ಕಾಸರಗೋಡು ದೇವಸ್ಥಾನದಲ್ಲಿ ಭಾರಿ ಪಟಾಕಿ ದುರಂತ: 154 ಮಂದಿಗೆ ಗಾಯ, 8 ಜನ ಗಂಭೀರ

Date:

ಕಾಸರಗೋಡು ಜಿಲ್ಲೆಯ ನೀಲೇಶ್ವರದ ಅವನೀಲೇಶ್ವರಂನ ಅಂಜೂಟ್ಟಂಬಳಂ ವೀರರ್ ಕಾವು ತೆಯ್ಯಂ ಕಟ್ಟೆ ಮಹೋತ್ಸವದ ವೇಳೆ ಪಟಾಕಿ ಕಿಡಿಯಿಂದ ಬೆಂಕಿ ಹತ್ತಿಕೊಂಡ ದುರಂತದಲ್ಲಿ 154 ಮಂದಿಗೆ ಗಾಯವಾಗಿದ್ದು, ಅವರಲ್ಲಿ 8 ಮಂದಿ ಸ್ಥಿತಿ ಗಂಭೀರವಾಗಿದೆ ಎಂದು ತಿಳಿದುಬಂದಿದೆ.

ಮೂವಳಂಕುಳಿ ಚಾಮುಂಡಿ ತೆಯ್ಯಂನ ಕುಳಿಚು ತೊಟ್ಟಂ ಆಚರಣೆಯ ವೇಳೆ ಮಧ್ಯರಾತ್ರಿ 12 ಗಂಟೆ ಸುಮಾರಿಗೆ ಈ ಅವಘಡ ಸಂಭವಿಸಿದೆ ಎಂಬುದಾಗಿ ವರದಿಯಾಗಿದೆ. ಬೆಂಕಿ ಕಿಡಿಯಿಂದ ಪಟಾಕಿ ಸ್ಪೋಟಗೊಂಡಿದೆ ಎಂಬುದು ತಿಳಿದುಬಂದಿದೆ. ಗಾಯಾಳುಗಳನ್ನು ಕಾಞಂಗಾಡ್ ಜಿಲ್ಲಾಸ್ಪತ್ರೆ, ನೀಲೇಶ್ವರ, ಕಾಞಂಗಾಡ್‌ನ ವಿವಿಧ ಖಾಸಗಿ ಆಸ್ಪತ್ರೆ ಹಾಗೂ ಮಂಗಳೂರಿನ ಆಸ್ಪತ್ರೆಗಳಿಗೆ ದಾಖಲಿಸಲಾಗಿದೆ.

ದೀಪಾವಳಿ ಹಬ್ಬಕ್ಕೆ ಮುನ್ನ ಪಟಾಕಿ ಕಿಡಿ ಹೊತ್ತಿ ಉರಿದು ಅಗ್ನಿ ಅವಘಡ ಸಂಭವಿಸಿರುವ ಘಟನೆ ನೆರೆಯ ಕಾಸರಗೋಡು ಜಿಲ್ಲೆಯ ನೀಲೇಶ್ವರಂ ಎಂಬಲ್ಲಿ ನಡೆದಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಪೈಕಿ ಗಂಭೀರವಾಗಿ ಗಾಯಗೊಂಡ ಮೂವರನ್ನು ಪರಿಯಾರಂ ವೈದ್ಯಕೀಯ ಕಾಲೇಜು ಆಸ್ಪತ್ರೆಗೆ ದಾಖಲಿಸಲಾಗಿದೆ. ಹಲವು ಮಂದಿ ಮಂಗಳೂರಿನ ಖಾಸಗಿ ಆಸ್ಪತ್ರೆಗಳಿಗೆ ದಾಖಲಿಸಿ ಚಿಕಿತ್ಸೆ ನೀಡಲಾಗುತ್ತಿದೆ. ಹೆಚ್ಚಿನ ಮಾಹಿತಿ ಸಿಗಬೇಕಿದೆ ಎಂದು ಕಾಸರಗೋಡು ಪೊಲೀಸರು ತಿಳಿಸಿದ್ದಾರೆ.

ಘಟನೆಯ ಬಗ್ಗೆ ಮಾಹಿತಿ ನೀಡಿರುವ ಕಾಸರಗೋಡು ಎಸ್‌ಪಿ ಡಿ ಶಿಲ್ಪಾ, “ದುರಂತದಲ್ಲಿ ಒಟ್ಟು 154 ಮಂದಿ ಗಾಯಗೊಂಡಿದ್ದು, ಈ ಪೈಕಿ ಎಂಟು ಮಂದಿ ಗಂಭೀರ ಸ್ಥಿತಿಯಲ್ಲಿದ್ದು, ಐಸಿಯುವಿನಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ” ಎಂದು ತಿಳಿಸಿದ್ದಾರೆ.

“ದೇವಸ್ಥಾನದ ಪದಾಧಿಕಾರಿಗಳು ಪಟಾಕಿಯನ್ನು ಸಂಗ್ರಹಿಡಿಸಲು ಯಾವುದೇ ಪೂರ್ವಾನುಮತಿ ಪಡೆದಿರಲಿಲ್ಲ. ಪಟಾಕಿಯನ್ನು ಹಾರಿಸಿರುವ ಜಾಗಕ್ಕೂ ದಾಸ್ತಾನಿಟ್ಟಿದ್ದ ಜಾಗಕ್ಕೂ ಹೆಚ್ಚು ಅಂತರವಿರಲಿಲ್ಲ. ಹೀಗಾಗಿ, ಪಟಾಕಿ ಸಿಡಿಸಿದ ವೇಳೆ ಹಾರಿದ ಕಿಡಿಯಿಂದಾಗಿ ಈ ದುರಂತ ಸಂಭವಿಸಿದೆ. 154 ಮಂದಿ ಗಾಯಾಳುಗಳ ಪೈಕಿ 97 ಮಂದಿ ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿದ್ದಾರೆ. ಸುರಕ್ಷತೆಯನ್ನು ಕಾಪಾಡಿಕೊಳ್ಳದ ಕಾರಣ ಈ ಘಟನೆ ನಡೆದಿದೆ” ಎಂದು ಕಾಸರಗೋಡು ಎಸ್‌ಪಿ ತಿಳಿಸಿದ್ದಾರೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...