ಛತ್ತೀಸ್‌ಗಢ| ಕಂದಕಕ್ಕೆ ಬಿದ್ದ ಬಸ್; 12 ಸಾವು, 14 ಮಂದಿಗೆ ಗಾಯ

Date:

ಛತ್ತೀಸ್‌ಗಢದ ದುರ್ಗ್ ಜಿಲ್ಲೆಯ ಕುಮ್ಹಾರಿ ಪ್ರದೇಶದಲ್ಲಿ ನಡೆದ ಭೀಕರ ಬಸ್ ಅಪಘಾತದಲ್ಲಿ ಕನಿಷ್ಠ 12 ಪ್ರಯಾಣಿಕರು ಸಾವನ್ನಪ್ಪಿದ್ದಾರೆ ಮತ್ತು 14 ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಮಂಗಳವಾರ ರಾತ್ರಿ 8.30 ಕ್ಕೆ ಈ ಘಟನೆ ನಡೆದಿದ್ದು, ಈ ಬಗ್ಗೆ ಮಾಹಿತಿ ನೀಡಿರುವ ಅಧಿಕಾರಿ ದುರ್ಗ್‌ನ ಜಿಲ್ಲಾಧಿಕಾರಿ ರಿಚಾ ಪ್ರಕಾಶ್ ಚೌಧರಿ, “ದುರ್ಗ್‌ನಲ್ಲಿ ಕಾರ್ಮಿಕರಿದ್ದ ಬಸ್ ಕಂದಕಕ್ಕೆ ಬಿದ್ದಿದ್ದು 12 ಪ್ರಯಾಣಿಕರು ಮೃತಪಟ್ಟಿದ್ದು, 14 ಮಂದಿ ತೀವ್ರವಾಗಿ ಗಾಯಗೊಂಡಿದ್ದಾರೆ. ಗಾಯಾಳುಗಳನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ” ಎಂದು ತಿಳಿಸಿದರು.

ಇದನ್ನು ಓದಿದ್ದೀರಾ?   ಚುನಾವಣಾ ಪ್ರಚಾರದ ವೇಳೆ ಶೋಭಾ ಕರಂದ್ಲಾಜೆ ಕಾರು ಅಪಘಾತ: ಬಿಜೆಪಿ ಕಾರ್ಯಕರ್ತ ಸಾವು

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಗಾಯಗೊಂಡವರ ಪೈಕಿ ಹನ್ನೆರಡು ಜನರನ್ನು ಎಐಐಎಂಎಸ್ (ರಾಯಪುರ) ಗೆ ಕಳುಹಿಸಲಾಗಿದೆ. ಉಳಿದ ಇಬ್ಬರು ಖಾಸಗಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಎಲ್ಲರ ಸ್ಥಿತಿ ಪ್ರಸ್ತುತ ಸ್ಥಿರವಾಗಿದೆ. ನಾವು ಅವರಿಗೆ ಸಾಧ್ಯವಾದಷ್ಟು ಉತ್ತಮವಾದ ಆರೈಕೆಯನ್ನು ನೀಡುತ್ತಿದ್ದೇವೆ” ಎಂದು ಎಂದು ಜಿಲ್ಲಾಧಿಕಾರಿ ಹೇಳಿದರು.

“ಬಸ್ಸಿನೊಳಗೆ ಸಿಲುಕಿರುವ ಪ್ರಯಾಣಿಕರನ್ನು ಹೊರತೆಗೆಯುವ ಪ್ರಕ್ರಿಯೆ ನಡೆಯುತ್ತಿದೆ. ಅಪಘಾತಕ್ಕೆ ಕಾರಣ ಇನ್ನೂ ತಿಳಿದುಬಂದಿಲ್ಲ” ಎಂದು ಜಿಲ್ಲಾಧಿಕಾರಿ ಮಾಹಿತಿ ನೀಡಿದರು.

