ಕೋಟಾ: ನೀಟ್‌ ಪರೀಕ್ಷೆಗೆ ತಯಾರಿ ನಡೆಸುತ್ತಿದ್ದ 16 ವರ್ಷದ ವಿದ್ಯಾರ್ಥಿನಿ ಆತ್ಮಹತ್ಯೆ; ಈ ವರ್ಷದಲ್ಲಿ 25ನೇ ಘಟನೆ

Date:

ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆಗೆ (ನೀಟ್) ತಯಾರಿ ನಡೆಸುತ್ತಿದ್ದ 16 ವರ್ಷದ ವಿದ್ಯಾರ್ಥಿನಿಯೊಬ್ಬರು ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ರಾಜಸ್ಥಾನದ ಕೋಟಾ ನಗರದಲ್ಲಿ ನಡೆದಿದೆ.

ಈ ವರ್ಷ ಕೇವಲ ಎಂಟು ತಿಂಗಳ ಅವಧಿಯಲ್ಲಿ ರಾಜಸ್ಥಾನದ ಕೋಚಿಂಗ್ ಹಬ್ ಆಗಿರುವ ಕೋಟಾದಲ್ಲಿ 25 ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.

ರಾಂಚಿಯ ನಿವಾಸಿಯಾಗಿರುವ ವಿದ್ಯಾರ್ಥಿನಿಯು ಕೋಟಾ ನಗರದ ಬ್ಲೇಜ್ ಹಾಸ್ಟೆಲ್‌ನಲ್ಲಿ ವಾಸಿಸುತ್ತಿದ್ದಳು. ಆಕೆ ನೇಣು ಬಿಗಿದುಕೊಂಡಿದ್ದು, ಮೃತದೇಹವನ್ನು ಶವಾಗಾರದಲ್ಲಿ ಇರಿಸಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ವಾರ್ಷಿಕವಾಗಿ ಸುಮಾರು ಎರಡು ಲಕ್ಷ ವಿದ್ಯಾರ್ಥಿಗಳು ಜೆಇಇ ಮತ್ತು ರಾಷ್ಟ್ರೀಯ ಅರ್ಹತೆ ಮತ್ತು ಪ್ರವೇಶ ಪರೀಕ್ಷೆ (ಎನ್‌ಇಇಟಿ) ಯಂತಹ ಸ್ಪರ್ಧಾತ್ಮಕ ಪರೀಕ್ಷೆಗಳಿಗೆ ಅರ್ಹತೆ ಪಡೆಯುವುದಕ್ಕಾಗಿ ಕೋಚಿಂಗ್‌ ಪಡೆಯಲು ಕೋಟಾಕ್ಕೆ ಸೇರುತ್ತಾರೆ.

ಈ ವರ್ಷ ಜಿಲ್ಲೆಯಲ್ಲಿ ಸ್ಪರ್ಧಾತ್ಮಕ ಪರೀಕ್ಷೆಗಳ ಒತ್ತಡಕ್ಕೆ ಸಂಬಂಧಿಸಿದಂತೆ 25 ವಿದ್ಯಾರ್ಥಿಗಳ ಆತ್ಮಹತ್ಯೆಯನ್ನು ಮಾಡಿಕೊಂಡಿದ್ದಾರೆ ಎಂದು ಅಧಿಕಾರಿಗಳು ವರದಿ ಮಾಡಿದ್ದಾರೆ.

ಈ ಸುದ್ದಿ ಓದಿದ್ದೀರಾ? ನಿಫಾ ವೈರಸ್ | ಸೋಂಕಿತ ಜಿಲ್ಲೆಯಲ್ಲಿ ಶಾಲಾ ಕಾಲೇಜುಗಳಿಗೆ ರಜೆ; ಕರ್ನಾಟಕದ ಗಡಿ ಜಿಲ್ಲೆಗಳಲ್ಲಿ ಕಟ್ಟೆಚ್ಚರ

