡ ಲೋಕಸಭಾ ಕ್ಷೇತ್ರದಿಂದ ಟಿಕೆಟ್ ಗಿಟ್ಟಿಸಲು ಭಾರೀ ಪ್ರಯತ್ನ ನಡೆಸಿದ್ದ ಆರು ಬಾರಿಯ ಸಂಸದ ಹಾಗೂ ವಿವಾದಾತ್ಮಕ ಬಿಜೆಪಿಯ ಮುಖಂಡ ಅನಂತ್ ಕುಮಾರ್ ಹೆಗಡೆಯವರಿಗೆ ಟಿಕೆಟ್ ನೀಡಲು ನಿರಾಕರಿಸಿದೆ. ಆ ಮೂಲಕ ದ್ವೇಷ ಭಾಷಣದ ಮೂಲಕವೇ ಸುದ್ದಿಯಾಗುತ್ತಿದ್ದ ಮುಖಂಡನಿಗೆ ಭಾರೀ ಶಾಕ್ ನೀಡಿದೆ. ಅನಂತ್‌ಕುಮಾರ್ ಹೆಗಡೆಯ ಬದಲಿಗೆ ಮಾಜಿ ವಿಧಾನಸಭಾ ಸ್ಪೀಕರ್ ವಿಶ್ವೇಶ್ವರ ಹೆಗಡೆ ಕಾಗೇರಿ ಅವರಿಗೆ ಟಿಕೆಟ್ ನೀಡಿದೆ.
BJP releases 5th list of candidates for the upcoming Lok Sabha elections.
Nityanand Rai to contest from Ujiarpur.
Giriraj Singh from Begusarai.
Ravi Shankar Prasad from Patna Sahib.
Kangana Ranaut from Mandi.
Naveen Jindal from Kurukshetra.
Sita Soren from Dumka.
Jagadish… pic.twitter.com/xQOR2BDpA0— ANI (@ANI) March 24, 2024
ಉಳಿದಂತೆ ಬೆಳಗಾವಿ ಲೋಕಸಭಾ ಕ್ಷೇತ್ರದ ಟಿಕೆಟ್ ಅನ್ನು ಪಡೆಯುವಲ್ಲಿ ಕಾಂಗ್ರೆಸ್‌ಗೆ ‘ಕೈ’ ಕೊಟ್ಟು ದಿಢೀರನೆ ಬಿಜೆಪಿ ಸೇರುವ ಮೂಲಕ ಘರ್ ವಾಪ್ಸಿ ಆಗಿದ್ದ ಮಾಜಿ ಮುಖ್ಯಮಂತ್ರಿ ಜಗದೀಶ್ ಶೆಟ್ಟರ್ ಅವರು ಕೊನೆಗೂ ಯಶಸ್ವಿಯಾಗಿದ್ದಾರೆ.
ಚಿಕ್ಕಬಳ್ಳಾಪುರದಿಂದ ನಿರೀಕ್ಷೆಯಂತೆಯೇ ಮಾಜಿ ಸಚಿವ ಕೆ ಸುಧಾಕರ್ ಹಾಗೂ ರಾಯಚೂರಿನಿಂದ ರಾಜಾ ಅಮರೇಶ್ವರ್ ನಾಯಕ ಅವರು ಟಿಕೆಟ್ ಪಡೆದುಕೊಂಡಿದ್ದಾರೆ.
ಚಿತ್ರದುರ್ಗ ಬಿಜೆಪಿ ಟಿಕೆಟ್ ‘ಪೆಂಡಿಂಗ್’:
ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಟಿಕೆಟ್ ಯಾರಿಗೆ ನೀಡಬೇಕು ಎಂಬ ಗೊಂದಲ ಇನ್ನೂ ಮುಂದುವರಿದೆ. ರಘುಚಂದನ್ ಹಾಗೂ ಗೋವಿಂದ ಕಾರಜೋಳ ನಡುವೆ ಟಿಕೆಟ್ಗಾಗಿ ಭಾರೀ ಕಸರತ್ತು ನಡೆಯುತ್ತಿದೆ. ಆದರೆ, ಕಾರಜೋಳ ಅವರಿಗೆ ಟಿಕೆಟ್ ನೀಡದಂತೆ ಸ್ಥಳೀಯರು ವಿರೋಧ ವ್ಯಕ್ತಪಡಿಸುತ್ತಿದ್ದಾರೆ. ಸದ್ಯ, ರಾಜ್ಯ ನಾಯಕರೊಂದಿಗೆ ಮತ್ತೊಮ್ಮೆ ಚರ್ಚಿಸಿ ಟಿಕೆಟ್ ಘೋಷಿಸಲು ಹೈಕಮಾಂಡ್ ನಿರ್ಧರಿಸಿರುವುದಾಗಿ ತಿಳಿದುಬಂದಿದೆ.





