ಬಹಿರಂಗ ಪ್ರಚಾರಕ್ಕೆ ತೆರೆ, 14 ಕ್ಷೇತ್ರಗಳಿಗೆ ಏ.26ಕ್ಕೆ ಮೊದಲ ಹಂತದ ಮತದಾನ, ಕಣದಲ್ಲಿ 247 ಅಭ್ಯರ್ಥಿಗಳು

Date:

ರಾಜ್ಯದ 14 ಲೋಕಸಭಾ ಕ್ಷೇತ್ರಗಳಿಗೆ ಶುಕ್ರವಾರ (ಏ. 26) ನಡೆಯಲಿರುವ ಮೊದಲ ಹಂತದ ಚುನಾವಣೆಯ ಬಹಿರಂಗ ಪ್ರಚಾರಕ್ಕೆ ಮತದಾನ ಮುಕ್ತಾಯಕ್ಕೆ 48 ಗಂಟೆ ಮುನ್ನ ಅಂದರೆ ಬುಧವಾರ ಸಂಜೆ 6 ಗಂಟೆಗೆ ತೆರೆ ಬಿದ್ದಿದೆ.

ಗಮನ ಸೆಳೆದಿರುವ ಮಂಡ್ಯ ಲೋಕಸಭೆ ಕ್ಷೇತ್ರದಲ್ಲಿ ಜೆಡಿಎಸ್-ಬಿಜೆಪಿ ಮೈತ್ರಿಕೂಟದ ಅಭ್ಯರ್ಥಿ ಎಚ್‌ ಡಿ ಕುಮಾರಸ್ವಾಮಿ ಅವರು ಬಹಿರಂಗ ಪ್ರಚಾರದ ಕೊನೆಯ ದಿನವಾದ ಇಂದು ರೋಡ್ ಶೋ ಮೂಲಕ ಪ್ರಚಾರಕ್ಕೆ ತೆರೆ ಎಳೆದರು.

ಡಿಸಿಎಂ ಡಿ ಕೆ ಶಿವಕುಮಾರ್ ಅವರು ಬೆಂಗಳೂರು ಗ್ರಾಮಾಂತರ ಕ್ಷೇತ್ರದ ಅಭ್ಯರ್ಥಿಯಾಗಿರುವ ಸಹೋದರ ಡಿ ಕೆ ಸುರೇಶ್‌ ಪರ ಕನಕಪುರದಲ್ಲಿ ಅಬ್ಬರದ ಭಾಷಣ ಮಾಡಿ, “ನಮ್ಮ ಜನ ನಮಗೆ ಬಹಳ ಪ್ರೀತಿ ವಿಶ್ವಾಸ ತೋರಿದ್ದಾರೆ. ಅವರ ಆಶೀರ್ವಾದದಿಂದ ಇಡೀ ರಾಜ್ಯದ ಜನರ ಸೇವೆ ಮಾಡುವ ಅವಕಾಶ ಸಿಕ್ಕಿದೆ. ಇಡೀ ಊರಿಗೆ ಊರೇ ಒಗ್ಗಟ್ಟಿನಿಂದ ಆಶೀರ್ವಾದ ಮಾಡುತ್ತಿದೆ. ಜನರಿಗೆ ನನ್ನ ಮೇಲೆ ನಂಬಿಕೆ ಇದೆ. ಕ್ಷೇತ್ರ ಹಿಂದೆ ಹೇಗಿತ್ತು, ಈಗ ಯಾವ ರೀತಿ ಬದಲಾವಣೆ ಮಾಡಿದ್ದೇವೆ ಎಂಬುದು ನರಿಗೆ ಗೊತ್ತಿದೆ. ನಾವು ಸ್ವಾರ್ಥಕ್ಕಾಗಿ ರಾಜಕಾರಣ ಮಾಡುತ್ತಿಲ್ಲ” ಎಂದು ಪರೋಕ್ಷವಾಗಿ ಕುಮಾರಸ್ವಾಮಿ ಅವರನ್ನು ಕುಟುಕಿ ಮಾತನಾಡಿದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇನ್ನು ಕಲಬುರಗಿಯಲ್ಲಿ ಸಿಎಂ ಸಿದ್ದರಾಮಯ್ಯ ಅವರು ಕಾಂಗ್ರೆಸ್ ಅಭ್ಯರ್ಥಿ ರಾಧಾಕೃಷ್ಣ ಅವರ ಪರವಾಗಿ ಬೃಹತ್ ಜನಸಮಾವೇಶವನ್ನು ಉದ್ಘಾಟಿಸಿ ಮಾತನಾಡಿ, “ಕಲಬುರಗಿ ಲೋಕಸಭಾ ಕ್ಷೇತ್ರದಲ್ಲಿ ಕಳೆದ ಬಾರಿ ಮಲ್ಲಿಕಾರ್ಜುನ ಖರ್ಗೆಯವರು ಸೋತಿದ್ದರಿಂದ ಖರ್ಗೆಯವರಿಗೆ ಹೆಚ್ಚು ನಷ್ಟ ಆಗಲಿಲ್ಲ. ಇವರ ಸೋಲಿನಿಂದ ರಾಜ್ಯಕ್ಕೆ ಮತ್ತು ಜಿಲ್ಲೆಗೆ ಬಹಳ ದೊಡ್ಡ ನಷ್ಟವಾಗಿದೆ. ಈ ಬಾರಿ ಮತ್ತೆ ತಪ್ಪಾಗಬಾರದು. ಅಭಿವೃದ್ಧಿ ಪರವಾಗಿರುವ ಕಾಂಗ್ರೆಸ್ ಅಭ್ಯರ್ಥಿಯನ್ನು ಗೆಲ್ಲಿಸಿ” ಎಂದು ಕರೆ ನೀಡಿದರು.

