ಮೂವರು ಬುಡಕಟ್ಟು ಸಮುದಾಯದ ಅಪ್ರಾಪ್ತ ಬಾಲಕಿಯರ ಮೇಲೆ 18 ಯುವಕರಿಂದ ಸಾಮೂಹಿಕ ಅತ್ಯಾಚಾರ

Date:

ಮೂವರು ಬುಡಕಟ್ಟು ಸಮುದಾಯದ ಅಪ್ರಾಪ್ತ ಬಾಲಕಿಯರ ಮೇಲೆ 18 ಯುವಕರು ಸಾಮೂಹಿಕ ಅತ್ಯಾಚಾರ ನಡೆಸಿದ ಘಟನೆ ಜಾರ್ಖಂಡ್‌ನ ಖುಂಟಿ ಜಿಲ್ಲೆಯಲ್ಲಿ ನಡೆದಿದೆ. ಈ ಘಟನೆಗೆ ಸಂಬಂಧಿಸಿದಂತೆ 18 ಯುವಕರನ್ನು ಪೊಲೀಸರು ಸೋಮವಾರ ಬಂಧಿಸಿದ್ದಾರೆ.

ಫೆಬ್ರವರಿ 21ರಂದು ಮೂವರು ಬುಡಕಟ್ಟು ಸಮುದಾಯದ ಬಾಲಕಿಯರು ವಿವಾಹ ಕಾರ್ಯಕ್ರಮವೊಂದರಲ್ಲಿ ಭಾಗಿಯಾಗಿ ಹಿಂದಿರುಗುತ್ತಿದ್ದಾಗ ರನಿಯಾ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಬಾಲಕಿಯರ ಮೇಲೆ ಸಾಮೂಹಿಕ ಅತ್ಯಾಚಾರ ನಡೆದಿದೆ.

ಸಾಮೂಹಿಕ ಅತ್ಯಾಚಾರ ನಡೆದಿರುವ ಬಗ್ಗೆ ಯಾರಿಗಾದರೂ ತಿಳಿಸಿದರೆ ಹತ್ಯೆ ಮಾಡುವುದಾಗಿ ಆರೋಪಿಗಳು ಬೆದರಿಕೆ ಹಾಕಿ ಪರಾರಿಯಾಗಿದ್ದಾರೆ ಎಂದು ವರದಿಯಾಗಿದೆ. ಬಳಿಕ ಬಾಲಕಿಯರು ಶನಿವಾರ ತಮ್ಮ ಮನೆಗೆ ತಲುಪಿದ್ದು ಈ ಬಗ್ಗೆ ಮಾಹಿತಿ ನೀಡಿದ್ದಾರೆ ಎಂದು ಹೇಳಲಾಗಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ವಿದ್ಯಾರ್ಥಿನಿ ಮೇಲೆ ಸಾಮೂಹಿಕ ಅತ್ಯಾಚಾರ: ಮೂವರು ಶಿಕ್ಷಕರ ಬಂಧನ

ಕುಟುಂಬಸ್ಥರು ಕೂಡಲೇ ರನಿಯಾ ಪೊಲೀಸ್ ಠಾಣೆಯಲ್ಲಿ ದೂರು ದಾಖಲಿಸಿದ್ದು, ಆರೋಪಿಗಳು ದೂರುದಾರರ ವಿರುದ್ಧ ಎಫ್‌ಐಆರ್ ದಾಖಲಿಸಿದ್ದಾರೆ. ಇದಾದ ಬಳಿಕ ಎಎಸ್‌ಪಿ ಕ್ರಿಸ್ಟೋಫರ್ ಕೆರ್ಕೆಟ್ಟಾ ನೇತೃತ್ವದಲ್ಲಿ ಎಸ್ಐಟಿಯನ್ನು ಸ್ಥಾಪಿಸಲಾಗಿದ್ದು, ತನಿಖೆಯನ್ನು ಆರಂಭಿಸಲಾಗಿದೆ.

ಈ ಬಗ್ಗೆ ಮಾಹಿತಿ ನೀಡಿದ ಎಸ್‌ಪಿ ಅಮಾನ್ ಕುಮಾರ್, “ಲೈಂಗಿಕ ದೌರ್ಜನ್ಯ ಮತ್ತು ಸಾಮೂಹಿಕ ಅತ್ಯಾಚಾರ ನಡೆದ ಪ್ರಕರಣ ನಡೆದಿದ್ದು, ಈ ಸಂಬಂಧ 18 ಅಪ್ರಾಪ್ತ ಯುವಕರನ್ನು ವಶಕ್ಕೆ ಪಡೆಸಲಾಗಿದೆ. ಹೆಚ್ಚಿನ ಕ್ರಮ ಕೈಗೊಳ್ಳಲಾಗುವುದು” ಎಂದು ತಿಳಿಸಿದ್ದಾರೆ.

