ಗುಲಾಬಿ ಮಾರಲು ಸಹಾಯ ಮಾಡುವ ನೆಪದಲ್ಲಿ 11 ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕಾಮುಕನ ಬಂಧನ

Date:

ಟ್ರಾಫಿಕ್ ಸಿಗ್ನಲ್‌ನಲ್ಲಿ ಗುಲಾಬಿಯನ್ನು ಮಾರುತ್ತಿದ್ದ 11 ವರ್ಷದ ಬಾಲಕಿಗೆ ಗುಲಾಬಿ ಮಾರಲು ಸಹಾಯ ಮಾಡುವ ನೆಪದಲ್ಲಿ ಅರಣ್ಯ ಪ್ರದೇಶಕ್ಕೆ ಕರೆದೊಯ್ದು ಆಟೋ ಚಾಲಕನೊಬ್ಬ ಅತ್ಯಾಚಾರ ಎಸಗಿದ ಘಟನೆ ಮಧ್ಯ ದೆಹಲಿಯ ಕರೋಲ್ ಬಾಗ್ ಬಳಿಯ ಪ್ರಸಾದ್ ನಗರದಲ್ಲಿ ನಡೆದಿದೆ. ಜನವರಿ 11ರಂದು ಮಧ್ಯಾಹ್ನ 3.30ರ ಸುಮಾರಿಗೆ ಈ ಘಟನೆ ನಡೆದಿದ್ದು ತಡವಾಗಿ ಬೆಳಕಿಗೆ ಬಂದಿದೆ.

“ಬಾಲಕಿ ಟ್ರಾಫಿಕ್ ಸಿಗ್ನಲ್‌ನಲ್ಲಿ, ಗುಲಾಬಿಗಳನ್ನು ಮಾರಾಟ ಮಾಡಲು ಕಾಯುತ್ತಿದ್ದಳು. ಈ ವೇಳೆ 40 ವರ್ಷದ ದುರ್ಗೇಶ್ ಆಕೆಯನ್ನು ಗಮಿನಿಸಿದ್ದಾನೆ. ತನ್ನ ಪ್ರಯಾಣಿಕರನ್ನು ಇಳಿಸಿ, ಆಕೆಯ ಬಳಿ ಆಟೋ ನಿಲ್ಲಿಸಿ, ತಾನು ಗುಲಾಬಿ ಮಾರಾಟ ಮಾಡಲು ಸಹಾಯ ಮಾಡುವ ಭರವಸೆ ನೀಡಿದ್ದಾನೆ. ಬಳಿಕ ಆಕೆಯನ್ನು ಆಟೋದಲ್ಲಿ ಕೂರಿಸಿ ಅರಣ್ಯ ಪ್ರದೇಶಕ್ಕೆ ಕರೆದೊಯ್ದಿದ್ದಾನೆ” ಎಂದು ಪೊಲೀಸರು ತಿಳಿಸಿದ್ದಾರೆ.

ಇದನ್ನು ಓದಿದ್ದೀರಾ? ಬಾಲಕಿ ಮೇಲೆ ಅತ್ಯಾಚಾರ: ಶಾಲಾ ಶಿಕ್ಷಕ, BJP ನಾಯಕನಿಗೆ ಸಾಯೋವರೆಗೂ ಜೈಲು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಆರೋಪಿಯು ಬಾಲಕಿಯನ್ನು ಹತ್ತಿರದ ಅರಣ್ಯ ಪ್ರದೇಶಕ್ಕೆ ಕರೆದೊಯ್ದಿದ್ದು, ಅಲ್ಲಿ ಆಕೆಯ ಮೇಲೆ ಅತ್ಯಾಚಾರ ಎಸಗಿದ್ದಾನೆ. ಅತ್ಯಾಚಾರದ ವೇಳೆ ಆಕೆ ಪ್ರಜ್ಞೆ ತಪ್ಪಿದ್ದು, ಆಕೆ ಸತ್ತಿರುವುದೆಂದು ಭಾವಿಸಿದ ಆರೋಪಿ ಆಕೆಯನ್ನು ಅಲ್ಲೇ ಬಿಟ್ಟು ಪರಾರಿಯಾಗಿದ್ದಾನೆ. ಅದಾದ ಸ್ವಲ್ಪ ಸಮಯದ ಬಳಿಕ ಬಾಲಕಿಗೆ ಪ್ರಜ್ಞೆ ಬಂದಿದ್ದು, ಆಕೆಯ ಕುಟುಂಬ ಸದಸ್ಯರನ್ನು ಸಂಪರ್ಕಿಸಿದ್ದಾಳೆ. ಬಳಿಕ ಆಕೆಯನ್ನು ಕುಟುಂಬಸ್ಥರು ಆಸ್ಪತ್ರೆಗೆ ದಾಖಲಿಸಿ ನಮಗೆ ದೂರು ನೀಡಿದ್ದಾರೆ” ಎಂದು ಪೊಲೀಸರು ಮಾಹಿತಿ ನೀಡಿದ್ದಾರೆ. ಇನ್ನು ಪೊಲೀಸರು ಪೋಕ್ಸೋ ಜತೆಗೆ ಇತರೆ ಅತ್ಯಾಚಾರ ಸಂಬಂಧಿತ ಪ್ರಕರಣಗಳು ಆರೋಪಿಯ ವಿರುದ್ದ ದಾಖಲಿಸಿದ್ದು, ಆರೋಪಿಯನ್ನು ಬಂಧಿಸಿದ್ದಾರೆ.

