5 ವರ್ಷಗಳಲ್ಲಿ 140 ಖಾಸಗಿ ವಿವಿ ಆರಂಭ; ಗುಜರಾತ್‌ನಲ್ಲೇ ಹೆಚ್ಚು

Date:

ಕಳೆದ ಐದು ವರ್ಷಗಳಲ್ಲಿ ದೇಶಾದ್ಯಂತ ಒಟ್ಟು 140 ಖಾಸಗಿ ವಿಶ್ವವಿದ್ಯಾನಿಲಯಗಳನ್ನು ಸ್ಥಾಪಿಸಲಾಗಿದೆ. ಹೆಚ್ಚಿನ ವಿವಿಗಳು ಗುಜರಾತ್‌ನಲ್ಲಿ ಆರಂಭವಾಗಿದ್ದು, ನಂತರದ ಸ್ಥಾನಗಳಲ್ಲಿ ಮಹಾರಾಷ್ಟ್ರ ಮತ್ತು ಮಧ್ಯಪ್ರದೇಶ ರಾಜ್ಯಗಳಿವೆ ಎಂದು ಶಿಕ್ಷಣ ಸಚಿವಾಲಯದ ಅಂಕಿಅಂಶಗಳು ತಿಳಿಸಿವೆ.

“ಕಳೆದ ಐದು ವರ್ಷಗಳಲ್ಲಿ ಗುಜರಾತ್‌ನಲ್ಲಿ 28 ಖಾಸಗಿ ವಿಶ್ವವಿದ್ಯಾಲಯಗಳನ್ನು ಸ್ಥಾಪಿಸಲಾಗಿದೆ. ಮಹಾರಾಷ್ಟ್ರದಲ್ಲಿ 15 ವಿಶ್ವವಿದ್ಯಾಲಯಗಳನ್ನು ತೆರೆಯಲಾಗಿದೆ” ಎಂದು ಪಿಟಿಐ ವರದಿ ಮಾಡಿದೆ.

ಈ ಅವಧಿಯಲ್ಲಿ ಮಧ್ಯಪ್ರದೇಶದಲ್ಲಿ 14, ಕರ್ನಾಟಕದಲ್ಲಿ 10 ವಿಶ್ವವಿದ್ಯಾಲಯಗಳನ್ನು ತೆರೆಯಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

“ಸಂಬಂಧಿತ ರಾಜ್ಯ ಶಾಸಕಾಂಗವು ಅಂಗೀಕರಿಸಿದ ಕಾಯಿದೆ ಮತ್ತು ಸಂಬಂಧಿತ ರಾಜ್ಯ ಸರ್ಕಾರ ಹೊರಡಿಸಿದ ಅಧಿಸೂಚನೆಯ ಅನ್ವಯ ಖಾಸಗಿ ವಿಶ್ವವಿದ್ಯಾನಿಲಯಗಳನ್ನು  ಸ್ಥಾಪಿಸಲಾಗಿದೆ” ಎಂದು ಶಿಕ್ಷಣ ಸಚಿವಾಲಯದ ಹಿರಿಯ ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

“ಖಾಸಗಿ ವಿಶ್ವವಿದ್ಯಾನಿಲಯದ ಹೆಸರುಗಳನ್ನು ವಿಶ್ವವಿದ್ಯಾನಿಲಯ ಅನುದಾನ ಆಯೋಗ (ಯುಜಿಸಿ) ಕಾಯಿದೆ 1956ರ ಸೆಕ್ಷನ್ 2 (ಎಫ್) ಪ್ರಕಾರ, ವಿಶ್ವವಿದ್ಯಾಲಯದಿಂದ ಅಧಿಸೂಚನೆಯನ್ನು ಸ್ವೀಕರಿಸಿದ ನಂತರ ವಿವಿಗಳ ಪಟ್ಟಿಯಲ್ಲಿ ಯುಜಿಸಿ ಸೇರಿಸಿದೆ” ಎಂದಿದ್ದಾರೆ.

ಅಂತಹ ಖಾಸಗಿ ವಿಶ್ವವಿದ್ಯಾಲಯಗಳು ಯುಜಿಸಿಯ ನಿರ್ದಿಷ್ಟ ಅನುಮೋದನೆಯಿಲ್ಲದೆಯೂ ಸಾಮಾನ್ಯ ಪದವಿ ಪ್ರದಾನ ಮಾಡುವ ಅಧಿಕಾರ ಹೊಂದಿವೆ ಎಂದು ಅಧಿಕಾರಿ ವಿವರಿಸಿದ್ದಾರೆ.