ಗೆದ್ದರೆ ಡಾ ಮಂಜುನಾಥ್‌ಗೆ ಸಚಿವ ಸ್ಥಾನ?

“ಬೆಂಗಳೂರು ಗ್ರಾಮಾಂತರ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಡಾ ಸಿಎನ್ ಮಂಜುನಾಥ್ ಅವರಿಗೆ ಎಲೆಕ್ಷನ್‌ ಬಳಿಕ ಅದೃಷ್ಟ ಖುಲಾಯಿಸುವ ಸಾಧ್ಯತೆ ಇದೆ. ಮಂಜುನಾಥ್‌ ಅವರನ್ನು ಕೇಂದ್ರ ಸಚಿವ ಸಂಪುಟಕ್ಕೆ ಸೇರ್ಪಡೆ ಮಾಡಿಕೊಳ್ಳಲು ಪ್ರಧಾನಿ ನರೇಂದ್ರ ಮೋದಿ ಮತ್ತು ಕೇಂದ್ರ ಗೃಹ ಸಚಿವ ಅಮಿತ್ ಶಾ ಉತ್ಸುಕರಾಗಿದ್ದಾರೆ” ಎಂದು ಮಾಜಿ ಪ್ರಧಾನಿ ಎಚ್‌ ಡಿ ದೇವೇಗೌಡ ಸುಳಿವು ನೀಡಿದರು.

ಮಾವೋವಾದಿ ದೇಶ ಮಾಡಲು ಹೊರಟಿದೆ

“ರಾಹುಲ್ ಗಾಂಧಿ ಭಾಷಣ, ಕಾಂಗ್ರೆಸ್ ಮ್ಯಾನಿಫ್ಯಾಸ್ಟೋ ದೇಶವನ್ನು ಮಾವೋವಾದಿ ದೇಶ ಮಾಡಲು ಹೊರಟಿದೆ. ಜನರ ಬಳಿ ಎರಡು ಬೈಕ್, ಮನೆ ಇದ್ದರೆ ಒಂದು ಕಸಿದುಕೊಳ್ಳುತ್ತಾರೆ ಎಂದು ಹುಬ್ಬಳ್ಳಿಯಲ್ಲಿ ಕೇಂದ್ರ ಸಚಿವ ಪ್ರಹ್ಲಾದ್ ಜೋಶಿ ಆರೋಪಿಸಿದರು.