ರಾಜಸ್ಥಾನ ಪೊಲೀಸರ ಅಂಕಿಅಂಶಗಳ ಪ್ರಕಾರ, 2022 ರಲ್ಲಿ 15, 2019 ರಲ್ಲಿ 18, 2018 ರಲ್ಲಿ 20, 2017 ರಲ್ಲಿ 7, 2016 ರಲ್ಲಿ 17 ಮತ್ತು 2015 ರಲ್ಲಿ 18. ಕೋಟಾದಲ್ಲಿ 2020 ಮತ್ತು 2021 ರಲ್ಲಿ ಕೋಚಿಂಗ್‌ನಲ್ಲಿ ಯಾವುದೇ ವಿದ್ಯಾರ್ಥಿ ಆತ್ಮಹತ್ಯೆ ವರದಿಯಾಗಿಲ್ಲ. ಕೋವಿಡ್-19 ಸಾಂಕ್ರಾಮಿಕ ರೋಗದಿಂದಾಗಿ ಕೋಚಿಂಗ್‌ ಸಂಸ್ಥೆಗಳನ್ನು ಮುಚ್ಚಲಾಗಿತ್ತು.

ಕೋಟಾದಲ್ಲಿ ನಡೆಯುತ್ತಿರುವ ಆತ್ಮಹತ್ಯೆ ಪ್ರಕರಣಗಳ ಹಿನ್ನೆಲೆಯಲ್ಲಿ ಜಿಲ್ಲಾಡಳಿತವು ಈ ಹಿಂದೆಯೇ ಎಲ್ಲ ಹಾಸ್ಟೆಲ್ ಕೊಠಡಿಗಳಲ್ಲಿ ಸ್ಪ್ರಿಂಗ್ ಲೋಡ್ ಫ್ಯಾನ್ ಅಳವಡಿಕೆ ಮತ್ತು ಪೇಯಿಂಗ್ ಗೆಸ್ಟ್ ಸೌಕರ್ಯಗಳನ್ನು ಕಡ್ಡಾಯಗೊಳಿಸಿ ಆದೇಶ ಹೊರಡಿಸಿತ್ತು.

ಕೋಟಾ ಜಿಲ್ಲಾಧಿಕಾರಿ ಓಂ ಪ್ರಕಾಶ್ ಬಂಕರ್ ಹೊರಡಿಸಿದ ಈ ಆದೇಶವು “ಹೆಚ್ಚುತ್ತಿರುವ ಕೋಚಿಂಗ್ ವಿದ್ಯಾರ್ಥಿಗಳ ಆತ್ಮಹತ್ಯೆಗಳನ್ನು ತಡೆಯುವ ಗುರಿಯನ್ನು ಹೊಂದುವ ಸಲುವಾಗಿ ಈ ವಸತಿ ಗೃಹಗಳಲ್ಲಿ ಓದುತ್ತಿರುವ ಮತ್ತು ವಾಸಿಸುವ ವಿದ್ಯಾರ್ಥಿಗಳಿಗೆ ಮಾನಸಿಕ ಬೆಂಬಲ, ಭದ್ರತೆಯನ್ನು ಒದಗಿಸಲಾಗುವುದು ಎಂದು ತಿಳಿಸಿದ್ದರು.”

ಏತನ್ಮಧ್ಯೆ, ರಾಜ್ಯದ ಕೋಚಿಂಗ್ ಇನ್‌ಸ್ಟಿಟ್ಯೂಟ್‌ಗಳಲ್ಲಿ, ವಿಶೇಷವಾಗಿ ಕೋಟಾದಲ್ಲಿ ವಿದ್ಯಾರ್ಥಿಗಳು ಆತ್ಮಹತ್ಯೆ ಮಾಡಿಕೊಳ್ಳುವುದನ್ನು ತಪ್ಪಿಸಲು ರಾಜಸ್ಥಾನ ಹೈಕೋರ್ಟ್ ರಾಜ್ಯ ಸರ್ಕಾರಕ್ಕೆ ಸೂಚನೆ ನೀಡಿತ್ತು. ಮಕ್ಕಳ ಮಾನಸಿಕ ಸಮಾಲೋಚನೆಯ ಮೇಲೆ ಕೇಂದ್ರೀಕರಿಸುವ ಅಗತ್ಯವನ್ನು ನ್ಯಾಯಾಲಯವು ಒತ್ತಿ ಹೇಳಿತ್ತು.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...