ಆಟಿಸಂ ಖಾಯಿಲೆಯಿಂದ ಬಳಲುತ್ತಿದ್ದ ಬಾಲಕನನ್ನು ಎಳೆದೊಯ್ದ ಬೀದಿ ನಾಯಿಗಳು: ಸಾವು

Date:

ಭಿನ್ನ ಸಾಮರ್ಥ್ಯದ ಬಾಲಕನೋರ್ವ ಉಯ್ಯಾಲೆಯಲ್ಲಿ ಆಟವಾಡುತ್ತಿದ್ದ ವೇಳೆ ಬೀದಿ ನಾಯಿಗಳು ದಾಳಿ ನಡೆಸಿ, ಎಳೆದೊಯ್ದ ಪರಿಣಾಮ ಬಾಲಕ ಮೃತಪಟ್ಟಿರುವ ದಾರುಣ ಘಟನೆ ಕೇರಳದ ಕಣ್ಣೂರ್‌ ಜಿಲ್ಲೆಯ ಮುಝಪ್ಪಿಲಂಗಾಡ್ ಎಂಬಲ್ಲಿ ನಡೆದಿದೆ.

ಮೃತ ಬಾಲಕನನ್ನು ನಿಹಾಲ್‌ ನೌಶಾದ್‌ (10) ಎಂದು ಗುರುತಿಸಲಾಗಿದೆ.

ಘಟನೆಯ ವಿವರ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಆಟಿಸಂ ಖಾಯಿಲೆಯಿಂದ ಬಳಲುತ್ತಿದ್ದ ಬಾಲಕ ನಿಹಾಲ್‌, ತಾಯಿ ನೌಫೀಸಾ ಮತ್ತು ತಮ್ಮ ನಝಲ್‌ ಜೊತೆ ಕೆಟ್ಟಿನಗಂ ಎಂಬಲ್ಲಿ ವಾಸವಾಗಿದ್ದ. ಘಟನೆ ನಡೆದ ದಿನ ಸಂಜೆ ಪಕ್ಕದ ಮನೆಯ ಉಯ್ಯಾಲೆಯಲ್ಲಿ ಆಟವಾಡಲು ತೆರಳಿದ್ದಾನೆ. ನಿಹಾಲ್‌ ಮನೆಯಿಂದ ಹೊರ ಹೋಗಿರುವುದು ತಾಯಿಯ ಗಮನಕ್ಕೆ ಬಂದಿರಲಿಲ್ಲ. ನಿಹಾಲ್‌ ಆಟವಾಡಲು ತೆರಳಿದ್ದ ಮನೆಯಲ್ಲಿ ಯಾರೂ ವಾಸವಿರಲಿಲ್ಲ. ತನ್ನ ಮನೆಯಿಂದ ಸಂಜೆ 5ರ ವೇಳೆಗೆ ತೆರಳಿದ್ದ ಬಾಲಕ, ರಾತ್ರಿಯಾದರೂ ಪತ್ತೆಯಾಗಿರಲಿಲ್ಲ. ವಿಷಯ ತಿಳಿಯುತ್ತಿದ್ಧಂತೆಯೇ ಊರವರೆಲ್ಲಾ ಸೇರಿ ಹುಡುಕಾಟ ನಡೆಸಿದ್ದಾರೆ. ರಾತ್ರಿ 8.30ರ ವೇಳೆಗೆ ಪಕ್ಕದ ಮನೆಯ ಕಾಂಪೌಂಡ್‌ ಬಳಿ ನಿಹಾಲ್‌ ಪತ್ತೆಯಾಗಿದ್ದಾನೆ.

ಬೀದಿ ನಾಯಿಗಳ ದಾಳಿಗೆ ಸಿಲುಕಿ ಗಂಭೀರವಾಗಿ ಗಾಯಗೊಂಡಿದ್ದ ನಿಹಾಲ್‌ನನ್ನು ಸ್ಥಳೀಯರು ತಲಶ್ಶೇರಿ ಸರಕಾರಿ ಆಸ್ಪತ್ರೆಗೆ ದಾಖಲಿಸಿ, ಚಿಕಿತ್ಸೆ ಕೊಡಿಸಿದ್ದಾರೆ. ಆದರೆ, ದೇಹದ ಬಹುತೇಕ ಭಾಗಗಳನ್ನೂ ಬೀದಿ ನಾಯಿಗಳು ಕಚ್ಚಿ ಎಳೆದಾಡಿದ್ದ ಕಾರಣ, ತೀವ್ರ ರಕ್ತ ಸ್ರಾವದಿಂದ ಬಾಲಕ ಮೃತಪಟ್ಟಿದ್ದಾನೆ.