“ಕಾಂಗ್ರೆಸ್ ಪಾರ್ಟಿ ದೇಶಕ್ಕೆ ವೆಲ್ತ್ ಕ್ರಿಯೇಟ್ ಮಾಡುವವರ ವಿರುದ್ಧ ಹೊರಟಿದೆ. ಮಾವೋವಾದಿ ಮನಸ್ಥಿತಿ ಇಟ್ಟುಕೊಂಡು ಎಲ್ಲರನ್ನೂ ಟಾರ್ಗೆಟ್ ಮಾಡುತ್ತಿದ್ದಾರೆ. ಕಾಂಗ್ರೆಸ್‌ನವರು‌ ತುಷ್ಟೀಕರಣದ ಪರಾಕಾಷ್ಟೆ ತಲುಪುತ್ತಿದ್ದಾರೆ” ಎಂದು ಜೋಶಿ ಕಿಡಿಕಾರಿದರು.

247 ಅಭ್ಯರ್ಥಿಗಳು ಮೊದಲ ಹಂತದ ಚುನಾವಣಾ ಕಣದಲ್ಲಿದ್ದಾರೆ

ಚೊಂಬು, ಪಿಕ್‌ ಪಾಕೆಟ್‌ ಪಕ್ಷ ಎಂಬಂತಹ ತೆಗಳಿಕೆ ಜಾಹೀರಾತುಗಳು ಸೇರಿ ರಾಜಕೀಯ ನಾಯಕರ ನಡುವೆ ಪರಸ್ಪರ ಮಾತಿನ ಸಮರದಿಂದ ಚುನಾವಣೆ ಕಣ ರಂಗೇರಿದೆ.

ಮಂಡ್ಯದಲ್ಲಿ ಮಾಜಿ ಸಿಎಂ ಎಚ್‌ ಡಿ ಕುಮಾರಸ್ವಾಮಿ, ಮೈಸೂರಿನಲ್ಲಿ ರಾಜವಂಶಸ್ಥ ಯದುವೀರ ಒಡೆಯರ್‌, ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಡಾ.ಸಿ ಎನ್‌ ಮಂಜುನಾಥ್‌, ಡಿ ಕೆ ಸುರೇಶ್ ಸೇರಿದಂತೆ ಘಟಾನುಘಟಿ ನಾಯಕರು ಸೇರಿ ಒಟ್ಟು 247 ಅಭ್ಯರ್ಥಿಗಳು ಮೊದಲ ಹಂತದ ಚುನಾವಣಾ ಕಣದಲ್ಲಿದ್ದಾರೆ.

ತವರು ಮೈಸೂರು- ಕೊಡಗು ಕ್ಷೇತ್ರದಲ್ಲಿ ಪಕ್ಷದ ಅಭ್ಯರ್ಥಿ ಗೆಲುವು ಸಿಎಂ ಸಿದ್ದರಾಮಯ್ಯ ಅವರಿಗೆ ಪ್ರತಿಷ್ಠೆಯಾಗಿದ್ದರೆ, ಸ್ವಕ್ಷೇತ್ರದ ಬೆಂಗಳೂರು ಗ್ರಾಮಾಂತರ ಕ್ಷೇತ್ರದಲ್ಲಿ ಅಭ್ಯರ್ಥಿಯಾಗಿರುವ ಸಹೋದರ ಡಿ.ಕೆ. ಸುರೇಶ್‌ ಅವರನ್ನು ಗೆಲ್ಲಿಸಿಕೊಳ್ಳುವುದು ಉಪ ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌ ಅವರಿಗೆ ಸವಾಲಾಗಿದೆ.

ಪ್ರಧಾನಿ ನರೇಂದ್ರ ಮೋದಿ, ಕೇಂದ್ರ ಗೃಹ ಸಚಿವ ಅಮಿತ್‌ ಶಾ, ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ, ಎಐಸಿಸಿ ನಾಯಕರಾದ ರಾಹುಲ್‌ ಗಾಂಧಿ, ಪ್ರಿಯಾಂಕಾ ಗಾಂಧಿ, ತೆಲಂಗಾಣ ಸಿಎಂ ರೇವಂತ್‌ ರೆಡ್ಡಿ, ಗೋವಾ ಸಿಎಂ ಪ್ರಮೋದ್‌ ಸಾವಂತ್‌ ಸೇರಿ ಹಲವು ಸ್ಟಾರ್‌ ಪ್ರಚಾರಕರು ಪ್ರಚಾರ ನಡೆಸಿ‌ದ್ದಾರೆ.

