ಆಂಧ್ರ ರೈಲು ಅಪಘಾತದಲ್ಲಿ 14 ಸಾವು; ದರಂತಕ್ಕೆ ಮಾನವ ವೈಫಲ್ಯ ಕಾರಣ ಶಂಕೆ

Date:

ನಿನ್ನೆ(ಅಕ್ಟೋಬರ್ 29) ಆಂಧ್ರಪ್ರದೇಶದ ವಿಜಯನಗರಂ ಜಿಲ್ಲೆಯ ಹೌರಾ – ಚೆನ್ನೈ ಮಾರ್ಗದಲ್ಲಿ ಸಂಭವಿಸಿದ ರೈಲು ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ 14ಕ್ಕೆ ಏರಿದ್ದು, 50ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ.

ಮೃತರಲ್ಲಿ ಏಳು ಮಂದಿಯನ್ನು ಈಗಾಗಲೇ ಗುರುತಿಸಲಾಗಿದ್ದು, ಉಳಿದವರನ್ನು ಗುರುತಿಸುವ ಪ್ರಕ್ರಿಯೆ ನಡೆಯುತ್ತಿದೆ. ಅಪಘಾತದಲ್ಲಿ ಒಟ್ಟು 54 ಮಂದಿ ಗಾಯಗೊಂಡಿದ್ದು, ಇವರಲ್ಲಿ 39 ಮಂದಿಯನ್ನು ವಿಜಯನಗರಂನ ಆಸ್ಪತ್ರೆಗೆ ಹಾಗೂ ಉಳಿದವರನ್ನು ಇತರೆ ಆಸ್ಪತ್ರೆಗಳಿಗೆ ಚಿಕಿತ್ಸೆಗಾಗಿ ದಾಖಲಿಸಲಾಗಿದೆ.

ಹಳಿತಪ್ಪಿದ ಮತ್ತು ತೊಂದರೆಗೀಡಾದ ಕೋಚ್‌ಗಳನ್ನು ಹೊರತುಪಡಿಸಿ, ಉಳಿದ ಎಲ್ಲ ಕೋಚ್‌ಗಳನ್ನು ಸ್ಥಳದಿಂದ ತೆರವುಗೊಳಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ರಕ್ಷಣಾ ಕಾರ್ಯಾಚರಣೆಗಳು ನಡೆಯುತ್ತಿವೆ. ಎಲ್ಲ ಪ್ರಯಾಣಿಕರು ಸ್ಥಳಾಂತರಗೊಂಡಿದ್ದಾರೆ. ಪ್ರಧಾನಿ ನರೇಂದ್ರ ಮೋದಿ ಅವರು ಪರಿಸ್ಥಿತಿಯನ್ನು ಪರಿಶೀಲಿಸಿದ್ದಾರೆ. ಆಂಧ್ರಪ್ರದೇಶದ ಮುಖ್ಯಮಂತ್ರಿ ವೈ.ಎಸ್ ಜಗನ್ ಮೋಹನ್ ರೆಡ್ಡಿ ಅವರೊಂದಿಗೆ ಮಾತನಾಡಿದ್ದಾರೆ. ರಾಜ್ಯ ಸರ್ಕಾರ ಮತ್ತು ರೈಲ್ವೆ ತಂಡಗಳು ಸಮನ್ವಯದಿಂದ ಕೆಲಸ ಮಾಡುತ್ತಿವೆ” ಎಂದು ಕೇಂದ್ರ ರೈಲ್ವೇ ಸಚಿವ ಅಶ್ವಿನಿ ವೈಷ್ಣವ್ ತಿಳಿಸಿದ್ದಾರೆ.

ಆಂಧ್ರಪ್ರದೇಶ ಮುಖ್ಯಮಂತ್ರಿ ಜಗನ್ ಮೋಹನ್ ರೆಡ್ಡಿ ಮೃತರ ಕುಟುಂಬಕ್ಕೆ ತಲಾ 10 ಲಕ್ಷ ರೂ. ಹಾಗೂ ಗಾಯಗೊಂಡವರಿಗೆ 2 ಲಕ್ಷ ರೂ. ಪರಿಹಾರ ನೀಡುವಂತೆ ಅಧಿಕಾರಿಗಳಿಗೆ ಸೂಚಿಸಿದ್ದಾರೆ.

ಮೃತರ ಕುಟುಂಬಗಳಿಗೆ 10 ಲಕ್ಷ ರೂ. ಹಾಗೂ ಗಾಯಾಳುಗಳಿಗೆ 50 ಸಾವಿರ ರೂ. ಪರಿಹಾರ ಘೋಷಿಸಲಾಗಿದೆ ಎಂದು ಕೇಂದ್ರ ರೈಲ್ವೆ ಸಚಿವ ಅಶ್ವಿನಿ ವೈಷ್ಣವ್ ಹೇಳಿದ್ದಾರೆ.

ಈ ಸುದ್ದಿ ಓದಿದ್ದೀರಾ? ನಾರಾಯಣ ಮೂರ್ತಿಯ ವಾರಕ್ಕೆ 70 ಗಂಟೆ ದುಡಿಮೆ ಹೇಳಿಕೆ: ನೆಟ್ಟಿಗರಿಂದ ಆಕ್ರೋಶ

ಪ್ರಧಾನಿ ನರೇಂದ್ರ ಮೋದಿ ರಾಷ್ಟ್ರೀಯ ಪರಿಹಾರ ನಿಧಿಯಿಂದ ಮೃತರ ಕುಟುಂಬಕ್ಕೆ 2 ಲಕ್ಷ ರೂ. ಹಾಗೂ ಗಾಯಾಳುಗಳಿಗೆ 50 ಸಾವಿರ ರೂ. ಧನಸಹಾಯ ಘೋಷಿಸಿದ್ದಾರೆ ಎಂದು ಪಿಎಂಒ ಕಚೇರಿ ತಿಳಿಸಿದೆ.

ಪ್ರಾಥಮಿಕ ಮಾಹಿತಿಗಳ ಪ್ರಕಾರ ರೈಲು ದುರಂತಕ್ಕೆ ಮಾನವ ವೈಫಲ್ಯವೇ ಪ್ರಮುಖ ಕಾರಣ ಎಂದು ಶಂಕಿಸಲಾಗಿದೆ.

ರೈಲು ದುರಂತದ ಹಿನ್ನೆಲೆಯಲ್ಲಿ ದೇಶಾದ್ಯಂತ ಹಲವಾರು ರೈಲುಗಳ ಮಾರ್ಗಗಳನ್ನು ರದ್ದುಗೊಳಿಸಲಾಗಿದೆ ಅಥವಾ ಅಲ್ಪಾವಧಿಗೆ ಸ್ಥಗಿತಗೊಳಿಸಲಾಗಿದೆ ಎಂದು ರೈಲ್ವೆ ಸಚಿವಾಲಯವು ಟ್ವಿಟರ್‌ನಲ್ಲಿ ತಿಳಿಸಿದೆ.

ಜೂನ್ 2 ರಂದು ಒಡಿಶಾದ ಬಹನಾಗಾ ಬಜಾರ್ ನಿಲ್ದಾಣದ ಬಾಲಸೋರ್‌ನಲ್ಲಿ ನಡೆದ ದುರಂತದಲ್ಲಿ 288 ಮಂದಿ ಮೃತಪಟ್ಟು, 1,100 ಕ್ಕೂ ಹೆಚ್ಚು ಜನರು ಗಾಯಗೊಂಡಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...