‘ಸಿಎಪಿಎಫ್‌’ಗೆ 100 ದಿನಗಳ ರಜೆ: 9.5 ಲಕ್ಷ ಸಿಬ್ಬಂದಿಗಳಲ್ಲಿ ರಜೆ ಸಿಕ್ಕಿದ್ದು ಕೇವಲ 42 ಸಾವಿರ ಮಂದಿಗೆ

Date:

ಕೇಂದ್ರೀಯ ಸಶಸ್ತ್ರ ಪೊಲೀಸ್ ಪಡೆಗಳು (CAPFs) ಮತ್ತು ಅಸ್ಸಾಂ ರೈಫಲ್ಸ್ ಸಿಬ್ಬಂದಿಗಳಿಗೆ 100 ದಿನ ರಜೆ ಪಡೆಯುವ ಸೌಲಭ್ಯವಿದೆ. ಆದಾಗ್ಯೂ, 2020 ಮತ್ತು 2024ರ (ಅಕ್ಟೋಬರ್ ವರೆಗೆ) ನಡುವೆ ಈ ಪಡೆಗಳಲ್ಲಿರುವ 9.5 ಲಕ್ಷ ಸಿಬ್ಬಂದಿಗಳ ಪೈಕಿ ಕೇವಲ 42,000 ಸಿಬ್ಬಂದಿಗಳು ಮಾತ್ರವೇ 100 ದಿನಗಳ ರಜೆಯ ಲಾಭ ಪಡೆದಿದ್ದಾರೆ ಎಂಂದು ಕೇಂದ್ರ ಗೃಹ ಸಚಿವಾಲಯ (MHA) ಮಾಹಿತಿ ನೀಡಿದೆ.

ಕೇಂದ್ರೀಯ ಸಶಸ್ತ್ರ ಪಡೆಗಳಲ್ಲಿ ಆತ್ಮಹತ್ಯೆಗಳು ಮತ್ತು ಸ್ವಯಂನಿವೃತ್ತಿಯನ್ನು ಕಡಿಮೆ ಮಾಡುವ ಮತ್ತು ಸಿಬ್ಬಂದಿಗಳು ತಮ್ಮ ಕುಟುಂಬದೊಂದಿಗೆ ಹೆಚ್ಚು ಸಮಯ ಕಳೆಯಲು ಅವಕಾಶ ಮಾಡಿಕೊಡುವ ಉದ್ದೇಶದಿಂದ 100 ದಿನಗಳ ರಜೆ ನೀತಿಯನ್ನು ಘೋಷಿಸಲಾಗಿತ್ತು. ಆದಾಗ್ಯೂ, ತೀರಾ ಕಡಿಮೆ ಸಿಬ್ಬಂದಿಗಳು ಈ ನೀತಿಯಡಿ ರಜೆ ಪಡೆದಿದ್ದಾರೆ.

ಸಂಸತ್ತಿನಲ್ಲಿ ಮಂಡಿಸಲಾದ ಗೃಹ ಸಚಿವಾಲಯದ ಮಾಹಿತಿಯಂತೆ, ಕಳೆದ ನಾಲ್ಕು ವರ್ಷಗಳಲ್ಲಿ ಸಿಆರ್‌ಪಿಎಫ್‌ನ ಒಟ್ಟು 2,245 ಸಿಬ್ಬಂದಿಗಳು ಮಾತ್ರವೇ 100 ದಿನಗಳ ರಜೆ ಪಡೆದುಕೊಂಡಿದ್ದಾರೆ. ಆದಾಗ್ಯೂ, 2024ರಲ್ಲಿ ಕೇವಲ 71 ಮಂದಿ ಮಾತ್ರವೇ ರಜೆ ಮೇಲೆ ತಮ್ಮೂರಿಗೆ ಹೋಗಲು ಸಾಧ್ಯವಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇನ್ನು, ಗಡಿ ಭದ್ರತಾ ಪಡೆಯಲ್ಲಿ (BSF) ಒಟ್ಟು 21,733 ಸಿಬ್ಬಂದಿ 100 ದಿನ ರಜೆಯನ್ನು ತೆಗೆದುಕೊಂಡಿದ್ದಾರೆ. ಇಂಡೋ-ಟಿಬೆಟಿಯನ್ ಬಾರ್ಡರ್ ಪೋಲಿಸ್ (ITBP) ಪಡೆಯ 1,472 ಸಿಬ್ಬಂದಿ, ಸಶಸ್ತ್ರ ಸೀಮಾ ಬಾಲ್‌ನ (SSB) 6,142 ಸಿಬ್ಬಂದಿ ಹಾಗೂ ಸೆಂಟ್ರಲ್ ಇಂಡಸ್ಟ್ರಿಯಲ್ ಸೆಕ್ಯುರಿಟಿ ಫೋರ್ಸ್‌ನ (CISF) 8,838 ಸಿಬ್ಬಂದಿ ಈ ರಜೆಗಳನ್ನು ಪಡೆಯಲು ಸಾಧ್ಯವಾಗಿದೆ.

ಇದಲ್ಲದೆ, ಇಂಡೋ-ಮ್ಯಾನ್ಮಾರ್ ಗಡಿಯಲ್ಲಿ ಕಾರ್ಯನಿರ್ವಹಿಸುವ ಮತ್ತು ಮಣಿಪುರದಲ್ಲಿ ನಿಯೋಜಿಸಲಾದ ಅಸ್ಸಾಂ ರೈಫಲ್ಸ್‌ನ 2,367 ಸಿಬ್ಬಂದಿಗಳು 100 ದಿನಗಳ ರಜೆ ಪಡೆದಿದ್ದಾರೆ. ಒಟ್ಟಾರೆಯಾಗಿ, 42,797 ಸಿಬ್ಬಂದಿಗಳು ರಜೆಯ ಉಪಯೋಗ ಪಡೆದುಕೊಂಡಿದ್ದಾರೆ.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...