ಇಂದು 542 ಲೋಕಸಭಾ ಕ್ಷೇತ್ರ, ಆಂಧ್ರ, ಒಡಿಶಾ ವಿಧಾನಸಭಾ ಚುನಾವಣೆಯ ಮತ ಎಣಿಕೆ

Date:

ಇಂದು 18ನೇ ಲೋಕಸಭಾ ಚುನಾವಣೆಯ 542 ಕ್ಷೇತ್ರಗಳು ಹಾಗೂ ಆಂಧ್ರ ಪ್ರದೇಶ, ಒಡಿಶಾ ವಿಧಾನಸಭಾ ಕ್ಷೇತ್ರಗಳ ಮತ ಎಣಿಕೆ ಬೆಳಿಗ್ಗೆ 8 ಗಂಟೆಗೆ ಆರಂಭವಾಗಲಿದೆ. ಮಧ್ಯಾಹ್ನ 1 ಗಂಟೆಯ ವೇಳೆಗೆ ಫಲಿತಾಂಶದ ಬಹುತೇಕ ಸ್ಪಷ್ಟ ಚಿತ್ರಣ ಲಭ್ಯವಾಗಲಿದೆ. ಮೊದಲು 8ರಿಂದ 9ಗಂಟೆಗಳ ಕಾಲ ಅಂಚೆ ಮತ ಎಣಿಕೆ 9 ಗಂಟೆಯಿಂದ  ವಿದ್ಯುನ್ಮಾನ ಮತ ಎಣಿಕೆ ನಡೆಯಲಿದೆ.

8360 ಅಭ್ಯರ್ಥಿಗಳ ಭವಿಷ್ಯ ಇಂದು ನಿರ್ಧಾರವಾಗಲಿದೆ. ಮತ ಎಣಿಕೆಗೆ 70 ಲಕ್ಷದಿಂದ 80 ಲಕ್ಷ ಸಿಬ್ಬಂದಿಯನ್ನು ನಿಯೋಜಿಸಲಾಗಿದೆ ಎಂದು ಚುನಾವಣಾ ಆಯೋಗದ ಮೂಲಗಳು ತಿಳಿಸಿವೆ.ಒಟ್ಟು 543 ಕ್ಷೇತ್ರಗಳಲ್ಲಿ ಈಗಾಗಲೇ ಗುಜರಾತ್‌ನ ಸೂರತ್‌ ಕ್ಷೇತ್ರದಲ್ಲಿ ಬಿಜೆಪಿ ಅಭ್ಯರ್ಥಿ ಅವಿರೋಧವಾಗಿ ಆಯ್ಕೆಯಾಗಿದ್ದಾರೆ.

ನಾಳೆ ನಡೆಯುವ ಮತ ಎಣಿಕೆಯಲ್ಲಿ ಪ್ರಧಾನಿ ನರೇಂದ್ರ ಮೋದಿ, ಕಾಂಗ್ರೆಸ್‌ ನಾಯಕ ರಾಹುಲ್‌ ಗಾಂಧಿ ಸೇರಿದಂತೆ ಘಟಾನುಘಟಿಗಳ ರಾಜಕೀಯ ಭವಿಷ್ಯ ನಿರ್ಧಾರವಾಗಲಿದೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

18ನೇ ಲೋಕಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ನ 285 ಕ್ಷೇತ್ರಗಳು ಸೇರಿದಂತೆ ಇಂಡಿಯಾ ಒಕ್ಕೂಟದ  466 ಅಭ್ಯರ್ಥಿಗಳು ಸ್ಪರ್ಧಿಸಿದ್ದಾರೆ. ಇವರಲ್ಲಿ ಸಮಾಜವಾದಿ ಪಕ್ಷದಿಂದ 62, ಆರ್‌ಜೆಡಿ 24, ಡಿಎಂಕೆ 21,ಉದ್ಧವ್‌ ಬಣದ ಶಿವಸೇನಾದಿಂದ 21 ಅಭ್ಯರ್ಥಿಗಳು ಕಣದಲ್ಲಿದ್ದಾರೆ.