ಯಾವ ಕ್ಷೇತ್ರಗಳಲ್ಲಿ ಮತದಾನ?

ಉಡುಪಿ -ಚಿಕ್ಕಮಗಳೂರು, ಹಾಸನ, ದಕ್ಷಿಣ ಕನ್ನಡ, ಚಿತ್ರದುರ್ಗ, ತುಮಕೂರು, ಮಂಡ್ಯ, ಮೈಸೂರು, ಚಾಮರಾಜನಗರ, ಬೆಂಗಳೂರು ಗ್ರಾಮಾಂತರ, ಬೆಂಗಳೂರು ಉತ್ತರ, ಬೆಂಗಳೂರು ಕೇಂದ್ರ, ಬೆಂಗಳೂರು ದಕ್ಷಿಣ, ಚಿಕ್ಕಬಳ್ಳಾಪುರ ಮತ್ತು ಕೋಲಾರ ಕ್ಷೇತ್ರಗಳಲ್ಲಿ ಮೊದಲ ಹಂತದ ಮತದಾನ ನಡೆಯಲಿದೆ.

ನಿಷೇಧಾಜ್ಞೆ ಜಾರಿ

ರಾಜ್ಯದಲ್ಲಿ ಏಪ್ರಿಲ್ 26ರಂದು ಲೋಕಸಭೆ ಚುನಾವಣೆಗೆ ಮೊದಲ ಹಂತದ ಮತದಾನ ನಡೆಯುವ ಹಿನ್ನೆಲೆಯಲ್ಲಿ ಮುಂಜಾಗ್ರತಾ ಕ್ರಮವಾಗಿ ರಾಜಧಾನಿ ಬೆಂಗಳೂರು ಸೇರಿದಂತೆ ಎಲ್ಲ ಕ್ಷೇತ್ರ ವ್ಯಾಪ್ತಿಗಳಲ್ಲಿ ಕಠಿಣ ಕ್ರಮ ಕೈಗೊಳ್ಳಲಾಗಿದ್ದು, ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ. ಬುಧವಾರ (ಏ 24) ಸಂಜೆ 6 ಗಂಟೆಯಿಂದ ಏಪ್ರಿಲ್ 26ರ ಮಧ್ಯರಾತ್ರಿವರೆಗೂ ನಿಷೇಧಾಜ್ಞೆ ಜಾರಿಯಲ್ಲಿ ಇರಲಿದೆ. ಹಾಗೆಯೇ ಈ ಅವಧಿಯಲ್ಲಿ ಮದ್ಯ ಮಾರಾಟಕ್ಕೆ ಸಹ ನಿಷೇಧವಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ಲೋಕಸಭೆ ಸ್ಪೀಕರ್ ಚುನಾವಣೆ| ಟಿಡಿಪಿ ಸ್ಪರ್ಧಿಸಿದರೆ ‘ಇಂಡಿಯಾ’ ಒಕ್ಕೂಟ ಬೆಂಬಲಿಸುತ್ತೆ: ಸಂಜಯ್ ರಾವತ್

ಲೋಕಸಭೆ ಸ್ಪೀಕರ್ ಚುನಾವಣೆಗೆ ಅಭ್ಯರ್ಥಿಯನ್ನು ಕಣಕ್ಕಿಳಿಸಿದರೆ, ಆಡಳಿತಾರೂಢ ಮಿತ್ರ ಪಕ್ಷವಾದ ತೆಲುಗು...

140ಕ್ಕೂ ಹೆಚ್ಚು ಕ್ಷೇತ್ರಗಳಲ್ಲಿ ಚಲಾವಣೆಯಾದ ಮತಕ್ಕಿಂತ ಎಣಿಕೆಯಾದ ಮತಗಳ ಸಂಖ್ಯೆ ಹೆಚ್ಚು: ಏನು ಈ ವ್ಯತ್ಯಾಸ?

2024ರ ಲೋಕಸಭೆ ಚುನಾವಣೆಯ ಫಲಿತಾಂಶಗಳು ಹೊರಬಿದ್ದಿವೆ. ಮೂರನೇ ಬಾರಿಗೆ ಮೋದಿ ನೇತೃತ್ವದಲ್ಲಿ...