ನಿಹಾಲ್‌ಗೆ ಮಾತು ಬಾರದೇ ಇದ್ದುದರಿಂದ ಸಹಾಯಕ್ಕಾಗಿ ಯಾರನ್ನೂ ಕೂಗಲು ಸಾಧ್ಯವಾಗಿರಲಿಲ್ಲ ಎಂದು ಸ್ಥಳೀಯರು ಮಾಧ್ಯಮಗಳಿಗೆ ತಿಳಿಸಿದ್ದಾರೆ. ಮೃತ ನಿಹಾಲ್‌ ಮನೆಯಲ್ಲಿ ಮೃತದೇಹವನ್ನು ಅಂತಿಮ ದರ್ಶನಕ್ಕೆ ಇಡಲಾಗಿದ್ದ ವೇಳೆ ನೂರಾರು ಸಂಖ್ಯೆಯಲ್ಲಿ ಸೇರಿದ್ದವರ ಕಣ್ಣಾಲಿಗಳು ತೇವವಾಗಿದ್ದವು.

ಈ ಸುದ್ದಿ ಓದಿದ್ದೀರಾ?: ಮುಂದಿನ ನಾಲ್ಕು ವಾರಗಳಲ್ಲಿ ಭಾರತದಲ್ಲಿ ಮುಂಗಾರು ದುರ್ಬಲ: ಸ್ಕೈಮೆಟ್‌ ವರದಿ

ಸುಮೋಟೋ ಪ್ರಕರಣ ದಾಖಲಿಸಿದ ರಾಜ್ಯ ಮಾನವ ಹಕ್ಕು ಮತ್ತು ಮಕ್ಕಳ ಹಕ್ಕುಗಳ ಆಯೋಗ

ಘಟನೆಯನ್ನು ಗಂಭೀರವಾಗಿ ಪರಿಗಣಿಸಿರುವ ಕೇರಳ ರಾಜ್ಯ ಮಾನವ ಹಕ್ಕುಗಳ ಆಯೋಗ ಮತ್ತು ಮಕ್ಕಳ ಹಕ್ಕುಗಳ ಆಯೋಗವು, ಸ್ವಯಂ ಪ್ರೇರಿತವಾಗಿ ಪ್ರಕರಣ ದಾಖಲಿಸಿದ್ದು, ಘಟನೆಯ ಕುರಿತು 15 ದಿನಗಳಲ್ಲಿ ವಿವರವಾದ ವರದಿಯನ್ನು ಸಲ್ಲಿಸುವಂತೆ ಮುಝಪ್ಪಿಲಂಗಾಡ್‌ ಪಂಚಾಯತ್ ಕಾರ್ಯದರ್ಶಿಗೆ ಸೂಚನೆ ನೀಡಿದ್ದಾರೆ.

ಬೀದಿ ನಾಯಿಗಳ ದಾಳಿಗೆ ಐದು ವರ್ಷದ ಬಾಲಕಿ ಬಲಿ

ಉತ್ತರ ಪ್ರದೇಶದ ಆಗ್ರಾ ಬಳಿಯ ದೌಕಿ ಪ್ರದೇಶದ ಕುಯಿ ಕುಮಾರ್‌ಗಢ ಗ್ರಾಮದ ತೋಟದಲ್ಲಿ ಆಟವಾಡುತ್ತಿದ್ದ ಕಾಂಚನ ಮತ್ತು ರಶ್ಮಿ ಎಂಬ ಬಾಲಕಿಯರಿಬ್ಬರ ಬೀದಿ ನಾಯಿಗಳ ಗುಂಪೊಂದು ಮೇಲೆ ದಾಳಿ ನಡೆಸಿದೆ. ಪರಿಣಾಮ ಐದು ವರ್ಷದ ಕಾಂಚನ ಮೃತಪಟ್ಟಿದ್ದು, ಗಂಭೀರವಾಗಿ ಗಾಯಗೊಂಡಿರುವ ರಶ್ಮಿಯನ್ನು ಆಗ್ರಾದ ಎಸ್‌ಎನ್ ವೈದ್ಯಕೀಯ ಕಾಲೇಜಿಗೆ ದಾಖಲಿಸಲಾಗಿದೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...