ಮಿಜೋರಾಂ ಪ್ರವೇಶಿಸಿದ 151 ಮಯನ್ಮಾರ್ ಸೈನಿಕರು

Date:

ನೆರೆಯ ದೇಶದ ಬಂಡುಕೋರರ ಗುಂಪು ತಮ್ಮ ಸೇನಾ ಶಿಬಿರವನ್ನು ಅತಿಕ್ರಮಣ ಮಾಡಿದ ಕಾರಣಕ್ಕೆ 151 ಮಯನ್ಮಾರ್ ಸೈನಿಕರು ಮಿಜೋರಾಂನ ಲಾಂಗ್‌ತಲೈ ಜಿಲ್ಲೆಗೆ ಪ್ರವೇಶಿಸಿದ್ದಾರೆ ಎಂದು ಅಸ್ಸಾಂ ರೈಫಲ್‌ ಅಧಿಕಾರಿಗಳು ತಿಳಿಸಿದ್ದಾರೆ.

“ಬಂಡುಕೋರರ ಗುಂಪು ಸೇನಾ ಶಿಬಿರವನ್ನು ಅತಿಕ್ರಮಿಸಿದ ನಂತರ ನಮ್ಮನ್ನು ಸಂಪರ್ಕಿಸುವ ಮೂಲಕ ‘ತತ್ಮಾದವ್‌’ ಎಂದು ಕರೆಯಲ್ಪಡುವ ಮಯನ್ಮಾರ್ ಸೇನಾ ಸಿಬ್ಬಂದಿ ತಮ್ಮ ಶಸ್ತ್ರಾಸ್ತ್ರಗಳೊಂದಿಗೆ ಮಿಜೋರಾಂನ ಲಾಂಗ್‌ತಲೈ ಜಿಲ್ಲೆಯ ತೋಯ್ಸತ್‌ಲಾಂಗ್‌ ಪ್ರದೇಶಕ್ಕೆ ಅಂತಾರಾಷ್ಟ್ರೀಯ ಗಡಿಯ ಮೂಲಕ ಪ್ರವೇಶಿಸಿದರು” ಎಂದು ಅಸ್ಸಾಂ ರೈಫಲ್‌ ಅಧಿಕಾರಿಗಳು ತಿಳಿಸಿದ್ದಾರೆ.

ಕೆಲವು ದಿನಗಳ ಹಿಂದೆ ಅಂತಾರಾಷ್ಟ್ರೀಯ ಗಡಿಯ ಸಮೀಪ ನೆರೆಯ ದೇಶದ ಬಂಡುಕೋರರ ಗುಂಪಿನೊಂದಿಗೆ ಮಯನ್ಮಾರ್ ಸೈನಿಕರು ಗುಂಡಿನ ಚಕಮಕಿ ನಡೆಸಿದ ನಂತರ ಮಿಜೋರಾಂ ಪ್ರವೇಶಿಸಿದ್ದಾರೆ ಎಂದು ಅಧಿಕಾರಿಗಳು ಹೇಳಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಬಾಲ ಗರ್ಭಿಣಿಯರ ಸಂಖ್ಯೆ ಹೆಚ್ಚಳ; ಜಿಲ್ಲಾ ಮಕ್ಕಳ ರಕ್ಷಣಾ ಘಟಕಗಳು ಏನು ಮಾಡುತ್ತಿವೆ?

151 ಸೈನಿಕರು ಶುಕ್ರವಾರ(ಡಿ.29) ಮಿಜೋರಾಂ ಪ್ರವೇಶಿಸಿದಾಗ ಬಹುತೇಕರು ಗಾಯಗೊಂಡಿದ್ದರು. ಅವರಿಗೆಲ್ಲರಿಗೂ ಅಸ್ಸಾಂ ರೈಫಲ್‌ನಿಂದ ಪ್ರಥಮ ಚಿಕಿತ್ಸೆ ನೀಡಲಾಗಿದೆ.

ಸದ್ಯ ಮಯನ್ಮಾರ್ ಸೈನಿಕರು ಲಾಂಗ್‌ತಲೈ ಜಿಲ್ಲೆಯ ತೋಯ್ಸತ್‌ಲಾಂಗ್‌ ಪ್ರದೇಶದಲ್ಲಿ ಅಸ್ಸಾಂ ರೈಫಲ್‌ನ ಭದ್ರತೆಯೊಂದಿಗೆ ಸುರಕ್ಷಿತವಾಗಿದ್ದಾರೆ.

ಭಾರತದ ವಿದೇಶಾಂಗ ಇಲಾಖೆ ಹಾಗೂ ಮಯನ್ಮಾರ್‌ನ ಮಿಲಿಟರಿ ಸರ್ಕಾರದೊಂದಿಗೆ ಮಾತುಕತೆ ನಡೆಯುತ್ತಿದ್ದು, ಕೆಲವು ದಿನಗಳಲ್ಲಿ ವಾಪಸ್‌ ಮಯನ್ಮಾರ್‌ಗೆ ಕಳುಹಿಸಲಾಗುವುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ಕಳೆದ ನವೆಂಬರ್‌ನಲ್ಲೂ ಕೂಡ 104 ಮಯನ್ಮಾರ್‌ನ ಸೈನಿಕರು ತಮ್ಮ ದೇಶದ ಪಿಡಿಎಂ ಎಂಬ ಸಂಘಟನೆಯ ಅತಿಕ್ರಮಣದಿಂದಾಗಿ ಸೇನಾ ಶಿಬಿರದಿಂದ ಅಂತಾರಾಷ್ಟ್ರೀಯ ಸೇನಾ ಗಡಿಯ ಮೂಲಕ ಮಿಜೋರಾಂ ಪ್ರವೇಶಿಸಿದ್ದರು. ಅವರನ್ನು ಭಾರತದ ವಾಯುಪಡೆಯ ಸಿಬ್ಬಂದಿ ಏರ್‌ಲಿಫ್ಟ್‌ ಮೂಲಕ ವಾಪಸ್‌ ಕಳುಹಿಸಿಕೊಟ್ಟಿದ್ದರು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...