ಜಮ್ಮು- ಕಾಶ್ಮೀರ | ಪೂಂಚ್‌ನಲ್ಲಿ ಪಾಕಿಸ್ತಾನದಿಂದ ಶೆಲ್ ದಾಳಿ: 15 ಮಂದಿ ನಾಗರಿಕರು ಮೃತ್ಯು; 43 ಮಂದಿಗೆ ಗಾಯ

Date:

ಪಹಲ್ಗಾಮ್‌ ಉಗ್ರದ ದಾಳಿಗೆ ಪ್ರತಿಯಾಗಿ ಭಾರತೀಯ ಸೇನೆಯು ಪಾಕಿಸ್ತಾನ ಹಾಗೂ ಪಾಕ್ ಅಕ್ರಮಿತ ಕಾಶ್ಮೀರದ ಸುಮಾರು ಒಂಭತ್ತು ಕಡೆಗಳಲ್ಲಿ ‘ಆಪರೇಷನ್ ಸಿಂಧೂರ್’ ಹೆಸರಿನಲ್ಲಿ ಉಗ್ರರು ಮತ್ತು ಅವರ ಅಡಗುತಾಣಗಳನ್ನು ಗುರಿಯಾಗಿಸಿಕೊಂಡು ದಾಳಿ ನಡೆಸಿದೆ. ಇದನ್ನು ಸಹಿಸಿಕೊಳ್ಳಲಾಗದ ಪಾಕಿಸ್ತಾನದ ಸೇನೆಯು ಭಾರತದ ಅಡಿಯಲ್ಲಿರುವ ಪೂಂಚ್ ಪ್ರದೇಶದಲ್ಲಿ ಜನ ವಾಸವಾಗಿರುವ ಪ್ರದೇಶಗಳು, ರಸ್ತೆಗಳ ಮೇಲೆ ದಾಳಿ ನಡೆಸಿದೆ. ಈ ಶೆಲ್ ದಾಳಿಯಿಂದ 15 ಮಂದಿ ನಾಗರಿಕರು ಮೃತಪಟ್ಟಿದ್ದು, 43 ಮಂದಿ ಗಾಯಗೊಂಡಿರುವುದಾಗಿ ವರದಿಯಾಗಿದೆ.

ಶೆಲ್ ದಾಳಿಯಿಂದ ಮನೆ ಮತ್ತು ಅಂಗಡಿಗಳಿಗೆ ಗುಂಡು ತಾಕಿರುವ ದೃಶ್ಯಗಳು ಸೋಷಿಯಲ್ ಮೀಡಿಯಾಗಳಲ್ಲಿ ಹರಿದಾಡುತ್ತಿದೆ. ಪಾಕಿಸ್ತಾನವು ಅಮಾಯಕ ಪ್ರವಾಸಿಗರು, ಮನೆಗಳಲ್ಲಿರುವ ನಿರಾಯುಧ ನಾಗರಿಕರನ್ನು ಗುರಿಯಾಗಿರಿಸಿಕೊಂಡು ದಾಳಿ ನಡೆಸಿರುವುದರಿಂದ ಗಡಿಭಾಗದಲ್ಲಿ ಉದ್ವಿಗ್ನ ಸ್ಥಿತಿ ನಿರ್ಮಾಣಗೊಂಡಿದೆ.

ಎಲ್‌ಒಸಿಯ ಪ್ರದೇಶವಾಗಿರುವ ಪೂಂಚ್ ಮತ್ತು ರಾಜೌರಿ, ತಂಗ್ದಾರ್ ಪ್ರದೇಶಗಳಲ್ಲಿನ ಜನವಸತಿಯ ಪ್ರದೇಶಗಳ ಹಲವೆಡೆ ಶೆಲ್ ದಾಳಿ ನಡೆಸಿರುವ ಪಾಕಿಸ್ತಾನವು, ನಾಗರಿಕರನ್ನು ಗುರಿಯಾಗಿಸಿರುವುದಾಗಿ ವರದಿಯಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಜಮ್ಮು ಮತ್ತು ಕಾಶ್ಮೀರದ ಪೂಂಚ್‌ನಲ್ಲಿ ಪಾಕಿಸ್ತಾನ ಸೇನೆಯ ಶೆಲ್ ದಾಳಿಯಲ್ಲಿ ಸಾವನ್ನಪ್ಪಿದವರ ಪೈಕಿ 4 ಮಂದಿ ಕೇವಲ ಮಕ್ಕಳು ಎಂದು ತಿಳಿದುಬಂದಿದೆ. ಮೃತಪಟ್ಟವರನ್ನು ಮರಿಯಮ್ ಖಾತೂನ್ (7 ವರ್ಷ), ಮೊಹಮ್ಮದ್ ಜೈನ್ ಖಾನ್ (10 ವರ್ಷ), ಝೋಯಾ ಖಾನ್ (12 ವರ್ಷ) ಹಾಗೂ ವಿಹಾನ್ ಭಾರ್ಗವ್ (13 ವರ್ಷ) ಎಂದು ಅಧಿಕಾರಿಗಳು ಗುರುತಿಸಿದ್ದಾರೆ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಆಪರೇಷನ್ ಸಿಂಧೂರ – ಪಾಕ್ ಭಯೋತ್ಪಾದನೆಗೆ ತಕ್ಕ ಶಾಸ್ತಿ!

ಪೂಂಚ್ ಜಿಲ್ಲಾಡಳಿತವು ಜಿಲ್ಲಾಧಿಕಾರಿ ಕಚೇರಿಯಲ್ಲಿ ನಿಯಂತ್ರಣ ಕೊಠಡಿಯನ್ನು ಸ್ಥಾಪಿಸಿದ್ದು, ಯಾವುದೇ ಸಹಾಯ ಅಥವಾ ಸ್ಪಷ್ಟೀಕರಣಕ್ಕಾಗಿ 01965-220258 ಅಥವಾ 90862-53188 ಸಂಖ್ಯೆಯನ್ನು ಸಂಪರ್ಕಿಸಲು ಕೋರಿದೆ.

ಪೂಂಚ್‌ ಸೇರಿದಂತೆ ಎಲ್‌ಒಸಿಯ ಪ್ರದೇಶಗಳಲ್ಲಿ ವಾಸಿಸುತ್ತಿರುವ ನಾಗರಿಕರನ್ನು ಸುರಕ್ಷಿತ ಸ್ಥಳಗಳಿಗೆ ಕರೆದೊಯ್ಯುವಂತೆ ಕೇಂದ್ರ ಗೃಹ ಇಲಾಖೆಯು ಸ್ಥಳೀಯ ಆಡಳಿತಕ್ಕೆ ಸೂಚನೆ ನೀಡಿದೆ. ಅಲ್ಲದೇ, ನಡೆಯುತ್ತಿರುವ ಎಲ್ಲ ಬೆಳವಣಿಗೆಗಳ ಬಗ್ಗೆ ನಿಗಾ ವಹಿಸಿರುವುದಾಗಿ ವರದಿ ತಿಳಿಸಿದೆ.

poonch
eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...