ತಮಿಳುನಾಡು | ಸದ್ಗುರು ಜಗ್ಗಿಯ ಇಶಾ ಫೌಂಡೇಶನ್‌ಗೆ 150 ಪೊಲೀಸರ ದಾಳಿ – ಪರಿಶೀಲನೆ

Date:

ತನ್ನನ್ನು ತಾನೇ ಆಧ್ಯಾತ್ಮಿಕ ಗುರು ಎಂದು ಕರೆದುಕೊಂಡಿರುವ ಸ್ವಯಂ ಘೋಷಿತ ದೇವಮಾನವ ಜಗ್ಗಿ ವಾಸುದೇವ್ ಅವರ ‘ಇಶಾ ಫೌಂಡೇಶನ್‌’ ವಿರುದ್ಧ ನಾನಾ ಕ್ರಿಮಿನಲ್ ಮೊಕದ್ದಮೆಗಳು ದಾಖಲಾಗಿವೆ. ಅವುಗಳ ಕುರಿತು ವರದಿ ಸಲ್ಲಿಸುವಂತೆ ತಮಿಳುನಾಡು ಸರ್ಕಾರಕ್ಕೆ ಮದ್ರಾಸ್ ಹೈಕೋರ್ಟ್ ಸೂಚಿಸಿದೆ. ಈ ಬೆನ್ನಲ್ಲೇ, ಸುಮಾರು 150 ಪೊಲೀಸರು ತಮಿಳುನಾಡಿನ ಕೊಯಮತ್ತೂರು ಬಳಿಕ ಇಕ್ಕರೈ ಬೊಲುವಾಂಪಟ್ಟಿಯಲ್ಲಿರುವ ಇಶಾ ಫೌಂಡೇಶನ್‌ ಕೇಂದ್ರಕ್ಕೆ ದಾಳಿ ಮಾಡಿದ್ದು, ಶೋಧ ನಡೆಸಿದ್ದಾರೆ.

ಕೊಯಮತ್ತೂರಿನ ನಿವೃತ್ತ ಪ್ರೊಫೆಸರ್ ಎಸ್ ಕಾಮರಾಜ್ ಸಲ್ಲಿಸಿದ್ದ ಹೇಬಿಯಸ್ ಕಾರ್ಪಸ್ ಅರ್ಜಿಯ ವಿಚಾರಣೆ ವೇಳೆ ಇಶಾ ಫೌಂಡೇಶನ್ ವಿರುದ್ಧದ ಎಲ್ಲ ಕ್ರಿಮಿನಲ್ ಪ್ರಕರಣಗಳ ವಿವರಗಳನ್ನು ಸಲ್ಲಿಸುವಂತೆ ತಮಿಳುನಾಡು ಸರ್ಕಾರಕ್ಕೆ ಹೈಕೋರ್ಟ್ ಆದೇಶಿಸಿತ್ತು.

ತಮಿಳುನಾಡಿನ ಕೊಯಮತ್ತೂರಿನ ಇಶಾ ಯೋಗ ಕೇಂದ್ರದಲ್ಲಿ ವಾಸವಿರುವಂತೆ ತನ್ನ ಇಬ್ಬರು ಹೆಣ್ಣುಮಕ್ಕಳನ್ನು ‘ಬ್ರೈನ್ ವಾಶ್’ ಮಾಡಲಾಗಿದೆ. ಅವರನ್ನು ತಲೆ ಬೋಳಿಸಿಕೊಂಡು, ಸನ್ಯಾಸಿಗಳಾಗುವಂತೆ ಒತ್ತಾಯಿಸಲಾಗಿದೆ. ಅಲ್ಲದೆ, ನಮ್ಮ ಸಂಪರ್ಕದಲ್ಲಿರಲು ಕೂಡಾ ಅವಕಾಶ ನೀಡುತ್ತಿಲ್ಲ ಎಂದು ಕಾಮರಾಜ್ ಆರೋಪಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಸದ್ಗುರು ಯೋಗ ಕೇಂದ್ರದಿಂದ 6 ಮಂದಿ ನಾಪತ್ತೆ; ಹೈಕೋರ್ಟ್‌ಗೆ ಪೊಲೀಸರ ವರದಿ

ಇಶಾ ಫೌಂಡೇಶನ್ ಅರಣ್ಯ ಪ್ರದೇಶದಲ್ಲಿದ್ದು, ಅದರ ಕಾಂಪೌಂಡ್ ಗೋಡೆ ಮತ್ತು ಮುಂಭಾಗದ ಗೇಟ್ ಅನ್ನು ಅರಣ್ಯ ಭೂಮಿಯಲ್ಲಿ ನಿರ್ಮಾಣ ಮಾಡಲಾಗಿದೆ. ಈ ಸ್ಥಳಗಳಿಗೆ ನಿರಂತರವಾಗಿ ಜನರು ಭೇಟಿ ನೀಡುವುದರಿಂದ ಆನೆಗಳ ಆವಾಸಸ್ಥಾನಕ್ಕೆ ತೊಂದರೆಯಾಗುತ್ತದೆ. ಹೀಗಾಗಿ, ಕಟ್ಟಡಗಳನ್ನು ನಿರ್ಮಿಸಲು ಫೌಂಡೇಶನ್‌ಗೆ HACA ಅನುಮೋದನೆ ನೀಡಲು 2012ರಲ್ಲಿಯೇ ಅಂದಿನ ಕೊಯಮತ್ತೂರು ಜಿಲ್ಲಾಧಿಕಾರಿ ನಿರಾಕರಿಸಿದ್ದರು.

ಅದಾಗ್ಯೂ, ಅಲ್ಲಿಯೇ ಇಶಾ ಫೌಂಡೇಶನ್‌ ಕೇಂದ್ರವನ್ನು ಜಗ್ಗಿ ವಾಸುದೇವ್ ನಡೆಸುತ್ತಿದ್ದರು. ಇತ್ತೀಚೆಗೆ, ಅವರನ್ನು ಅಲ್ಲಿಂದ ಖಾಲಿ ಮಾಡಿಸಿ, ಹೊರಗಟ್ಟಲಾಗಿತ್ತು. ಬಳಿಕ, ಆತ ಕರ್ನಾಟಕದ ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಸರ್ಕಾರಿ ಭೂಮಿ ಪಡೆದುಕೊಂಡು, ಇಶಾ ಫೌಂಡೇಶನ್‌ಅನ್ನು ಚಿಕ್ಕಬಳ್ಳಾಪುರಕ್ಕೆ ಸ್ಥಳಾಂತರಿಸಿದ್ದಾರೆ.

ಇದಲ್ಲದೆ, ಆರು ಮಂದಿ ನಾಪತ್ತೆ ಪ್ರಕರಣ, ವಂಚನೆ, ಅತ್ಯಾಚಾರ ಸಂಬಂಧಿತ ಪ್ರಕರಣಗಳಲ್ಲಿ ಇಶಾ ಫೌಂಡೇಶನ್ ವಿರುದ್ಧ ಎಫ್‌ಐಆರ್‌ಗಳು ದಾಖಲಾಗಿವೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...