ಬಿಹಾರ | 15ರ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ; ಕಾಮುಕರ ಬಂಧನ

Date:

15 ವರ್ಷದ ಅಪ್ರಾಪ್ತ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿರುವ ಘಟನೆ ಬಿಹಾರದ ರೋಹ್ತಾಸ್‌ ಜಿಲ್ಲೆಯಲ್ಲಿ ನಡೆದಿದೆ ಎಂದು ಪೊಲೀಸರು ಶನಿವಾರ ತಿಳಿಸಿದ್ದಾರೆ. ಸದ್ಯ ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ಕಾಮುಕರನ್ನು ಪೊಲೀಸರು ಬಂಧಿಸಿದ್ದಾರೆ ಎಂದು ವರದಿಯಾಗಿದೆ.

ಸಂತ್ರಸ್ತ ಬಾಲಕಿಯು ಔರಂಗಬಾದ್ ಜಿಲ್ಲೆಯವರಾಗಿದ್ದು, ವಿವಾಹ ಸಮಾರಂಭವೊಂದರಲ್ಲಿ ಭಾಗಿಯಾಗಲು ಶುಕ್ರವಾರ ರೋಹ್ತಸ್ ಜಿಲ್ಲೆಗೆ ಹೋಗಿದ್ದರು. ಈ ವೇಳೆ ಯುವಕರಿಬ್ಬರು ಬಾಲಕಿಯ ಮನವೊಲಿಸಿ, ಸುಳ್ಳು ಹೇಳಿ ಸಮೀಪದ ಹೊಲವೊಂದಕ್ಕೆ ಕರೆದೊಯ್ದು ಅತ್ಯಾಚಾರ ಎಸಗಿದ್ದಾರೆ ಎಂದು ಹೇಳಲಾಗಿದೆ.

ಇದನ್ನು ಓದಿದ್ದೀರಾ? ಈ ದಿನ ಸಂಪಾದಕೀಯ | ಹೆಣ್ಣುಮಕ್ಕಳ ಸಾಮೂಹಿಕ ಅತ್ಯಾಚಾರ; ಕುರುಡಾಯಿತೇ ಸಮಾಜ?

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಬಾಲಕಿ ಕಾಣದ ಕಾರಣ ಪೋಷಕರು ಹುಡುಕಾಡಿದಾಗ ಬಾಲಕಿಯು ಹೊಲದಲ್ಲಿ ಪ್ರಜ್ಞೆ ಇಲ್ಲದೆ ಬಿದ್ದಿರುವುದು ಕಂಡುಬಂದಿದೆ. ಕೂಡಲೇ ಬಾಲಕಿಯನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿದ್ದು, ಬಾಲಕಿಯ ಮಾನಸಿಕ ಸ್ಥಿತಿ ಚಿಂತಾಜನಕವಾಗಿದೆ ಎಂದು ವರದಿ ಉಲ್ಲೇಖಿಸಿದೆ.

ಈ ಬಗ್ಗೆ ಮಾಧ್ಯಮಕ್ಕೆ ಮಾಹಿತಿ ನೀಡಿದ ಅಮ್ಜೋರ್ ಪೊಲೀಸ್ ಠಾಣೆಯ ಎಸ್‌ಎಚ್‌ಒ ಶ್ಯಾಮ್ ಕುಮಾರ್, “ಸಂತ್ರಸ್ತೆಯನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಆಕೆ ಮಾನಸಿಕ ಆಘಾತದಿಂದ ಹೊರಬಂದ ಬಳಿಕ ಆಕೆಯ ಹೇಳಿಕೆಯನ್ನು ಪಡೆಯಲಾಗುವುದು. ಸದ್ಯ ಮಾತೇ ಆಡುತ್ತಿಲ್ಲ” ಎಂದು ತಿಳಿಸಿದ್ದಾರೆ.

