ಮಹಾರಾಷ್ಟ್ರ | ಕಂದಕಕ್ಕೆ ಬಸ್ ಉರುಳಿ 13 ಸಾವು ; ಹಲವರಿಗೆ ಗಾಯ

Date:

  • ಮಹಾರಾಷ್ಟ್ರ ರಾಯ್‌ಗಢದ ಖೋಪೋಲಿಯಲ್ಲಿ ಅವಘಡ
  • ಖಾಸಗಿ ಬಸ್‌ನಲ್ಲಿ ಪ್ರಯಾಣ ಮಾಡುತ್ತಿದ್ದ 41 ಪ್ರಯಾಣಿಕರು

ಮಹಾರಾಷ್ಟ್ರ ರಾಜ್ಯದ ರಾಯ್‌ಗಢ ಜಿಲ್ಲೆಯ ಖೋಪೋಲಿಯ ಬೋಘಾಟ್ ಪ್ರದೇಶದಲ್ಲಿ ಖಾಸಗಿ ಬಸ್‌ವೊಂದು ಚಾಲಕನ ನಿಯಂತ್ರಣ ತಪ್ಪಿ ಕಂದಕಕ್ಕೆ ಉರುಳಿದ ಪರಿಣಾಮ 13 ಮಂದಿ ಮೃತಪಟ್ಟಿರುವ ಘಟನೆ ಶನಿವಾರ (ಏಪ್ರಿಲ್ 15) ನಸುಕಿನ ಜಾವ ನಡೆದಿದೆ.

ಘಟನೆಯಲ್ಲಿ ಸುಮಾರು 25 ಮಂದಿ ಗಂಭೀರವಾಗಿ ಗಾಯಗೊಂಡಿದ್ದಾರೆ. ಅವರನ್ನು ಸಮೀಪದ ಆಸ್ಪತ್ರೆಗೆ ರವಾನಿಸಲಾಗಿದೆ ಎಂದು ಪೊಲೀಸರು ಹೇಳಿದ್ದಾರೆ.

ಪುಣೆಯ ಪಿಂಪಲ್‌ ಗುರವ್‌ನಿಂದ ಮುಂಬೈ ಗೋರೆಗಾಂವ್ ಕಡೆಗೆ ತೆರಳುತ್ತಿದ್ದ ಖಾಸಗಿ ಬಸ್ ನಲ್ಲಿ ಒಟ್ಟು 41 ಮಂದಿ ಪ್ರಯಾಣಿಕರಿದ್ದರು ಎಂದು ಹೇಳಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಪುಣೆ-ರಾಯಗಢ ಗಡಿ ಭಾಗದ ಬೋರ್ಘಾಟ್‌ನಲ್ಲಿ ಮುಂಜಾನೆ 4.30ಕ್ಕೆ ಅಪಘಾತ ಸಂಭವಿಸಿದೆ. ರಸ್ತೆಯಿಂದ ಕಂದಕಕ್ಕೆ ಉರುಳಿದ ರಭಸಕ್ಕೆ ಬಸ್ ಸಂಪೂರ್ಣವಾಗಿ ನಜ್ಜು ಗುಜ್ಜಾಗಿದೆ. ಪ್ರಯಾಣಿಕರ ಒಯ್ಯುತ್ತಿದ್ದ ಚೀಲಗಳು ಸೇರಿದಂತೆ ಇತರೆ ವಸ್ತುಗಳು ಚೆಲ್ಲಾ ಪಿಲ್ಲಿಯಾಗಿ ಬಿದ್ದಿವೆ.

ಸುದ್ದಿ ತಿಳಿದು ಸ್ಥಳಕ್ಕೆ ಆಗಮಿಸಿರುವ ಪೊಲೀಸರು ಪರಿಶೀಲನೆ ನಡೆಸುತ್ತಿದ್ದಾರೆ.

ಈ ಸುದ್ದಿ ಓದಿದ್ದೀರಾ? ರಾಷ್ಟ್ರೀಯ ಪಕ್ಷಗಳು ಪ್ರಾದೇಶಿಕ ಪಕ್ಷಗಳೊಂದಿಗೆ ಕಾರ್ಯ ನಿರ್ವಹಿಸಬೇಕು: ಡಿ ರಾಜಾ

“ರಕ್ಷಣಾ ಕಾರ್ಯಾಚರಣೆ ಮುಂದುವರಿದಿದೆ” ಎಂದು ಮಹಾರಾಷ್ಟ್ರ ರಾಯ್‌ಗಢ ಪೊಲೀಸ್‌ ವರಿಷ್ಠಾಧಿಕಾರಿ (ಎಸ್‌ಪಿ) ಸೋಮನಾಥ್‌ ಜಾರ್ಜ್‌ ತಿಳಿಸಿದರು.

ಅಪಘಾತ ನಡೆದ ಸ್ಥಳಕ್ಕೆ ಆಂಬುಲೆನ್ಸ್‌ಗಳು ಮತ್ತು ಪೊಲೀಸ್‌ ವಾಹನಗಳು ಧಾವಿಸಿ ಗಾಯಾಳುಗಳಿಗೆ ನೆರವಾಗಿವೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...