ದೇಶದಲ್ಲಿ ಪೋಕ್ಸೋ ಪ್ರಕರಣಗಳು ಹೆಚ್ಚಳವಾಗುತ್ತಿದ್ದು, ಪ್ರತಿ ವರ್ಷ ಸುಮಾರು 80,320 ಹೊಸ ಪೋಕ್ಸೋ ಪ್ರಕರಣಗಳು ದಾಖಲಾಗಿವೆ. ಒಟ್ಟು ಅತ್ಯಾಚಾರ ಪ್ರಕರಣಗಳಲ್ಲಿ ಸುಮಾರು ಶೇ. 25 ರಿಂದ 30ರಷ್ಟು ಪ್ರಕರಣಗಳು ಅಪ್ರಾಪ್ತ ಬಾಲಕಿಯರ ಮೇಲೆ ನಡೆಯುತ್ತಿವೆ ಎಂದು ಅಂದಾಜಿಸಲಾಗಿದೆ. ರಾಜ್ಯದಲ್ಲಿ 2024ರಿಂದ 2025ರ ಜುಲೈವರೆಗೆ ಒಟ್ಟು 13,719 ಪೋಕ್ಸೋ ಪ್ರಕರಣಗಳು ದಾಖಲಾಗಿವೆ. ಇದರಲ್ಲಿ 2024ರಲ್ಲಿ 4,064 ಪ್ರಕರಣಗಳು ಮತ್ತು 2025ರ ಜುಲೈವರೆಗೆ 2,544 ಪ್ರಕರಣಗಳು ದಾಖಲಾಗಿರುವುದು ವರದಿಯಾಗಿದೆ. ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ (NCRB) 2023ರ ಅಂಕಿಅಂಶಗಳ ಪ್ರಕಾರ ದೇಶದಲ್ಲಿ ಮಕ್ಕಳ ಮೇಲಿನ ಒಟ್ಟು ಅಪರಾಧಗಳ ಪೈಕಿ ಪೋಕ್ಸೋ ಕಾಯ್ದೆಯಡಿ 67,694 ಪ್ರಕರಣಗಳು ದಾಖಲಾಗಿದ್ದವು, ಇದು ಹಿಂದಿನ ವರ್ಷಗಳಿಗಿಂತ ಹೆಚ್ಚಳವನ್ನು ತೋರಿಸುತ್ತದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

‘ಟ್ರಂಪ್ ನಿಯಂತ್ರಣದಲ್ಲಿ ಮೋದಿ’: ಲೋಕಸಭೆಯ ಭಾಷಣದಲ್ಲಿ ಅಮೆರಿಕದ ಬಗ್ಗೆ ಮೌನಕ್ಕೆ ರಾಹುಲ್ ವಾಗ್ದಾಳಿ

ಮಧ್ಯಪ್ರಾಚ್ಯ ಬಿಕ್ಕಟ್ಟಿನ ಕುರಿತು ಭಾರತದ ನಿಲುವಿನ ಬಗ್ಗೆ ರಾಜಕೀಯ ವಾಗ್ದಾಳಿ ಸೋಮವಾರ...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...