ಬಿಲ್ಕಿಸ್ ಬಾನು ಪ್ರಕರಣ; ವಿಶೇಷ ಪೀಠ ರಚಿಸಲು ಸುಪ್ರೀಂ ಕೋರ್ಟ್ ಸಮ್ಮತಿ

Date:

ಬಿಲ್ಕಿಸ್ ಬಾನು ಅತ್ಯಾಚಾರ ಪ್ರಕರಣದ ಅಪರಾಧಿಗಳ  ಮೇಲಿನ ಶಿಕ್ಷೆ ರದ್ದುಮಾಡಿ, ಅವಧಿಪೂರ್ವ ಬಿಡುಗಡೆಗೆ ಸೂಚಿಸಿದ್ದ ಗುಜರಾತ್ ಸರ್ಕಾರದ ಆದೇಶವನ್ನು ಪ್ರಶ್ನಿಸಿ ಸಲ್ಲಿಸಲಾದ ಅರ್ಜಿಗಳ ವಿಚಾರಣೆ ನಡೆಸಲು ವಿಶೇಷ ಪೀಠ ರಚಿಸುವುದಾಗಿ ಸುಪ್ರೀಂ ಕೋರ್ಟ್ ಬುಧವಾರ ಹೇಳಿದೆ.

ಪ್ರಕರಣದ ತುರ್ತು ವಿಚಾರಣೆ ನಡೆಸಬೇಕು ಮತ್ತು ಹೊಸ ಪೀಠ ಸ್ಥಾಪಿಸಬೇಕು ಎಂದು ಕೋರಿ ಬಿಲ್ಕಿಸ್‌ ಬಾನು ಅವರ ವಕೀಲೆ ಶೋಭಾ ಗುಪ್ತಾ ಸಲ್ಲಿಸಿದ್ದ ಅರ್ಜಿಯ ವಿಚಾರಣೆ ನಡೆಸಿದ ಮುಖ್ಯ ನ್ಯಾಯಮೂರ್ತಿ ಡಿ ವೈ ಚಂದ್ರಚೂಡ್‌ ಮತ್ತು ನ್ಯಾಯಮೂರ್ತಿಗಳಾದ ಪಿ ಎಸ್‌ ನರಸಿಂಹ ಮತ್ತು  ಮತ್ತು ಜೆ ಬಿ ಪರ್ಡಿವಾಲ ಅವರಿದ್ದ ಪೀಠ, ಈ ಕುರಿತು ಪರಿಶೀಲಿಸಿ ʻಹೊಸ ಪೀಠ ಸ್ಥಾಪಿಸಲಾಗುವುದುʼ ಎಂದು ಹೇಳಿದೆ.

ಗುಜರಾತ್‌ ಸರ್ಕಾರದ 2022ರ ಮೇ 12ರಂದು ಹೊರಡಿಸಿದ್ದ ಆದೇಶವನ್ನು ಪ್ರಶ್ನಿಸಿ ಬಿಲ್ಕಿಸ್‌ ಬಾನು ಸಲ್ಲಿಸಿದ್ದ ಅರ್ಜಿಯನ್ನು ಕಳೆದ ಡಿಸೆಂಬರ್‌ ತಿಂಗಳಿನಲ್ಲಿ ಸುಪ್ರೀಂ ಕೋರ್ಟ್‌ ವಜಾಗೊಳಿಸಿತ್ತು.

e761f9abfdc9ef87e6de54ca37fd3aa1e8b74659897c34d58aff74e9b6c9aa14?s=150&d=mp&r=g
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...