ಕೇರಳ | ಯೂಟ್ಯೂಬರ್ ಮೇಲೆ ಗುಂಪು ಹಲ್ಲೆ – ಹತ್ಯೆ; 10 ಮಂದಿ ಬಂಧನ

Date:

ವಲಸೆ ಕಾರ್ಮಿಕನಾಗಿದ್ದ ಯೂಟ್ಯೂಬರ್ ಒಬ್ಬರು ಗುರುವಾರ ರಾತ್ರಿ ಕೇರಳದ ಮುವಾಟ್ಟುಪುಳ ಬಳಿಕ ವಳಕೊಮ್‌ನಲ್ಲಿ ಸಾವನ್ನಪ್ಪಿದ್ದರು. ಅವರ ಸಾವಿಗೆ ಗುಂಪು ಹಲ್ಲೆಯೇ ಕಾರಣವಾಗಿದೆ. ಪ್ರಕರಣದಲ್ಲಿ 10 ಮಂದಿಯನ್ನು ಬಂಧಿಸಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಅರುಣಾಚಲ ಪ್ರದೇಶದ ಅಶೋಕ್‌ ದಾಸ್ (24) ಮೃತ ದುರ್ದೈವಿ. ಅವರು ವಾಲಕೋಮ್‌ನ ರೆಸ್ಟೋರೆಂಟ್‌ನಲ್ಲಿ ಬಾಣಸಿಗನಾಗಿ ಕೆಲಸ ಮಾಡುತ್ತಿದ್ದರು. ಅವರ ಮೇಲೆ 10 ಮಂದಿ ಗುಂಪು ಹಲ್ಲೆ ನಡೆಸಿ, ಹತ್ಯೆಗೈದಿದ್ದಾರೆ ಎಂದು ಪೊಲೀಸರು ಹೇಳಿದ್ದಾರೆ.

ಬಂಧಿತರನ್ನು – ವಿಜೇಶ್, ಅನೀಶ್, ಸತ್ಯನ್, ಸೂರಜ್, ಕೇಶವ್, ಇಲಿಯಾಸ್ ಕೆ ಪಾಲ್, ಅಮಲ್, ಅತುಲ್ ಕೃಷ್ಣ, ಎಮಿಲ್ ಮತ್ತು ಸನಲ್ – ಎಂದು ಗುರುತಿಸಲಾಗಿದೆ. ಎಲ್ಲರೂ ವಳಕೋನ್‌ ಗ್ರಾಮದ ನಿವಾಸಿಗಳು ಎಂದು ಪೊಲೀಸರು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಆರೋಪಿಗಳ ಗುಂಪು ಅಶೋಕ್ ಮೇಲೆ ಹಲ್ಲೆ ನಡೆಸಿದ್ದು, ಅನೈತಿಕ ಪೊಲೀಸ್ ಗಿರಿ ನಡೆಸಿದೆ. ಅಶೋಕ್‌ಗೆ ತಲೆ ಮತ್ತು ಎದೆಗೆ ಗಾಯಗಳಾಗಿವೆ. ಮರಣೋತ್ತರ ಪರೀಕ್ಷೆಯು ಗಾಯಗಳನ್ನು ದೃಢಪಡಿಸಿದೆ. ಅಶೋಕ್‌ನನ್ನು ಕಂಬಕ್ಕೆ ಕಟ್ಟಿ ಹಾಕಿ ಹಲ್ಲೆ ನಡೆಸಿದ್ದಾರೆ ಎಂಬುದು ಪ್ರಾಥಮಿಕ ತನಿಖೆಯಲ್ಲಿ ಗೊತ್ತಾಗಿದೆ. ಬಂಧಿತರ ವಿರುದ್ಧ ಕೊಲೆ ಪ್ರಕರಣ ದಾಖಲಿಸಿದ್ದೇವೆ. ತನಿಖೆ ನಡೆಯುತ್ತಿದೆ” ಎಂದು ಎರ್ನಾಕುಲಂ ಗ್ರಾಮಾಂತರ ಪೊಲೀಸ್ ಅಧಿಕಾರಿ ವೈಭವ್ ಸಕ್ಸೇನಾ ತಿಳಿಸಿದ್ದಾರೆ.

ವಾಲಕೊಮ್‌ನ ಹೋಟೆಲ್‌ನಲ್ಲಿ ಕೆಲಸ ಮಾಡುತ್ತಿದ್ದ ಮಾಜಿ ಮಹಿಳಾ ಸಹೋದ್ಯೋಗಿಯ ಮನೆಯಿಂದ ಅಶೋಕ್‌ನನ್ನು ಗುಂಪೊಂದು ಎಳೆದೊಯ್ದು ಥಳಿಸಿದೆ ಎಂದು ವರದಿಯಾಗಿದೆ.

ಪೊಲೀಸರ ಪ್ರಕಾರ, ಅಶೋಕ್ ಅವರನ್ನು ಕಂಬಕ್ಕೆ ಕಟ್ಟಿಹಾಕುವ ಮೊದಲು ಮತ್ತು ನಂತರ ಹಲ್ಲೆ ನಡೆಸಲಾಗಿದೆ. ಅಶೋಕ್ ಮೇಲೆ ಗುಂಪೊಂದು ಹಲ್ಲೆ ನಡೆಸಿದೆ ಎಂದು ಆತನ ಸ್ನೇಹಿತೆ ಮತ್ತು ಆಕೆಯ ಮನೆಯವರು ಹೇಳಿಕೆ ನೀಡಿದ್ದಾರೆ.

ಒನ್ಮನೋರಮಾ ವರದಿಯ ಪ್ರಕಾರ ಅಶೋಕ್ ದಾಸ್ ಯೂಟ್ಯೂಬರ್ ಆಗಿದ್ದು, ಅವರು ಹತ್ಯೆಯಾಗುವ 11 ದಿನಗಳ ಮೊದಲು ‘ಲಾಸ್ಟ್ ಆಫ್ ಟೈಮ್’ ಎಂಬ ಶೀರ್ಷಿಕೆಯಲ್ಲಿ ವೀಡಿಯೊವನ್ನು ಅಪ್‌ಲೋಡ್ ಮಾಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...