ಟೆಂಪೋ ಟ್ರಾವೆಲರ್ ವಾಹನವು ನಿಂತಿದ್ದ ಟ್ರೇಲರ್‌ಗೆ ಡಿಕ್ಕಿ ಹೊಡೆದ ಪರಿಣಾಮ ಕನಿಷ್ಠ 18 ಜನರು ಸಾವನ್ನಪ್ಪಿದ್ದು, ಹಲವರು ಗಂಭೀರವಾಗಿ ಗಾಯಗೊಂಡಿರುವ ಘಟನೆ ಭಾನುವಾರ (ನವೆಂಬರ್ 2) ರಾಜಸ್ಥಾನದ ಫಲೋಡಿ ಜಿಲ್ಲೆಯ ಮಾತೋಡಾ ಪ್ರದೇಶದಲ್ಲಿ ನಡೆದಿದೆ.
ಬಿಕಾನೇರ್‌ನ ಕೊಲಾಯತ್ ದೇವಸ್ಥಾನಕ್ಕೆ ಭೇಟಿ ನೀಡಿ ಜೋಧ್‌ಪುರಕ್ಕೆ ಹಿಂತಿರುಗುತ್ತಿದ್ದ ಯಾತ್ರಿಕರಿದ್ದ ಟೆಂಪೋ ಟ್ರಾವೆಲರ್ ಮಾತೋಡಾ ಗ್ರಾಮದ ಬಳಿ ರಸ್ತೆಬದಿಯಲ್ಲಿ ನಿಲ್ಲಿಸಿದ್ದ ಟ್ರೇಲರ್‌ಗೆ ಡಿಕ್ಕಿ ಹೊಡೆದಿದೆ.
ಇದನ್ನು ಓದಿದ್ದೀರಾ? ಬೆಳಗಾವಿ : ಭೀಕರ ಅಪಘಾತ ಇಬ್ಬರು ಸಾವು
18 ಜನರು ಸ್ಥಳದಲ್ಲೇ ಸಾವನ್ನಪ್ಪಿದ್ದಾರೆ ಮತ್ತು ಮೂರರಿಂದ ನಾಲ್ವರು ಗಂಭೀರ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ದೃಢಪಡಿಸಿದ್ದಾರೆ. ಗಾಯಾಳುಗಳಿಗೆ ಮೊದಲು ಹತ್ತಿರದ ಆರೋಗ್ಯ ಕೇಂದ್ರದಲ್ಲಿ ಪ್ರಾಥಮಿಕ ವೈದ್ಯಕೀಯ ಚಿಕಿತ್ಸೆ ನೀಡಿ ಹೆಚ್ಚಿನ ಚಿಕಿತ್ಸೆಗಾಗಿ ಜೋಧ್‌ಪುರದ ಆಸ್ಪತ್ರೆಗಳಿಗೆ ಸ್ಥಳಾಂತರಿಸಲಾಗಿದೆ.
फलोदी के मतोडा क्षेत्र में सड़क दुर्घटना में हुई जनहानि अत्यंत दुखद एवं हृदयविदारक है। मेरी संवेदनाएं शोकाकुल परिजनों के साथ हैं।
— Bhajanlal Sharma (@BhajanlalBjp) November 2, 2025
जिला प्रशासन के अधिकारियों को सभी घायलों का समुचित उपचार सुनिश्चित करने हेतु निर्देश दिए गए हैं। प्रभु से प्रार्थना है कि दिवंगत आत्माओं को शांति दें…
ಮುಖ್ಯಮಂತ್ರಿ ಭಜನ್‌ಲಾಲ್ ಶರ್ಮಾ ಅವರು ಈ ಬಗ್ಗೆ ಎಕ್ಸ್‌ನಲ್ಲಿ ಪೋಸ್ಟ್ ಮಾಡಿ ಸಂತಾಪ ಸೂಚಿಸಿದ್ದಾರೆ. “ಜಿಲ್ಲಾಧಿಕಾರಿ, ಪೊಲೀಸ್ ವರಿಷ್ಠಾಧಿಕಾರಿ ಮತ್ತು ಇತರ ಹಿರಿಯ ಅಧಿಕಾರಿಗಳನ್ನು ಸಂಪರ್ಕಿಸಲಾಗಿದೆ. ಗಾಯಾಳುಗಳಿಗೆ ಉತ್ತಮ ವೈದ್ಯಕೀಯ ಆರೈಕೆಯನ್ನು ಒದಗಿಸುವಂತೆ ಸೂಚಿಸಲಾಗಿದೆ” ಎಂದು ಸಿಎಂ ಹೇಳಿದ್ದಾರೆ.
ಫಲೋಡಿ ಪೊಲೀಸರು ಅಪಘಾತದ ಬಗ್ಗೆ ತನಿಖೆ ಆರಂಭಿಸಿದ್ದು ಟ್ರೇಲರ್ ಅನ್ನು ಸರಿಯಾಗಿ ಪಾರ್ಕಿಂಗ್ ಮಾಡದಿರುವುದೇ ಈ ಅಪಘಾತಕ್ಕೆ ಕಾರಣ ಎಂದು ಪ್ರಾಥಮಿಕ ತನಿಖೆಯಿಂದ ತಿಳಿದುಬಂದಿದೆ.