“ಆದರೆ ವೃತ್ತಿಪರ ಮತ್ತು ವೈದ್ಯಕೀಯ ಶಿಕ್ಷಣ ನೀಡಲು ಸಂಬಂಧಪಟ್ಟ ಶಾಸನಬದ್ಧ ಸಂಸ್ಥೆಗಳು ಅನುಮೋದನೆ ನೀಡಬೇಕು. ಆಲ್ ಇಂಡಿಯನ್ ಕೌನ್ಸಿಲ್ ಫಾರ್ ಟೆಕ್ನಿಕಲ್ ಎಜುಕೇಶನ್, ನ್ಯಾಷನಲ್ ಮೆಡಿಕಲ್ ಕಮಿಷನ್, ಡೆಂಟಲ್ ಕೌನ್ಸಿಲ್ ಆಫ್ ಇಂಡಿಯಾದಂತಹ ಸಂಸ್ಥೆಗಳ ನಿಯಮಗಳು ಈ ಕೋರ್ಸ್‌ಗಳನ್ನು ನಿಯಂತ್ರಿಸುತ್ತವೆ” ಎಂದು ಮಾಹಿತಿ ನೀಡಿದ್ದಾರೆ.

ಕಳೆದ ಐದು ವರ್ಷಗಳಲ್ಲಿ ಛತ್ತೀಸ್‌ಗಢದಲ್ಲಿ ಏಳು ಖಾಸಗಿ ವಿಶ್ವವಿದ್ಯಾಲಯಗಳನ್ನು ಸ್ಥಾಪಿಸಲಾಗಿದೆ. ಜಾರ್ಖಂಡ್ ಮತ್ತು ರಾಜಸ್ಥಾನ ರಾಜ್ಯಗಳಲ್ಲಿ ಈ ಅವಧಿಯಲ್ಲಿ ತಲಾ ಆರು ವಿಶ್ವವಿದ್ಯಾಲಯಗಳನ್ನು ತೆರೆಯಲಾಗಿದೆ.

ಬಿಹಾರ, ಒಡಿಶಾ, ಉತ್ತರಾಖಂಡ ಮತ್ತು ತೆಲಂಗಾಣದಲ್ಲಿ ತಲಾ ಐದು ವಿಶ್ವವಿದ್ಯಾನಿಲಯಗಳನ್ನು ಸ್ಥಾಪಿಸಿದರೆ ಆಂಧ್ರಪ್ರದೇಶ, ಹರಿಯಾಣ, ಮಣಿಪುರ, ಒಡಿಶಾ, ತಮಿಳುನಾಡು, ಸಿಕ್ಕಿಂ ಮತ್ತು ಉತ್ತರ ಪ್ರದೇಶದಲ್ಲಿ ತಲಾ ನಾಲ್ಕು ವಿಶ್ವವಿದ್ಯಾಲಯಗಳನ್ನು ಸ್ಥಾಪಿಸಲಾಗಿದೆ.

“ಈ ವಿಶ್ವವಿದ್ಯಾನಿಲಯಗಳ ಸಮಾಲೋಚನೆ ನಿಯಮಿತವಾಗಿ ಯುಜಿಸಿಯೊಂದಿಗೆ ನಡೆಯುತ್ತದೆ. ನಿಯಮಾವಳಿಗಳನ್ನು ಅನುಸರಿಸಲಾಗುತ್ತಿದೆಯೇ ಎಂದು ಯುಜಿಸಿ ಖಚಿಪಡಿಸಿಕೊಳ್ಳುತ್ತದೆ. ಈ ಸಂಸ್ಥೆಗಳು ಯಾವುದೇ ಉಲ್ಲಂಘನೆ ಮಾಡಿರುವುದು ಈವರೆಗೆ ಯುಜಿಸಿಗೆ ಕಂಡುಬಂದಿಲ್ಲ” ಎಂದು ಅಧಿಕಾರಿ ಪ್ರತಿಕ್ರಿಯಿಸಿದ್ದಾರೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...