ಲೋಕಸಭೆ ಚುನಾವಣೆ | ಬಿಎಸ್‌ವೈ ಕುಟುಂಬದ ವಿರುದ್ಧ ಅಖಾಡಕ್ಕಿಳಿದ ಈಶ್ವರಪ್ಪ

Date:

ಕರ್ನಾಟಕದ ಬಿಜೆಪಿಯಲ್ಲಿ ಬಂಡಾಯ ಆರಂಭವಾಗಿದ್ದು, ಮುಂಬರುವ ಲೋಕಸಭೆ ಚುನಾವಣೆಯಲ್ಲಿ ಶಿವಮೊಗ್ಗ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುವುದಾಗಿ ಬಿಜೆಪಿಯ ಹಿರಿಯ ನಾಯಕ ಕೆಎಸ್ ಈಶ್ವರಪ್ಪ ಶುಕ್ರವಾರ ಘೋಷಿಸಿದ್ದಾರೆ.

“ಬಿಎಸ್ ಯಡಿಯೂರಪ್ಪ ಅವರು ತಮ್ಮ ಪುತ್ರ ಕೆಇ ಕಾಂತೇಶ್‌ಗೆ ಪಕ್ಷದ ಅಭ್ಯರ್ಥಿಯಾಗದಂತೆ ಟಿಕೆಟ್ ತಪ್ಪಿಸಿದ್ದಾರೆ” ಎಂದು ಆರೋಪಿಸಿದ ಈಶ್ವರಪ್ಪ, ಮಾಜಿ ಸಿಎಂ ಬಸವರಾಜ್ ಬೊಮ್ಮಾಯಿ ಕೂಡಾ ತನಗೆ ಮೋಸ ಮಾಡಿರುವುದಾಗಿ ಆರೋಪಿಸಿದ್ದಾರೆ.

ಹಾವೇರಿ ಕ್ಷೇತ್ರದಿಂದ ಬಿಜೆಪಿಯಿಂದ ಕಣಕ್ಕಿಳಿದಿರುವ ಬೊಮ್ಮಾಯಿ ಆರೋಪವನ್ನು ಅಲ್ಲಗಳೆದಿದ್ದು, ಯಾವ ನಾಯಕರಿಗೆ ಟಿಕೆಟ್ ನೀಡಬೇಕೆಂಬುದನ್ನು ಪಕ್ಷದ ಹೈಕಮಾಂಡ್ ನಿರ್ಧರಿಸಿದೆ ಎಂದು ಪ್ರತಿಪಾದಿಸಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಶಿವಮೊಗ್ಗದಿಂದ ಪಕ್ಷೇತರ ಸ್ಪರ್ಧೆ

“ಶಿವಮೊಗ್ಗ ಲೋಕಸಭಾ ಕ್ಷೇತ್ರದಿಂದ ಸ್ವತಂತ್ರ ಅಭ್ಯರ್ಥಿಯಾಗಿ ನಾನು ಸ್ಪರ್ಧಿಸುತ್ತೇನೆ” ಎಂದು ತಮ್ಮ ಬೆಂಬಲಿಗರು ಕರೆದಿದ್ದ ಸಭೆಯಲ್ಲಿ ಹೇಳಿರುವ ಈಶ್ವರಪ್ಪ ಈ ಮೂಲಕ ಬಿಜೆಪಿ ವಿರುದ್ಧ ಬಂಡಾಯವನ್ನು ಘೋಷಿಸಿದ್ದಾರೆ.

“ಪಕ್ಷವು ನನಗೆ ನೋಟಿಸ್ ನೀಡಬಹುದು ಅಥವಾ ನನ್ನನ್ನು ಹೊರಹಾಕಬಹುದು. ಎರಡು ತಿಂಗಳೊಳಗೆ ನಾನು ಗೆದ್ದರೆ, ನನ್ನ ಬೆಂಬಲಿಗರು ನನ್ನ ತಾಯಿಯಾದ ಬಿಜೆಪಿ ಪಾದ ಸೇರುತ್ತಾರೆ ಎಂದು ನನಗೆ ವಿಶ್ವಾಸವಿದೆ. ಪಕ್ಷದ ಭವಿಷ್ಯ, ಅದರ ಸಿದ್ಧಾಂತವನ್ನು ಉಳಿಸಲು ನಮ್ಮ ಹೋರಾಟ” ಎಂದು ಹೇಳಿದರು.