2022ರಿಂದ ಈವರೆಗೆ 16 ಸಾಮೂಹಿಕ ಅತ್ಯಾಚಾರ ಪ್ರಕರಣ

ಕಳೆದ ಮೂರು ವರ್ಷಗಳಲ್ಲಿ ಜಿಲ್ಲೆಯಲ್ಲಿ ಒಟ್ಟು 16 ಸಾಮೂಹಿಕ ಅತ್ಯಾಚಾರ ಪ್ರಕರಣಗಳು ದಾಖಲಾಗಿವೆ. 2022ರಲ್ಲಿ ಏಳು, 2023ರಲ್ಲಿ ಐದು, 2024ರಲ್ಲಿ ಮೂರು ಮತ್ತು 2025ರಲ್ಲಿ ಐದು ಸಾಮೂಹಿಕ ಅತ್ಯಾಚಾರಗಳು ನಡೆದಿವೆ. ಖುಂಟಿ ಪೊಲೀಸರು ಈ ಪ್ರಕರಣವನ್ನು ಭೇದಿಸಿದ್ದು ಆರೋಪಿಗಳ ವಿರುದ್ಧ ಕ್ರಮ ಕೈಗೊಳ್ಳಲಾಗಿದೆ. ಆರೋಪಿಗಳ ಪೈಕಿ ಅಧಿಕ ಮಂದಿ ಅಪ್ರಾಪ್ತರಾಗಿದ್ದಾರೆ. ಇದು ದಾಖಲಾದ ಪ್ರಕರಣಗಳಾದರೆ ಇನ್ನೂ ಹಲವು ಪ್ರಕರಣಗಳು ದಾಖಲಾಗಿಲ್ಲ.

ಇದನ್ನು ಓದಿದ್ದೀರಾ? ಬೆಂಗಳೂರು | ಮಧ್ಯರಾತ್ರಿ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ, ಮೂವರ ಬಂಧನ

ಇನ್ನು ಭಾರತದಲ್ಲಿ ಅತ್ಯಾಚಾರ ಪ್ರಕರಣಗಳು ಅಧಿಕವಾಗುತ್ತಿದೆ. ರಾಷ್ಟ್ರೀಯ ಅಪರಾಧ ದಾಖಲೆಗಳ ಬ್ಯೂರೋ (ಎನ್‌ಸಿಆರ್‌ಬಿ) 2021ರ ವಾರ್ಷಿಕ ವರದಿ ಪ್ರಕಾರ ಭಾರತದಲ್ಲಿ 31,677 ಅತ್ಯಾಚಾರ ಪ್ರಕರಣಗಳು ದಾಖಲಾಗಿವೆ. ಅಂದರೆ ಪ್ರತಿದಿನ ಸರಿಸುಮಾರು 86 ಪ್ರಕರಣಗಳು ದಾಖಲಾಗಿವೆ. 2020ರಲ್ಲಿ 28,046 ಅತ್ಯಾಚಾರ ಪ್ರಕರಣಗಳು, 2019ರಲ್ಲಿ 32,033 ಅತ್ಯಾಚಾರ ಪ್ರಕರಣಗಳು ದಾಖಲಾಗಿವೆ.

2021ರ ವಾರ್ಷಿಕ ವರದಿ ಪ್ರಕಾರ 31,677 ಅತ್ಯಾಚಾರ ಪ್ರಕರಣಗಳು ದಾಖಲಾಗಿವೆ. ಈ ಪೈಕಿ ಶೇಕಡ 89ರಷ್ಟು ಅಂದರೆ 28,147 ಸಂತ್ರಸ್ತೆಯರ ಮೇಲೆ ಅವರ ಸಂಬಂಧಿಕರು ಅಥವಾ ಅವರ ಪರಿಚಯಸ್ಥರಿಂದಲೇ ಅತ್ಯಾಚಾರ ನಡೆದಿದೆ. ಅದರಲ್ಲೂ ಹೆಚ್ಚಾಗಿ 18 ವರ್ಷಕ್ಕಿಂತ ಕಡಿಮೆ ವಯಸ್ಸಿನವರ ಮೇಲೆ ಅಧಿಕವಾಗಿ ಅತ್ಯಾಚಾರ ನಡೆದಿದೆ.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...