ಜಾರ್ಖಂಡ್‌ | 16 ವರ್ಷದ ಬಾಲಕಿ ಮೇಲೆ ಸಾಮೂಹಿಕ ಅತ್ಯಾಚಾರ; ಅಪ್ರಾಪ್ತ ಸೇರಿ ಐವರ ಬಂಧನ

Date:

16 ವರ್ಷದ ಬಾಲಕಿಯ ಮೇಲೆ ಸಾಮೂಹಿಕ ಅತ್ಯಾಚಾರ ನಡೆಸಿರುವ ಘಟನೆ ಜಾರ್ಖಂಡ್‌ನ ಡುಮ್ಕಾ ಜಿಲ್ಲೆಯಲ್ಲಿ ನಡೆದಿದೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಅಪ್ರಾಪ್ತ ವಯಸ್ಕ ಸೇರಿದಂತೆ ಐವರನ್ನು ಬಂಧಿಸಲಾಗಿದೆ ಎಂದು ಪೊಲೀಸರು ಮಂಗಳವಾರ ತಿಳಿಸಿದ್ದಾರೆ.

ಈ ಘಟನೆ ಮೇ 16 ರಂದು ಮುಫಸಿಲ್ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ನಡೆದಿದ್ದು ಸೋಮವಾರ ಸಂಜೆ ಐವರು ಆರೋಪಿಗಳನ್ನು ಬಂಧಿಸಲಾಗಿದೆ. ಮಂಗಳವಾರ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗುವುದು ಎಂದು ಅಧಿಕಾರಿಯೊಬ್ಬರು ತಿಳಿಸಿದ್ದಾರೆ.

ಇದನ್ನು ಓದಿದ್ದೀರಾ? ಉತ್ತರ ಪ್ರದೇಶ | ಅಪ್ರಾಪ್ತ ಬಾಲಕನ ಮೇಲೆ ಸ್ನೇಹಿತರಿಂದಲೇ ಸಾಮೂಹಿಕ ಅತ್ಯಾಚಾರ

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಮೇ 17ರಂದು ಬಾಲಕಿ ಪೊಲೀಸ್ ಠಾಣೆಗೆ ದೂರು ನೀಡಿದ್ದು, ಮದುವೆ ಕಾರ್ಯಕ್ರಮಕ್ಕಾಗಿ ಸಂಬಂಧಿಕರ ಮನೆಗೆ ಹೋಗಿದ್ದ ವೇಳೆ ವ್ಯಕ್ತಿಯೋರ್ವ ಬಲವಂತವಾಗಿ ನಿರ್ಜನ ಸ್ಥಳಕ್ಕೆ ಕರೆದೊಯ್ದು, ಆತನ ನಾಲ್ವರು ಸ್ನೇಹಿತರೊಂದಿಗೆ ಸೇರಿ ಅತ್ಯಾಚಾರ ಎಸಗಿದ್ದಾನೆ ಎಂದು ತಿಳಿಸಿದ್ದಾಳೆ.

“ಎಫ್‌ಐಆರ್ ಆಧರಿಸಿ, ತಂಡವನ್ನು ರಚಿಸಲಾಗಿದ್ದು, ಸೋಮವಾರ ಐವರು ಆರೋಪಿಗಳನ್ನು ಬಂಧಿಸಲಾಗಿದೆ. ಮಂಗಳವಾರ ನ್ಯಾಯಾಲಯದ ಮುಂದೆ ಹಾಜರುಪಡಿಸಲಾಗುವುದು” ಎಂದು ಮುಫಸಿಲ್ ಪೊಲೀಸ್ ಠಾಣೆಯ ಉಸ್ತುವಾರಿ ಸತ್ಯಂ ಕುಮಾರ್ ತಿಳಿಸಿದ್ದಾರೆ. ಬಾಲಕಿಯ ವೈದ್ಯಕೀಯ ಪರೀಕ್ಷೆಯನ್ನು ಸಹ ನಡೆಸಲಾಗಿದೆ.

ಸದ್ಯ ದೇಶದಲ್ಲಿ ಅಪ್ರಾಪ್ತರು ಅಪರಾಧ ಕೃತ್ಯದಲ್ಲಿ ಭಾಗಿಯಾಗುವುದು ಅಧಿಕವಾಗಿ ವರದಿಯಾಗುತ್ತಿದೆ. ಇತ್ತೀಚೆಗೆ ಬೆಳಗಾವಿಯಲ್ಲಿ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಇಬ್ಬರು ಅಪ್ರಾಪ್ತರನ್ನು ಬಂಧಿಸಲಾಗಿದೆ. ಹಾಗೆಯೇ ಚೆನ್ನೈನಲ್ಲಿ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣಕ್ಕೆ ಸಂಬಂಧಿಸಿ ಒಟ್ಟು 7 ಮಂದಿ ಅಪ್ರಾಪ್ತ ಬಾಲಕರನ್ನು ಬಂಧಿಸಲಾಗಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...