ನಿರಂತರ ಅತ್ಯಾಚಾರ: ಮಗುವಿಗೆ ಜನ್ಮ ನೀಡಿದ 11 ವರ್ಷದ ಬಾಲಕಿ, ಆರೋಪಿ ಬಂಧನ

Date:

ವಿವಾಹಿತ ವ್ಯಕ್ತಿಯೊಬ್ಬ 11 ವರ್ಷದ ಬಾಲಕಿ ಮೇಲೆ ನಿರಂತರವಾಗಿ ಅತ್ಯಾಚಾರ ಎಸಗಿದ್ದು, ಬಾಲಕಿ ಮಗುವಿಗೆ ಜನ್ಮ ನೀಡಿದ್ದಾಳೆ. ಸದ್ಯ ಆರೋಪಿಯನ್ನು ಬಂಧಿಸಲಾಗಿದೆ. ಬರೇಲಿಯಲ್ಲಿ ಈ ಘಟನೆ ನಡೆದಿದೆ. ಬಾಲಕಿ ಏಳು ತಿಂಗಳಲ್ಲೇ ಮಗುವಿಗ ಜನ್ಮ ನೀಡಿದ್ದು, ಆ ಮಗು ಕೆಲವೇ ದಿನಗಳಲ್ಲಿ ಸಾವನ್ನಪ್ಪಿದೆ ಎಂದು ಪೊಲೀಸರು ತಿಳಿಸಿದ್ದಾರೆ.

ಎರಡು ಮಕ್ಕಳ ತಂದೆಯಾದ 31 ವರ್ಷದ ರಶೀದ್ ಎಂಬ ವ್ಯಕ್ತಿಯ ವಿರುದ್ಧ ಪೊಲೀಸರು ದೂರು ದಾಖಲಿಸಿದ್ದಾರೆ. ಬಾಲಕಿಯ ಮೇಲೆ ಪದೇ ಪದೇ ಅತ್ಯಾಚಾರ ಎಸಗಿದ್ದ ಆರೋಪಿ, ಬೆದರಿಕೆ ಹಾಕಿ ಈ ಕೃತ್ಯ ಎಸಗಿದ್ದಾನೆ ಎನ್ನಲಾಗಿದೆ.

ಇದನ್ನು ಓದಿದ್ದೀರಾ? ಬಾಲಕಿಯ ಅತ್ಯಾಚಾರ; ಮಠದ ಅರ್ಚಕ ಸೇರಿ ಇಬ್ಬರ ಬಂಧನ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ರಶೀದ್ ವಿರುದ್ಧ ಎಫ್‌ಐಆರ್ ದಾಖಲಿಸಲಾಗಿದೆ. ಮಗುವಿನ ಡಿಎನ್‌ಎ ಮಾದರಿಯ ಪರೀಕ್ಷೆ ಮಾಡಿಸಲಾಗುವುದು ಎಂದು ನವಾಬ್‌ಗಂಜ್ ಠಾಣೆಯ ಅಧಿಕಾರಿ ಅರುಣ್ ಕುಮಾರ್ ಶ್ರೀವಾಸ್ತವ ತಿಳಿಸಿದ್ದಾರೆ.

ಆರರಿಂದ ಏಳು ತಿಂಗಳ ಹಿಂದೆ ಆರೋಪಿ ಹಣ್ಣು ಕೊಡಿಸುವುದಾಗಿ ಹೇಳಿ ತನ್ನ ಮನೆಗೆ ಕರೆದೊಯ್ದು, ಅಲ್ಲಿ ಆರೋಪಿ ಅತ್ಯಾಚಾರ ಎಸಗಿದ್ದಾನೆ. ಯಾರಿಗಾದರೂ ಈ ವಿಷಯ ತಿಳಿಸಿದರೆ ಇಡೀ ಕುಟುಂಬವನ್ನೇ ಕೊಲೆ ಮಾಡುವುದಾಗಿ ಆರೋಪಿ ಬೆದರಿಕೆ ಹಾಕಿದ್ದ. ವಿಡಿಯೋ ಮಾಡಿಟ್ಟುಕೊಂಡು ಪದೇ ಪದೇ ಬ್ಲ್ಯಾಕ್‌ಮೇಲ್ ಮಾಡಿ ಅತ್ಯಾಚಾರ ಮಾಡುತ್ತಿದ್ದ ಎನ್ನಲಾಗಿದೆ.

