ಯುವಕನೊಂದಿಗೆ ಪ್ರೇಮ ಸಂಬಂಧ ಹೊಂದಿದ್ದ ಕಾರಣ ಗದರಿಸಿದ ಪೋಷಕರು; 15 ವರ್ಷದ ಬಾಲಕಿ ಆತ್ಮಹತ್ಯೆ

Date:

ಪ್ರೇಮ ಸಂಬಂಧ ಹೊಂದಿದ್ದ ಕಾರಣಕ್ಕೆ ಪೋಷಕರು ಗದರಿಸಿದ್ದು, ಇದರಿಂದ ಮನನೊಂದು 15 ವರ್ಷದ ಬಾಲಕಿ ಆತ್ಮಹತ್ಯೆ ಮಾಡಿಕೊಂಡ ಘಟನೆ ಉತ್ತರ ಪ್ರದೇಶದ ಬಲ್ಲಿಯಾ ಜಿಲ್ಲೆಯ ನಂದಪುರ ಗ್ರಾಮದಲ್ಲಿ ನಡೆದಿದೆ.

ಮೃತ ಬಾಲಕಿಯನ್ನು ರೇಶು ಪಾಸ್ವಾನ್ ಎಂದು ಗುರುತಿಸಲಾಗಿದೆ. ಶನಿವಾರ ಮಧ್ಯಾಹ್ನ ಆಕೆ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿದ್ದಾಳೆ ಎಂದು ಪೊಲೀಸ್ ಅಧಿಕಾರಿಗಳು ಭಾನುವಾರ ತಿಳಿಸಿದ್ದಾರೆ.

ಇದನ್ನು ಓದಿದ್ದೀರಾ? ಬೆಂಗಳೂರು | 29ನೇ ಮಹಡಿಯಿಂದ ಜಿಗಿದು12 ವರ್ಷದ ಬಾಲಕಿ ಆತ್ಮಹತ್ಯೆ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಬಗ್ಗೆ ಮಾಹಿತಿ ನೀಡಿದ ಬೈರಿಯಾ ಉಪ ಪೊಲೀಸ್ ವರಿಷ್ಠಾಧಿಕಾರಿ ಫಹೀಮ್ ಖುರೇಷಿ, “ಪ್ರಾಥಮಿಕ ತನಿಖೆಯಲ್ಲಿ ಬಾಲಕಿ ಪ್ರೇಮ ಸಂಬಂಧ ಹೊಂದಿದ್ದ ಯುವಕನೊಂದಿಗೆ ಫೋನ್‌ನಲ್ಲಿ ಮಾತನಾಡಿದ್ದಕ್ಕಾಗಿ ಆಕೆಯ ಪೋಷಕರು ಇತ್ತೀಚೆಗೆ ಗದರಿಸಿದ್ದರು” ಎಂದು ತಿಳಿದುಬಂದಿದೆ.

ಶನಿವಾರ ಮಧ್ಯಾಹ್ನ, ಹೊಲದಲ್ಲಿ ಕೆಲಸ ಮುಗಿಸಿ ಮನೆಗೆ ಬಂದ ಬಾಲಕಿಯ ತಾಯಿ ನೋಡಿದಾಗ ಬಾಲಕಿ ನೇಣು ಬಿಗಿದ ಸ್ಥಿತಿಯಲ್ಲಿ ಪತ್ತೆಯಾಗಿದ್ದಾಳೆ. ಘಟನೆ ನಡೆದ ಸಮಯದಲ್ಲಿ ಕಟ್ಟಡ ಕಾರ್ಮಿಕರಾದ ಬಾಲಕಿಯ ತಂದೆ ಕೂಲಿ ಕೆಲಸಕ್ಕೆ ಹೋಗಿದ್ದರು ಎಂದು ಹೇಳಲಾಗಿದೆ.

ಪೋಷಕರು ಆಕೆಯನ್ನು ಜಿಲ್ಲಾ ಆಸ್ಪತ್ರೆಗೆ ಕರೆದೊಯ್ದಿದ್ದಾರೆ. ಅಲ್ಲಿ ಆಕೆ ಮೃತಪಟ್ಟಿರುವುದಾಗಿ ವೈದ್ಯರು ಘೋಷಿಸಿದ್ದಾರೆ ಎಂದು ಡಿಎಸ್‌ಪಿ ಖುರೇಷಿ ಹೇಳಿದರು. ಮೃತದೇಹವನ್ನು ಮರಣೋತ್ತರ ಪರೀಕ್ಷೆಗೆ ಕಳುಹಿಸಲಾಗಿದ್ದು, ಮುಂದಿನ ಕಾನೂನು ಕ್ರಮ ಕೈಗೊಳ್ಳಲಾಗುವುದು ಎಂದು ತಿಳಿಸಿದ್ದಾರೆ.

ನೆನಪಿಡಿ: ಸಮಸ್ಯೆಗಳಿಗೆ ಆತ್ಮಹತ್ಯೆ ಪರಿಹಾರವಲ್ಲ… ಆತ್ಮಹತ್ಯೆಗಳ ಕುರಿತು ಚರ್ಚಿಸುವುದು ಕೂಡ ಕೆಲವರಿಗೆ ಪ್ರಚೋದನೆ ನೀಡಬಹುದು. ಸಮಸ್ಯೆಗಳ ಬಗ್ಗೆ ಆಪ್ತರೊಂದಿಗೆ ಹಂಚಿಕೊಳ್ಳುವುದರಿಂದ, ಸಮಾಲೋಚನೆ ನಡೆಸುವುದರಿಂದ ಆತ್ಮಸ್ಥೈರ್ಯ ಹೆಚ್ಚುತ್ತದೆ. ಇದರಿಂದ ಆತ್ಮಹತ್ಯೆಗಳನ್ನು ತಡೆಯಬಹುದು. ತುರ್ತು ಪರಿಸ್ಥಿತಿಯಿದ್ದರೆ ಕರೆ ಮೂಲಕ ವೈದ್ಯರನ್ನು ಸಂಪರ್ಕಿಸಿ. ಬೆಂಗಳೂರು ಸಹಾಯವಾಣಿ 080-25497777, ನಿಮಾನ್ಸ್ ಸಹಾಯವಾಣಿ 080-46110007, ಆರೋಗ್ಯ ಸಹಾಯವಾಣಿ 104.
WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...