ಅಗರ್ತಲಾ ರೈಲು ನಿಲ್ದಾಣದಲ್ಲಿ ಬಾಂಗ್ಲಾದೇಶದ 16 ಪ್ರಜೆಗಳ ಬಂಧನ

Date:

ಅಗರ್ತಲಾ ರೈಲು ನಿಲ್ದಾಣದಲ್ಲಿ 13 ಪುರುಷರು ಮತ್ತು 3 ಮಹಿಳೆಯರು ಸೇರಿದಂತೆ ಕನಿಷ್ಠ 16 ಬಾಂಗ್ಲಾದೇಶದ ಪ್ರಜೆಗಳನ್ನು ಬಂಧಿಸಲಾಗಿದೆ. ಮಂಗಳವಾರ ಸಂಜೆ ಈ ಘಟನೆ ನಡೆದಿದೆ.

ಬಂಧಿತರ ಪೈಕಿ ಮೂವರು ಅಕ್ರಮ ಚಟುವಟಿಕೆಗಳಲ್ಲಿ ಭಾಗಿಯಾಗಿರುವ ಬಾಂಗ್ಲಾದೇಶಿಗಳೆಂದು ಗುರುತಿಸಲಾಗಿದೆ. ಸ್ಥಳೀಯ ಅಧಿಕಾರಿಗಳು ಬಂಧಿಸಿದ್ದು ಅಗರ್ತಲಾ ಸರ್ಕಾರಿ ರೈಲ್ವೆ ಪೊಲೀಸ್ ಠಾಣೆಯಲ್ಲಿ (ಜಿಆರ್‌ಪಿಎಸ್) ವಿವಿಧ ಸೆಕ್ಷನ್‌ಗಳ ಅಡಿಯಲ್ಲಿ ಪ್ರಕರಣ ದಾಖಲಿಸಲಾಗಿದೆ.

ಬಂಧಿತರನ್ನು ಇಂದು ನ್ಯಾಯಾಲಯಕ್ಕೆ ಹಾಜರುಪಡಿಸಲಾಗುತ್ತದೆ. ಬಂಧಿತರನ್ನು ಮಿಜನೂರ್ ರಹಮಾನ್ (26), ಸಫಿಕುಲ್ ಇಸ್ಲಾಂ (30), ಎಂಡಿ ಅಲಮಿನ್ ಅಲಿ (23), ಎಂಡಿ ಮಿಲನ್ (38), ಸಹಾಬುಲ್ (30) ಸರಿಫುಲ್ ಶೇಕ್ (30), ಕಬೀರ್ ಶೇಕ್ (34), ಲಿಜಾ ಖಾತುನ್ (26), ತಾನಿಯಾ ಖಾನ್ (24), ಎಥಿ ಶೇಕ್ (39), ಬೃಂದಾಬನ್ ಮಂಡಲ್ (21), ಅಬ್ದುಲ್ ಹಕೀಮ್ (25), ಎಂಡಿ ಇದುಲ್ (27), ಎಂಡಿ ಅಬ್ದುರ್ ರಹಮಾನ್ (20), ಎಂಡಿ ಅಯೂಬ್ ಅಲಿ ( 30) ಮತ್ತು ಎಂಡಿ ಜಿಯಾರುಲ್ (20) ಎಂದು ಗುರುತಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಬಾಂಗ್ಲಾದೇಶ | ಪ್ರತಿಭಟನಾಕಾರರ ಬೆದರಿಕೆ; ಸುಪ್ರೀಂ ಕೋರ್ಟ್‌ ಮುಖ್ಯ ನ್ಯಾಯಮೂರ್ತಿ ರಾಜೀನಾಮೆ

ಈ ಬಾಂಗ್ಲಾದೇಶಿ ಪ್ರಜೆಗಳು ಯಾವುದಾದರೂ ಕಾನೂನುಬಾಹಿರ ಚಟುವಟಿಕೆಗಳನ್ನು ನಡೆಸಿದ್ದಾರೆಯೇ ಎಂಬ ಬಗ್ಗೆ ತನಿಖೆ ನಡೆಸಲಾಗುತ್ತಿದೆ.

ಇನ್ನು ಗಡಿ ಭದ್ರತಾ ಪಡೆ, ಮಾನವ ಕಳ್ಳಸಾಗಣೆ ವಿರೋಧಿ ತಂಡ ಮತ್ತು ಗುಪ್ತಚರ ಘಟಕವು ನಕಲಿ ಆಧಾರ್ ಕಾರ್ಡ್‌ಗಳನ್ನು ತಯಾರಿಸಿ ತಮ್ಮ ಗುರುತನ್ನು ಮರೆಮಾಚಲು ಪ್ರಯತ್ನಿಸುತ್ತಿದ್ದ ಒಟ್ಟು 10 ಬಾಂಗ್ಲಾದೇಶಿ ಪ್ರಜೆಗಳನ್ನು ಮಂಗಳವಾರ ಬಂಧಿಸಿದೆ.

ಬಾಂಗ್ಲಾದೇಶದಲ್ಲಿ ಮೀಸಲಾತಿ ವಿಚಾರದಲ್ಲಿ ಆರಂಭವಾದ ಪ್ರತಿಭಟನೆ ಹಿಂಸಾಚಾರಕ್ಕೆ ತಿರುಗಿದ್ದು 200ಕ್ಕೂ ಅಧಿಕ ಮಂದಿ ಸಾವನ್ನಪ್ಪಿದ್ದಾರೆ. ಈ ಎಲ್ಲಾ ಬೆಳವಣಿಗೆ ನಡುವೆ ಬಾಂಗ್ಲಾ ಮಾಜಿ ಪ್ರಧಾನಿ ಶೇಖ್ ಹಸೀನಾ ಬಾಂಗ್ಲಾದೇಶದಿಂದ ಪರಾರಿಯಾಗಿ ಭಾರತಕ್ಕೆ ಬಂದಿದ್ದಾರೆ. ರಾಜೀನಾಮೆಯನ್ನು ನೀಡಿದ್ದಾರೆ ಎಂದು ಸೇನೆ ಹೇಳಿದೆ. ಈ ಎಲ್ಲ ಬೆಳವಣಿಗೆ ನಡುವೆ ಬಾಂಗ್ಲಾದೇಶದಿಂದ ಭಾರತಕ್ಕೆ ಅಕ್ರಮವಾಗಿ ಬರುವವರ ಪ್ರಮಾಣ ಇನ್ನಷ್ಟು ಹೆಚ್ಚಾಗಿದೆ.

?s=150&d=mp&r=g
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...