ಉತ್ತರ ಪ್ರದೇಶ, ಬಿಹಾರದಲ್ಲಿ ಭಾರೀ ಮಳೆ; ಏ. 10-12ರ ನಡುವೆ ಸಿಡಿಲು ಬಡಿದು 126 ಮಂದಿ ಸಾವು

Date:

ಕಳೆದ ಎರಡು ದಿನಗಳಲ್ಲಿ ಮಧ್ಯ ಮತ್ತು ಪೂರ್ವ ಭಾರತದಲ್ಲಿ, ಹೆಚ್ಚಾಗಿ ಉತ್ತರ ಪ್ರದೇಶ ಮತ್ತು ಬಿಹಾರದಲ್ಲಿ ಸಿಡಿಲು ಬಡಿದು ಸುಮಾರು 126 ಮಂದಿ ಸಾವನ್ನಪ್ಪಿದ್ದಾರೆ. ಏಪ್ರಿಲ್ 10-12ರ ನಡುವೆ ಇಷ್ಟೊಂದು ಸಾವುಗಳು ಸಂಭವಿಸಿದೆ.

ಮುಂದಿನ ಕೆಲವು ದಿನಗಳವರೆಗೆ ಉತ್ತರಾಖಂಡ, ಉತ್ತರ ಪ್ರದೇಶ, ಮಧ್ಯಪ್ರದೇಶ ಮತ್ತು ಪೂರ್ವ ಭಾರತದಲ್ಲಿ ಭಾರೀ ಗಾಳಿ, ಆಲಿಕಲ್ಲು ಮಳೆ ಮುಂದುವರೆಯಲಿದೆ ಎಂದು ಈಗಾಗಲೇ ಹವಾಮಾನ ಇಲಾಖೆ ಮುನ್ಸೂಚನೆ ನೀಡಿದೆ. ಸಾರ್ವಜನಿಕರು ಮುನ್ನೆಚ್ಚರಿಕೆ ವಹಿಸುವಂತೆಯೂ ಸಲಹೆ ನೀಡಲಾಗಿದೆ.

ಇದನ್ನು ಓದಿದ್ದೀರಾ? ಉತ್ತರ ಕರ್ನಾಟಕದಲ್ಲಿ ಮಳೆ ಅಬ್ಬರ: 16 ಜಿಲ್ಲೆಗಳಲ್ಲಿ 4 ದಿನ ಭಾರೀ ಮಳೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬಿಹಾರದ ರಾಜ್ಯ ವಿಪತ್ತು ನಿರ್ವಹಣಾ ಪ್ರಾಧಿಕಾರದ ಪ್ರಕಾರ ಏಪ್ರಿಲ್ 10 ಮತ್ತು 11ರ ನಡುವೆ ಗುಡುಗು ಮತ್ತು ಮಿಂಚಿನ ಪರಿಣಾಮವಾಗಿ ರಾಜ್ಯದಲ್ಲಿ ಕನಿಷ್ಠ 82 ಜನರು ಪ್ರಾಣ ಕಳೆದುಕೊಂಡಿದ್ದಾರೆ. ಈ ನಡುವೆ ಉತ್ತರ ಪ್ರದೇಶ ರಾಜ್ಯ ವಿಪತ್ತು ನಿರ್ವಹಣಾ ಅಧಿಕಾರಿಗಳು ವಿವಿಧ ಜಿಲ್ಲೆಗಳಲ್ಲಿ, ವಿಶೇಷವಾಗಿ ನೇಪಾಳ ಗಡಿಯ ಬಳಿ ಕನಿಷ್ಠ 23 ಜನರು ಸಾವನ್ನಪ್ಪಿದ್ದಾರೆ ಎಂದು ವರದಿ ಮಾಡಿದ್ದಾರೆ.

ಛತ್ತೀಸ್‌ಗಢದಲ್ಲಿ ಆರು ಮಂದಿ, ಜಾರ್ಖಂಡ್‌ನಲ್ಲಿ ಐವರು, ಒಡಿಶಾದಲ್ಲಿ ನಾಲ್ವರು ಸಿಡಿಲು ಬಡಿದು ಮೃತಪಟ್ಟಿದ್ದಾರೆ. ಮಿಂಚಿನಿಂದ ಕನಿಷ್ಠ ಎಂಟು ಮಂದಿ ಸಾವನ್ನಪ್ಪಿದ್ದಾರೆ ಎಂದು ನೇಪಾಳ ಕೂಡಾ ದೃಢಪಡಿಸಿದೆ. ಮಧ್ಯಪ್ರದೇಶ, ಮಹಾರಾಷ್ಟ್ರ ಮತ್ತು ಛತ್ತೀಸ್‌ಗಢದಂತಹ ಮಧ್ಯ ಭಾರತದ ರಾಜ್ಯಗಳು, ಉತ್ತರ ಪ್ರದೇಶ, ಬಿಹಾರ ಮತ್ತು ಒಡಿಶಾದಂತಹ ಪೂರ್ವ ರಾಜ್ಯಗಳು ಗುಡುಗು, ಮಿಂಚು, ಸಿಡಿಲಿನಿಂದ ಹೆಚ್ಚು ಹಾನಿ ಅನುಭವಿಸಿದೆ.

ಇದಕ್ಕೆ ವ್ಯತಿರಿಕ್ತವಾಗಿ ಗುಜರಾತ್‌ನಂತಹ ಪಶ್ಚಿಮ ಪ್ರದೇಶದಲ್ಲಿ ಬಿಸಿಗಾಳಿ ಅಪ್ಪಳಿಸುವ ಸಾಧ್ಯತೆಯಿದೆ ಎಂದು ಹವಾಮಾನ ಇಲಾಖೆ ಹೇಳಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...