ಬಾಲಕಿ ನಿರಂತರ ಹೊಟ್ಟೆ ನೋವಿನಿಂದ ಬಳಲುತ್ತಿದ್ದ ಕಾರಣ ಆಕೆಯ ಕುಟುಂಬ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ದು ಪರೀಕ್ಷೆ ಮಾಡಿಸಿದಾಗ ಆಕೆ ಏಳು ತಿಂಗಳ ಗರ್ಭಿಣಿ ಎಂದು ತಿಳಿದುಬಂದಿದೆ. ಬಾಲಕಿಯನ್ನು ಜಿಲ್ಲಾ ಮಹಿಳಾ ಆಸ್ಪತ್ರೆಗೆ ಕರೆತರಲಾಗಿದ್ದು, ಆದೇ ದಿನ ಬಾಲಕಿ ಮಗುವಿಗೆ ಜನ್ಮ ನೀಡಿದ್ದಾರೆ. ಬಾಲಕಿ ಸ್ಥಿತಿ ಆರಂಭದಲ್ಲಿ ಗಂಭೀರವಾಗಿತ್ತು ಸದ್ಯ ಸ್ಥಿರವಾಗಿದೆ ಎಂದು ವರದಿಯಾಗಿದೆ.

ಗಮನಿಸಿ: ಅತ್ಯಾಚಾರವು ಒಂದು ಗಂಭೀರ ಸಾಮಾಜಿಕ ದುಷ್ಕೃತ್ಯ. ಈ ಕ್ರೂರ ಕೃತ್ಯವು ಸಮಾಜದ ನೈತಿಕತೆ ಮತ್ತು ಮಾನವೀಯತೆಯನ್ನು ಕುಂದಿಸುತ್ತದೆ. ಅತ್ಯಾಚಾರವನ್ನು ತಡೆಯುವುದು ಮತ್ತು ಅತ್ಯಾಚಾರ ಮುಕ್ತ ಸಮಾಜವನ್ನು ನಿರ್ಮಿಸುವುದು ನಮ್ಮೆಲ್ಲರ ಜವಾಬ್ದಾರಿ. ಮಹಿಳೆಯರು ಭಯಮುಕ್ತವಾಗಿ ಬದುಕಲು ಹೆಣ್ಣುಮಕ್ಕಳ ಸುರಕ್ಷತೆ, ಗೌರವ ಮತ್ತು ನ್ಯಾಯವನ್ನು ಕಾಪಾಡಲು ನಾವು ಒಗ್ಗೂಡಿ ಹೋರಾಡಬೇಕು.ಅತ್ಯಾಚಾರದ ವಿರುದ್ಧ ಕಠಿಣ ಕಾನೂನು ಜಾರಿಯಾಗಬೇಕು ಮತ್ತು ಸಮಾಜದಲ್ಲಿ ಜಾಗೃತಿ ಮೂಡಿಸಬೇಕು. ನಮ್ಮ ಕುಟುಂಬಗಳಲ್ಲಿ, ಶಾಲೆಗಳಲ್ಲಿ ಹಾಗೂ ಸಾರ್ವಜನಿಕ ಸ್ಥಳಗಳಲ್ಲಿ ಹೆಣ್ಣುಮಕ್ಕಳ ಜೊತೆ ಗೌರವ ಮತ್ತು ಸಂವೇದನೆಯಿಂದ ನಡೆದುಕೊಳ್ಳಬೇಕು. ಮಹಿಳೆಯರ ರಕ್ಷಣೆಯ ಹೊಣೆ ನಮ್ಮೆಲ್ಲರದ್ದಾಗಿದೆ.
WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...