ಯಡಿಯೂರಪ್ಪ ಅವರ ಪುತ್ರ ಮತ್ತು ಹಾಲಿ ಸಂಸದ ಬಿವೈ ರಾಘವೇಂದ್ರ ಶಿವಮೊಗ್ಗದಿಂದ ಬಿಜೆಪಿ ಅಭ್ಯರ್ಥಿಯಾಗಿದ್ದು, ಕಾಂಗ್ರೆಸ್ ಮಾಜಿ ಮುಖ್ಯಮಂತ್ರಿ ಎಸ್ ಬಂಗಾರಪ್ಪ ಅವರ ಪುತ್ರಿ, ನಟ ಶಿವರಾಜಕುಮಾರ್‌ರ ಪತ್ನಿ ಗೀತಾ ಶಿವರಾಜ್‌ಕುಮಾರ್‌ರನ್ನು ಕಣಕ್ಕಿಳಿಸಿದ್ದಾರೆ.

ನರೇಂದ್ರ ಮೋದಿಗಾಗಿ ಮಿಡಿಯುತ್ತಿರುವ ನನ್ನ ಹೃದಯ

ಈಶ್ವರಪ್ಪ ಪ್ರಧಾನಿ ನರೇಂದ್ರ ಮೋದಿಯನ್ನು ವಿರೋಧಿಸುವುದಿಲ್ಲ ಎಂದು ಪದೇ ಪದೇ ಒತ್ತಿ ಹೇಳಿದರು. “ನನ್ನ ಪ್ರಾಣ ಹೋದರೂ ನಾನು ನರೇಂದ್ರ ಮೋದಿಯ ವಿರುದ್ಧ ಹೋಗುವುದಿಲ್ಲ. ನನ್ನ ಹೃದಯ ತೆರೆದರೆ ಒಂದು ಕಡೆ ರಾಮ, ಇನ್ನೊಂದು ಕಡೆ ಮೋದಿ ಇರುತ್ತಾರೆ” ಎಂದು ಈಶ್ವರಪ್ಪ ಹೇಳಿಕೊಂಡಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಲೋಕಸಭೆ ಸ್ಪೀಕರ್ ಚುನಾವಣೆ| ಟಿಡಿಪಿ ಸ್ಪರ್ಧಿಸಿದರೆ ‘ಇಂಡಿಯಾ’ ಒಕ್ಕೂಟ ಬೆಂಬಲಿಸುತ್ತೆ: ಸಂಜಯ್ ರಾವತ್

ಲೋಕಸಭೆ ಸ್ಪೀಕರ್ ಚುನಾವಣೆಗೆ ಅಭ್ಯರ್ಥಿಯನ್ನು ಕಣಕ್ಕಿಳಿಸಿದರೆ, ಆಡಳಿತಾರೂಢ ಮಿತ್ರ ಪಕ್ಷವಾದ ತೆಲುಗು...

140ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಚಲಾವಣೆಯಾದ ಮತಕ್ಕಿಂತ ಎಣಿಕೆಯಾದ ಮತಗಳ ಸಂಖ್ಯೆ ಹೆಚ್ಚು: ಏನು ಈ ವ್ಯತ್ಯಾಸ?

2024ರ ಲೋಕಸಭೆ ಚುನಾವಣೆಯ ಫಲಿತಾಂಶಗಳು ಹೊರಬಿದ್ದಿವೆ. ಮೂರನೇ ಬಾರಿಗೆ ಮೋದಿ ನೇತೃತ್ವದಲ್ಲಿ...