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ಹಣದ ಹರಿವು, ಆತ್ಮಹತ್ಯೆಗಳು, ಅಧಿಕಾರಸ್ಥರು ಮತ್ತು ಬಡವರು

ಎನ್‌ಡಿಎ ಒಕ್ಕೂಟದಿಂದ ಒಟ್ಟು 540 ಮಂದಿ ಸ್ಪರ್ಧಿಸಿದ್ದಾರೆ. ಇವರಲ್ಲಿ ಬಿಜೆಪಿಯಿಂದ 441, ಟಿಡಿಪಿ 17,ಜೆಡಿಯು 16, ಏಕನಾಥ್‌ ಶಿಂಧೆ ಬಣದ ಶಿವಸೇನೆಯ 15 ಸ್ಪರ್ಧಿಗಳು ಸ್ಪರ್ಧಿಸಿದ್ದಾರೆ.

ನಾಳೆಯೇ ಒಡಿಶಾ ಹಾಗೂ ಆಂಧ್ರ ಪ್ರದೇಶ ವಿಧಾನಸಭೆಯ ಫಲಿತಾಂಶ ಕೂಡ ಹೊರಬೀಳಲಿದೆ. ಅಧಿಕಾರದಲ್ಲಿರುವ ಆಂಧ್ರದ ವೈಎಸ್‌ಆರ್‌ಸಿ ಪಕ್ಷದ ಮುಖ್ಯಮಂತ್ರಿ ಜಗನ್‌ ಮೋಹನ್‌ ರೆಡ್ಡಿ ಹಾಗೂ  ಒಡಿಶಾದ ಮುಖ್ಯಮಂತ್ರಿ ನವೀನ್‌ ಪಟ್ನಾಯಕ್‌ ಅವರ ಬಿಜೆಡಿ ಪಕ್ಷದ ತೀರ್ಪು ಕೂಡ ಪ್ರಕಟವಾಗಲಿದೆ.

ಬಹುತೇಕ ಚುನಾವಣೋತ್ತರ ಸಮೀಕ್ಷೆಗಳು ಎನ್‌ಡಿಎ ಒಕ್ಕೂಟ ಮೂರನೇ ಬಾರಿ ಅಧಿಕಾರಕ್ಕೆ ಬರುತ್ತದೆ ಎಂದು ಭವಿಷ್ಯ ನುಡಿದಿವೆ. ಇಂಡಿಯಾ ಒಕ್ಕೂಟದ ನಾಯಕರು ಇದನ್ನು ಅಲ್ಲಗೆಳದಿದ್ದು ಭ್ರಷ್ಟಾಚಾರ ಸೇರಿದಂತೆ ಹಲವು ವಿಷಯಗಳು ಈ ಬಾರಿಯ ಚುನಾವಣೆಯಲ್ಲಿ ಪ್ರಮುಖ ಪಾತ್ರ ವಹಿಸಲಿದೆ. ಅಲ್ಲದೆ ತಮ್ಮ ಒಕ್ಕೂಟ 295ಕ್ಕೂ ಹೆಚ್ಚು ಸ್ಥಾನಗಳಲ್ಲಿ ಜಯಗಳಿಸಲಿದೆ ಎಂದು ಹೇಳಿದ್ದಾರೆ.

ಏ.19ರಿಂದ ಮೊದಲ ಹಂತದಿಂದ ಆರಂಭವಾದ ಲೋಕಸಭಾ ಚುನಾವಣೆ ಜೂನ್‌ 1ರವರೆಗೂ ಒಟ್ಟು 7 ಹಂತಗಳಲ್ಲಿ ನಡೆದಿತ್ತು.ದೇಶದ 28 ರಾಜ್ಯಗಳು ಹಾಗೂ 8 ಕೇಂದ್ರಾಡಳಿತ ಪ್ರದೇಶಗಳ ಒಟ್ಟು 64.2 ಕೋಟಿ ಮತದಾರರು ತಮ್ಮ ಹಕ್ಕು ಚಲಾಯಿಸಿದ್ದರು.

 

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...