ಉತ್ತರಾಖಂಡ | 11 ನಗರಗಳಿಗೆ ಬಿಜೆಪಿ, ಆರ್‌ಎಸ್‌ಎಸ್‌ ನಾಯಕರ ಹೆಸರು ಮರು ನಾಮಕರಣ

Date:

ರಾಜ್ಯದ 4 ಜಿಲ್ಲೆಯ 11 ನಗರಗಳ ಹೆಸರು ಮರುನಾಮಕರಣಕ್ಕೆ ಉತ್ತರಾಖಂಡ ಮುಖ್ಯಮಂತ್ರಿ ಪುಷ್ಕರ್ ಸಿಂಗ್ ಧಾಮಿ ಅವರು ಆದೇಶ ಹೊರಡಿಸಿದ್ದಾರೆ.

ಮರು ನಾಮಕರಣ ಮಾಡಲಾಗುವ ನಗರಗಳ ಹೆಸರನ್ನು ಹಿಂದೂ ದೇವತೆಗಳು, ಖ್ಯಾತನಾಮರು, ಪೌರಾಣಿಕ ವ್ಯಕ್ತಿಗಳು, ಬಿಜೆಪಿ ಮತ್ತು ಆರ್‌ಎಸ್‌ಎಸ್‌ನ ಪ್ರಮುಖ ನಾಯಕರ ಹೆಸರುಗಳೊಂದಿಗೆ ಮರು ನಾಮಕರಣ ಮಾಡಲಾಗುವುದು ಎಂದು ಪುಷ್ಕರ್ ಸಿಂಗ್ ಧಾಮಿ ತಿಳಿಸಿದ್ದಾರೆ.

ಹರಿದ್ವಾರ, ಡೆಹ್ರಾಡೂನ್, ನೈನಿತಾಲ್ ಮತ್ತು ಉಧಮ್ ಸಿಂಗ್ ಸೇರಿ 11 ನಗರಗಳ ಹೆಸರು ಬದಲಾಯಿಸಲಾಗುವುದು. ಸಾರ್ವಜನಿಕ ಭಾವನೆ ಮತ್ತು ಭಾರತೀಯ ಸಂಸ್ಕೃತಿಗೆ ಅನುಗುಣವಾಗಿ ಈ ಸ್ಥಳಗಳ ಮರುನಾಮಕರಣ ಮಾಡಲಾಗುತ್ತದೆ ಎಂದು ಪುಷ್ಕರ್ ಸಿಂಗ್ ಧಾಮಿ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ‘ಎಂಪುರಾನ್‌’ ವಿವಾದ: ಹಿಂದುತ್ವ ರಾಜಕಾರಣಕ್ಕೆ ಬೆಚ್ಚಿದ ಚಿತ್ರತಂಡ

ಸಿಎಂ ಪುಷ್ಕರ್ ಸಿಂಗ್ ಧಾಮಿ ಅವರ ಆದೇಶದಂತೆ, ಹರಿದ್ವಾರ ಜಿಲ್ಲೆಯ ಔರಂಗಜೇಬಪುರವನ್ನು ಶಿವಾಜಿ ನಗರ, ಜಂಜಿಯಾಲಿಯನ್ನು ಆರ್ಯ ನಗರ, ಚೌಧಪುರವನ್ನು ಜ್ಯೋತಿಬಾ ಫುಲೆ ನಗರ, ಮೊಹಮ್ಮದ್‌ಪುರ ಜಾಟ್ ಅನ್ನು ಮೋಹನ್‌ಪುರ ಜಾಟ್, ಖಾನ್ಪುರ್ ಖುರೇಷಿಯನ್ನು ಅಂಬೇಡ್ಕರ್ ನಗರ, ಧೀರ್ಪುರವನ್ನು ನಂದಪುರ, ಅಕ್ಬರ್ಪುರ್ ಫಜಲ್ಪುರವನ್ನು ವಿಜಯನಗರ ಮತ್ತು ಖಾನ್ಪುರವನ್ನು ಶ್ರೀಕೃಷ್ಣಪುರ ಎಂದು ಮರುನಾಮಕರಣ ಮಾಡಲಾಗುತ್ತದೆ.

ಡೆಹ್ರಾಡೂನ್ ಜಿಲ್ಲೆಯಲ್ಲಿ, ಪಿರುವಾಲವನ್ನು ರಾಮ್‌ಜಿ ವಾಲಾ, ಪೀರುವಾಳವನ್ನು ಕೇಸರಿ ನಗರ, ಚೌಧಪುರ್ ಖುರ್ದ್ ಅನ್ನು ಪೃಥ್ವಿರಾಜ್ ನಗರ ಮತ್ತು ಅಬ್ದುಲ್ಲಾಪುರವನ್ನು ದಶರಥನಗರ ಎಂದು ಬದಲಿಸಲಾಗುತ್ತದೆ.

ನೈನಿತಾಲ್ ಜಿಲ್ಲೆಯಲ್ಲಿ, ನವಾಬಿ ರಸ್ತೆಯನ್ನು ಅಟಲ್ ಮಾರ್ಗ ಎಂದು ಮರುನಾಮಕರಣ ಮಾಡಲಾಗುವುದು ಮತ್ತು ಪಂಚಕ್ಕಿ ಐಟಿಐ ರಸ್ತೆಯನ್ನು ಗುರು ಗೋವಲ್ಕರ್ ಮಾರ್ಗ ಎಂದು ಹೆಸರಿಡಲಾಗುವುದು. ಉಧಮ್ ಸಿಂಗ್ ನಗರ ಜಿಲ್ಲೆಯ ನಗರ ಪಂಚಾಯತ್ ಸುಲ್ತಾನ್‌ಪುರ ಪಟ್ಟಿಯನ್ನು ಕೌಶಲ್ಯ ಪುರಿ ಎಂದು ಮರುನಾಮಕರಣ ಮಾಡಲಾಗುತ್ತದೆ ಎಂದು ತಿಳಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...