ಅಸ್ಸಾಂ: ಬಿಜೆಪಿ ಸಂಸದನ ನಿವಾಸದಲ್ಲಿ 10 ವರ್ಷದ ಬಾಲಕನ ಶವ ಪತ್ತೆ

Date:

ಅಸ್ಸಾಂನ ಸಿಲ್ಚಾರ್‌ನಲ್ಲಿರುವ ಬಿಜೆಪಿ ಸಂಸದರೊಬ್ಬರ ಮನೆಯಲ್ಲಿ ಶನಿವಾರ (ಆಗಸ್ಟ್ 27) ತಡರಾತ್ರಿ 10 ವರ್ಷದ ಬಾಲಕನ ಶವ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದೆ.

ಐದನೇ ತರಗತಿ ವಿದ್ಯಾರ್ಥಿಯಾಗಿರುವ ಬಾಲಕ ಸಿಲ್ಚಾರ್ ಸಂಸದ ರಾಜ್‌ದೀಪ್ ರಾಯ್ ಅವರ ಮನೆಯಲ್ಲಿ ತನ್ನ ತಾಯಿ ಮತ್ತು ಅಕ್ಕನೊಂದಿಗೆ ಹಲವಾರು ವರ್ಷಗಳಿಂದ ವಾಸಿಸುತ್ತಿದ್ದ.

ಪೊಲೀಸರು ಅಸಹಜ ಸಾವು ಎಂದು ಪ್ರಕರಣ ದಾಖಲಿಸಿಕೊಂಡಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಸಿಲ್ಚಾರ್ ವೈದ್ಯಕೀಯ ಕಾಲೇಜು ಮತ್ತು ಆಸ್ಪತ್ರೆಗೆ ಕಳುಹಿಸಲಾಗಿದೆ.

ಬಾಲಕನ ಪೋಷಕರು ಕ್ಯಾಚಾರ್ ಜಿಲ್ಲೆಯ ಪಲೋಂಗ್ ಘಾಟ್ ಪ್ರದೇಶದವರಾಗಿದ್ದು, ಅವರ ತಾಯಿ ಸಂಸದ ರಾಜದೀಪ್ ರಾಯ್ ಅವರ ಮನೆಯಲ್ಲಿ ಮನೆ ಸಹಾಯಕರಾಗಿ ಕೆಲಸ ಮಾಡುತ್ತಾರೆ. ಮಹಿಳೆಯು ಕೆಲವು ವರ್ಷಗಳ ಹಿಂದೆ ತನ್ನ ಇಬ್ಬರು ಮಕ್ಕಳನ್ನು ಉತ್ತಮ ಶಿಕ್ಷಣವನ್ನು ನೀಡುವ ಸಲುವಾಗಿ ಸಿಲ್ಚಾರ್‌ಗೆ ಕರೆತಂದಿದ್ದರು ಎಂದು ಪೊಲೀಸ್ ಮೂಲಗಳು ತಿಳಿಸಿವೆ.

ಈ ಸುದ್ದಿ ಓದಿದ್ದೀರಾ? ಕಾವೇರಿ ನದಿ ವಿವಾದ : ವಾಸ್ತವ ಸ್ಥಿತಿ ಕುರಿತು ವರದಿಗೆ ಸೂಚಿಸಿ ಸೆ 1ಕ್ಕೆ ವಿಚಾರಣೆ ಮುಂದೂಡಿದ ಸುಪ್ರೀಂ

ಘಟನೆಯ ಬಗ್ಗೆ ಮಾಹಿತಿ ಪಡೆದ ಬಿಜೆಪಿ ಸಂಸದರು ತಮ್ಮ ಮನೆಗೆ ಧಾವಿಸಿ, ನಂತರ ಮಾಧ್ಯಮಗಳಿಗೆ ಮಾಹಿತಿ ನೀಡಿದರು.

“ಬಾಲಕನು ನೇಣು ಹಾಕಿಕೊಂಡಿದ್ದಾನೆ ಎಂದು ಪೊಲೀಸರು ಹೇಳಿದ ನಂತರ ನಾನು ಮನೆಗೆ ಧಾವಿಸಿದೆ. ಬಾಲಕನಿದ್ದ ಕೋಣೆ ಒಳಗಿನಿಂದ ಮುಚ್ಚಲಾಗಿತ್ತು. ಪೊಲೀಸರು ಬಾಗಿಲನ್ನು ಒಡೆದು ಕೊಠಡಿ ಪ್ರವೇಶಿಸಿದಾಗ ಹುಡುಗ ಪ್ರಜ್ಞಾಹೀನ ಸ್ಥಿತಿಯಲ್ಲಿ ಇದ್ದ. ನಾವು ಆತನನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ದೆವು. ವೈದ್ಯರು ಕೂಡ ಆತನನ್ನು ಬದುಕಿಸಲು ಪ್ರಯತ್ನಿಸಿದರು. ಆದರೆ ಸಮಯ ಮೀರಿತ್ತು. ಬಾಲಕ ಮೃತಪಟ್ಟಿದ್ದಾನೆ ಎಂದು ವೈದ್ಯರು ತಿಳಿಸಿದರು” ಎಂದು ಸಂಸದ ರಾಜ್‌ದೀಪ್ ರಾಯ್ ತಿಳಿಸಿದ್ದಾರೆ.

ಪೊಲೀಸರು ಅಸಹಜ ಸಾವು ಪ್ರಕರಣ ದಾಖಲಿಸಿಕೊಂಡು ತನಿಖೆ ಆರಂಭಿಸಿದ್ದಾರೆ. ಪ್ರಾಥಮಿಕ ತನಿಖೆಯ ಪ್ರಕಾರ ಇದು ಆತ್ಮಹತ್ಯೆಯ ಪ್ರಕರಣ ಎಂದು ಪೊಲೀಸ್ ಮೂಲಗಳು ತಿಳಿಸಿದ್ದು, ವಿಡಿಯೋ ಗೇಮ್‌ ಆಡಲು ಮೊಬೈಲ್ ಫೋನ್ ಸಿಗದಿದ್ದಕ್ಕೆ ಬಾಲಕ ತನ್ನ ತಾಯಿಯ ಮೇಲೆ ಕೋಪಗೊಂಡಿದ್ದ ಎಂದು ಆತನ ಕುಟುಂಬದ ಸದಸ್ಯರು ಪೊಲೀಸರಿಗೆ ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...