ಆರೋಪಿಗಳಾದ ಶಹ್‌ಝಾದ್ ರಾಯನ್ ಮತ್ತು ಸಲ್ಮಾನ್ ರಝಾ ಅವರನ್ನು ಬಂಧಿಸಲಾಗಿದೆ. ಕೋರ್ಟ್ ಇಬ್ಬರನ್ನೂ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಕಳುಹಿಸಿದೆ. ಇಬ್ಬರೂ ಕೂಡಾ ಅದೇ ಗ್ರಾಮದವರು ಎಂದು ಹೇಳಲಾಗಿದೆ.

ಇದನ್ನು ಓದಿದ್ದೀರಾ? ಮೈಸೂರು | ಮಣಿಪುರ ಮಹಿಳೆಯರ ಮೇಲೆ ದೌರ್ಜನ್ಯ; ವಿದ್ಯಾರ್ಥಿಗಳ ಖಂಡನೆ

ಅಪ್ರಾಪ್ತರ ಮೇಲೆ ಅತ್ಯಾಚಾರ ಪ್ರಕರಣ ಹೆಚ್ಚಳ

2016ರಿಂದ ದೇಶದಲ್ಲಿ ಅತ್ಯಾಚಾರ ಪ್ರಕರಣಗಳು ಅಧಿಕವಾಗಿದೆ. ಅದರಲ್ಲಿಯೂ ಪ್ರಮುಖವಾಗಿ ಅಪ್ರಾಪ್ತರ ಮೇಲೆ ಲೈಂಗಿಕ ದೌರ್ಜನ್ಯ, ಅತ್ಯಾಚಾರ, ಗರ್ಭಪಾತ, ಅತ್ಯಾಚಾರ-ಕೊಲೆ – ಇಂತಹ ಅಪರಾಧಗಳು ಹೆಚ್ಚಾಗುತ್ತಿದೆ. ಎನ್‌ಜಿಒ ಸಿಆರ್‌ವೈ ವರದಿಯ ಪ್ರಕಾರ ದೇಶದಲ್ಲಿ 2016ರಿಂದ 2022ರ ನಡುವೆ ಅಪ್ರಾಪ್ತರ ಮೇಲೆ ಅತ್ಯಾಚಾರ ಪ್ರಕರಣಗಳು ಸುಮಾರು ಶೇಕಡ 96ರಷ್ಟು ಏರಿಕೆಯಾಗಿದೆ. 2020 ಹೊರತುಪಡಿಸಿ 2016ರಿಂದ ದೇಶದಲ್ಲಿ ಅತ್ಯಾಚಾರ ಪ್ರಕರಣಗಳು ಭಾರೀ ಪ್ರಮಾಣದಲ್ಲಿ ಹೆಚ್ಚಾಗಿದೆ. 2021ರಿಂದ 2022ರ ನಡುವೆ ಶೇಕಡ 6.9ರಷ್ಟು ಪ್ರಕರಣಗಳು ಅಧಿಕವಾಗಿದೆ.

ಇವು ವರದಿಯಾದ ಪ್ರಕರಣಗಳಾದರೆ, ಇನ್ನೂ ಅದೆಷ್ಟೋ ಪ್ರಕರಣಗಳು ಮುನ್ನೆಲೆಗೆ ಬಂದಿಲ್ಲ. ಸಂತ್ರಸ್ತೆ/ ಸಂತ್ರಸ್ತ ಅಥವಾ ಆಕೆ/ ಆತನ ಕುಟುಂಬಸ್ಥರು ಮರ್ಯಾದೆಗೆ ಅಂಜಿ ಅತ್ಯಾಚಾರಿಗಳ ವಿರುದ್ದ ದೂರು ದಾಖಲಿಸುವುದೇ ಇಲ್ಲ. ಇನ್ನೊಂದೆಡೆ ಸಮಾಜದಲ್ಲಿ ಉನ್ನತ ಸ್ಥಾನದಲ್ಲಿರುವ ಅತ್ಯಾಚಾರಿಗಳಿಗೆ ಭಯಪಟ್ಟು ಸಂತ್ರಸ್ತರು ದೂರು ದಾಖಲಿಸುವುದಿಲ್ಲ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...