ವಿಧಾನಸಭೆಗೆ ಆಯ್ಕೆಯಾಗಿದ್ದ ಇಬ್ಬರು ಕೇಂದ್ರ ಸಚಿವರು, 8 ಸಂಸದರ ರಾಜೀನಾಮೆ

Date:

ರಾಜಸ್ಥಾನ, ಮಧ್ಯಪ್ರದೇಶ ಮತ್ತು ಛತ್ತೀಸ್‌ಗಢದ ಮೂರು ರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ಗೆಲುವು ಸಾಧಿಸಿದ್ದ 14 ಸಂಸದರ ಪೈಕಿ 10 ಮಂದಿ ಬುಧವಾರ ತಮ್ಮ ಲೋಕಸಭಾ ಸ್ಥಾನಗಳಿಗೆ ರಾಜೀನಾಮೆ ನೀಡಿದ್ದಾರೆ.

ಬಿಜೆಪಿ ಮುಖ್ಯಸ್ಥ ಜೆಪಿ ನಡ್ಡಾ ನೇತೃತ್ವದಲ್ಲಿ ಸಂಸದರ ನಿಯೋಗ ಸ್ಪೀಕರ್ ಅವರನ್ನು ಭೇಟಿ ಮಾಡಿ ರಾಜೀನಾಮೆಯನ್ನು ಸಲ್ಲಿಸಿದ್ದಾರೆ.

ಸ್ಪೀಕರ್ ಅವರನ್ನು ಭೇಟಿ ಮಾಡಿದವರಲ್ಲಿ ಕೇಂದ್ರ ಸಚಿವರಾದ ನರೇಂದ್ರ ತೋಮರ್, ಪ್ರಹ್ಲಾದ್ ಪಟೇಲ್ ಹಾಗೂ ಸಂಸದರಾದ ರಿತಿ ಪಾಠಕ್, ರಾಕೇಶ್ ಸಿಂಗ್, ಉದಯ್ ಪ್ರತಾಪ್ ಸಿಂಗ್(ಮಧ್ಯ ಪ್ರದೇಶ). ರಾಜಸ್ಥಾನದಿಂದ, ರಾಜೀನಾಮೆ ಸಲ್ಲಿಸಿದ ಸಂಸದರಲ್ಲಿ ರಾಜ್ಯವರ್ಧನ್ ರಾಥೋಡ್, ಕಿರೋಡಿ ಲಾಲ್ ಮೀನಾ ಮತ್ತು ದಿಯಾ ಕುಮಾರಿ ಸೇರಿದ್ದರೆ, ಅರುಣ್ ಸಾವೊ ಮತ್ತು ಗೋಮತಿ ಸಾಯಿ ಛತ್ತೀಸ್‌ಗಢದ ಸಂಸದರಾಗಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ತಮ್ಮ ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಿದ ನಂತರ, ಮಧ್ಯಪ್ರದೇಶ ವಿಧಾನಸಭೆ ಚುನಾವಣೆಯಲ್ಲಿ ನರಸಿಂಗ್‌ಪುರ ಕ್ಷೇತ್ರದಿಂದ ಗೆದ್ದಿರುವ ಬಿಜೆಪಿ ನಾಯಕ ಪ್ರಹ್ಲಾದ್ ಪಟೇಲ್, “ಬಿಜೆಪಿ ಅಧ್ಯಕ್ಷ ಜೆಪಿ ನಡ್ಡಾ ಅವರನ್ನು ಭೇಟಿಯಾದ ನಂತರ ನಾನು ಲೋಕಸಭೆ ಸಂಸದ ಸ್ಥಾನಕ್ಕೆ ರಾಜೀನಾಮೆ ನೀಡಿದ್ದೇನೆ. ಶೀಘ್ರದಲ್ಲೇ ನಾನು ಕೂಡ ಸಚಿವ ಸಂಪುಟಕ್ಕೆ ರಾಜೀನಾಮೆಯನ್ನು ನೀಡುತ್ತೇನೆ” ಎಂದು ತಿಳಿಸಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಹೊಸ ರೊಟ್ಟಿಯನು ಹೆಂಚಿಗೆ ಹಾಕಿದ ಮಿಜೋ ಮತದಾರರು

ವಿಧಾನಸಭೆಗೆ ಆಯ್ಕೆಯಾಗಿರುವ ಉಳಿದ ಇಬ್ಬರು ಬಿಜೆಪಿ ಸಂಸದರಾದ ಬಾಬಾ ಬಾಲಕನಾಥ್ ಮತ್ತು ರೇಣುಕಾ ಸಿಂಗ್ ಇನ್ನೂ ರಾಜೀನಾಮೆಯನ್ನು ಸಲ್ಲಿಸಿಲ್ಲ.

ತೆಲಂಗಾಣದಲ್ಲಿ ಕಾಂಗ್ರೆಸ್‌ನಿಂದ ಆಯ್ಕೆಯಾಗಿರುವ ನಿಯೋಜಿತ ಮುಖ್ಯಮಂತ್ರಿ ರೇವಂತ್ ರೆಡ್ಡಿ ಹಾಗೂ ಉತ್ತಮ್ ಕುಮಾರ್ ರೆಡ್ಡಿ ಕೂಡ ಲೋಕಸಭಾ ಸದಸ್ಯರಾಗಿದ್ದು, 14 ದಿನಗಳೊಳಗೆ ತಮ್ಮ ಸದಸ್ಯ ಸ್ಥಾನಕ್ಕೆ ರಾಜೀನಾಮೆಯನ್ನು ನೀಡಬೇಕಿದೆ.

ಛತ್ತೀಸ್‌ಗಢ, ರಾಜಸ್ಥಾನ ಮತ್ತು ಮಧ್ಯಪ್ರದೇಶದಲ್ಲಿ ಬಿಜೆಪಿ ಗೆಲುವು ಸಾಧಿಸಿದ್ದರೆ, ತೆಲಂಗಾಣದಲ್ಲಿ ಕಾಂಗ್ರೆಸ್ ವಿಜಯ ಪತಾಕೆ ಹಾರಿಸಿದೆ.

ರಾಜಸ್ಥಾನ, ಛತ್ತೀಸ್‌ಗಢ ಮತ್ತು ತೆಲಂಗಾಣ ಮುಖ್ಯಮಂತ್ರಿಗಳು ತಮ್ಮ ರಾಜ್ಯಪಾಲರಿಗೆ ರಾಜೀನಾಮೆ ಸಲ್ಲಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...