ದುರ್ಗ್ ಬಸ್ ಅಪಘಾತದ ಕುರಿತು ಡಿಎಂ ರಿಚಾ ಪ್ರಕಾಶ್ ಚೌಧರಿ ಮಾತನಾಡಿ, “ಡಿಯಾ ಡಿಸ್ಟಿಲ್ಲರ್ಸ್‌ನ ಕಾರ್ಮಿಕರನ್ನು ಹೊತ್ತೊಯ್ಯುತ್ತಿದ್ದ ಬಸ್ ಹಳ್ಳಕ್ಕೆ ಬಿದ್ದು 12 ಜನರು ಸಾವನ್ನಪ್ಪಿದ್ದಾರೆ. 14 ಜನರನ್ನು ಆಸ್ಪತ್ರೆಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ರೋಗಿಗಳಿಗೆ ಅತ್ಯುತ್ತಮ ಚಿಕಿತ್ಸೆ ನೀಡಲಾಗುತ್ತಿದೆ ಅಪಘಾತದ ಕಾರಣ ತಿಳಿಯಲು ಮ್ಯಾಜಿಸ್ಟ್ರೇಟ್ ತನಿಖೆ ನಡೆಸಲಾಗುತ್ತಿದೆ. ತನಿಖೆ ಬಳಿಕ ಆರೋಪಿಗಳ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳಲಾಗುವುದು” ಎಂದು ತಿಳಿಸಿದರು.

ಈ ಘಟನೆಯ ಬಗ್ಗೆ ದುಃಖ ವ್ಯಕ್ತಪಡಿಸಿದ ಮುಖ್ಯಮಂತ್ರಿ ವಿಷ್ಣು ದೇವ್ ಸಾಯಿ ಅವರು ಎಕ್ಸ್‌ (ಟ್ವಿಟ್ಟರ್) ಪೋಸ್ಟ್ ಮಾಡಿದ್ದಾರೆ. “ಖಾಸಗಿ ಸಂಸ್ಥೆಯೊಂದರ ಉದ್ಯೋಗಿಗಳಿದ್ದ ಬಸ್ ದುರ್ಗ್‌ನ ಕುಮ್ಹಾರಿ ಬಳಿ ಅಪಘಾತ ಸಂಭವಿಸಿದ ಸುದ್ದಿ ಕೇಳಿ ನಾನು ದುಃಖಿತನಾಗಿದ್ದೇನೆ” ಎಂದಿದ್ದಾರೆ.

ಇದನ್ನು ಓದಿದ್ದೀರಾ?   ಬೆಂಗಳೂರು | ಚಾಲಕನ ನಿಯಂತ್ರಣ ತಪ್ಪಿ ಕೆಎಸ್‌ಆರ್‌ಟಿಸಿ ಬಸ್ ಅಪಘಾತ

“ಅಪಘಾತದಲ್ಲಿ 11 ಉದ್ಯೋಗಿಗಳು ಸಾವನ್ನಪ್ಪಿರುವ ಸುದ್ದಿಯು ನನಗೂ ಬಂದಿದೆ. ಮೃತರ ಆತ್ಮಕ್ಕೆ ಶಾಂತಿ ಸಿಗಲಿ ಮತ್ತು ಮೃತರ ಕುಟುಂಬಗಳಿಗೆ ಶಕ್ತಿ ನೀಡಲಿ ಎಂದು ಭಗವಂತನಲ್ಲಿ ಪ್ರಾರ್ಥಿಸುತ್ತೇನೆ. ಗಾಯಗೊಂಡಿರುವ ಚಿಕಿತ್ಸೆ ನೀಡಲು ಸೂಕ್ತ ವ್ಯವಸ್ಥೆ ಮಾಡಲಾಗಿದೆ. ಅವರು ಶೀಘ್ರ ಗುಣಮುಖರಾಗಲಿ ಎಂದು ಹಾರೈಸುತ್ತೇನೆ” ಎಂದು ಮುಖ್ಯಮಂತ್ರಿ ಹೇಳಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...