1984ರ ಸಿಖ್ ವಿರೋಧಿ ದಂಗೆ ಪ್ರಕರಣ: ಕಾಂಗ್ರೆಸ್‌ ಮಾಜಿ ಸಂಸದ ಸಜ್ಜನ್ ಕುಮಾರ್ ಖುಲಾಸೆ

Date:

1984ರ ಸಿಖ್ ವಿರೋಧಿ ದಂಗೆಗೆ ಪ್ರಚೋದನೆ ನೀಡಿದ್ದಾರೆಂದು ಆರೋಪಿಸಲಾಗಿದ್ದ ಪ್ರಕರಣದಲ್ಲಿ ಕಾಂಗ್ರೆಸ್ ಮಾಜಿ ಸಂಸದ ಸಜ್ಜನ್ ಕುಮಾರ್ ಅವರನ್ನು ದೆಹಲಿ ನ್ಯಾಯಾಲಯವು ಖುಲಾಸೆಗೊಳಿಸಿದೆ.

ದಂಗೆಯ ಸಂದರ್ಭದಲ್ಲಿ ದೆಹಲಿಯ ಜನಕ್‌ಪುರಿ ಮತ್ತು ವಿಕಾಸ್‌ಪುರಿ ಪ್ರದೇಶಗಳಲ್ಲಿ ನಡೆದಿದ್ದ ಹಿಂಸಾಚಾರಕ್ಕೆ ಸಜ್ಜನ್ ಕುಮಾರ್ ಪ್ರಚೋದನೆ ನೀಡಿದ್ದಾರೆಂದು ಆರೋಪಿಸಲಾಗಿತ್ತು. ಅವರ ವಿರುದ್ಧ ದಾಖಲಾಗಿದ್ದ ಈ ನಿರ್ದಿಷ್ಟ ಪ್ರಕರಣದಲ್ಲಿ ಕೊಲೆ ಮತ್ತು ಕ್ರಿಮಿನಲ್ ಪಿತೂರಿ ಸಂಬಂಧಿತ ಆರೋಪಗಳಿಂದ ಅವರನ್ನು ದೋಷಮುಕ್ತರೆಂದು 2023ರಲ್ಲಿಯೇ ಘೋಷಿಸಲಾಗಿತ್ತು. ಆದಾಗ್ಯೂ, ಗಲಭೆ ಮತ್ತು ದ್ವೇಷ ಪ್ರಚೋದನೆ ಆರೋಪಗಳಿದ್ದ ಕಾರಣ ಪ್ರಕರಣ ಮುಂದುವರೆದಿತ್ತು.

ಪ್ರಕರಣದ ವಿಚಾರಣೆ ನಡೆಸಿರುವ ದೆಹಲಿಯ ವಿಶೇಷ ನ್ಯಾಯಾಧೀಶ ದಿಗ್ ವಿನಯ್ ಸಿಂಗ್, ಪ್ರಕರಣದಲ್ಲಿ ಸಜ್ಜನ್ ಅವರನ್ನು ಖಲಾಸೆಗೊಳಿಸಿ ತೀರ್ಪು ಪ್ರಕಟಿಸಿದ್ದಾರೆ. ಆದಾಗ್ಯೂ, ಇತರ ಎರಡು ಪ್ರಕರಣಗಳಲ್ಲಿ ಶಿಕ್ಷೆಗೆ ಗುರಿಯಾಗಿರುವ ಸಜ್ಜನ್, ಜೈಲಿನಲ್ಲಿಯೇ ಇದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

1984ರ ಅಕ್ಟೋಬರ್‌ನಲ್ಲಿ ಇಂದಿರಾ ಗಾಂಧಿ ಅವರ ಹತ್ಯೆಯ ಬಳಿಕ, ಸಿಖ್‌ ವಿರೋಧಿ ದಂಗೆಗಳು ಭುಗಿಲೆದ್ದಿದ್ದವು. ಈ ವೇಳೆ, ದೆಹಲಿಯಲ್ಲಿಯೂ ಹಿಂಸಾಚಾರ ನಡೆದಿತ್ತು. ಹಿಂಸಾಚಾರದಲ್ಲಿ ಸೋಹನ್ ಸಿಂಗ್ ಮತ್ತು ಅವರ ಅಳಿಯ ಅವತಾರ್ ಸಿಂಗ್ ಅವರ ಹತ್ಯೆಯಾಗಿತ್ತು. ಈ ಹತ್ಯೆಗಳಿಗೆ ಸಜ್ಜನ್ ಅವರು ಪ್ರಚೋದನೆ ನೀಡಿದ್ದಾರೆಂದು 2015ರ ಫೆಬ್ರವರಿಯಲ್ಲಿ ಸಜ್ಜನ್ ವಿರುದ್ಧ ವಿಶೇಷ ತನಿಖಾ ತಂಡವು ಎಫ್‌ಐಆರ್ ದಾಖಲಿಸಿತ್ತು. ಈ ಪ್ರಕರಣದಲ್ಲಿ ಸಜ್ಜನ್ ಅವರಿಗೆ ಜೀವಾವಧಿ ಶಿಕ್ಷೆ ವಿಧಿಸಿ 2018ರಲ್ಲಿ ದೆಹಲಿ ಹೈಕೋರ್ಟ್‌ ತೀರ್ಪು ನೀಡಿದೆ. ಇದರ ವಿರುದ್ಧ ಸಜ್ಜನ್ ಸುಪ್ರೀಂ ಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದ್ದಾರೆ. ಸುಪ್ರೀಂ ಕೋರ್ಟ್‌ನಲ್ಲಿ ವಿಚಾರಣೆ ಬಾಕಿ ಇದೆ.

ಈ ಲೇಖನ ಓದಿದ್ದೀರಾ?: ಮುಂದುವರೆದ ತಮಿಳುನಾಡು ರಾಜ್ಯಪಾಲರ ಮೊಂಡಾಟ: ಸುಪ್ರೀಂ ತಪರಾಕಿಗೂ ಬೆಲೆ ಇಲ್ಲವೇ?

ಇನ್ನು, ಸಜ್ಜನ್ ವಿರುದ್ಧ ಮತ್ತೊಂದು ಪ್ರಕರಣ – 2ನೇ ಎಫ್‌ಐಆರ್‌ನಲ್ಲಿ, 1984ರ ನವೆಂಬರ್ 2ರಂದು ದೆಹಲಿ ವಿಕಾಸಪುರಿಯಲ್ಲಿ ಗುರ್ಚರಣ್ ಸಿಂಗ್ ಅವರನ್ನು ಬೆಂಕಿ ಹಚ್ಚಿ ಜೀವಂತವಾಗಿ ಸುಟ್ಟುಹಾಕಿ ಘಟನೆಯಲ್ಲಿ ಸಜ್ಜನ್ ಅವರ ಕೈವಾಡವಿದೆ ಎಂದು ಆರೋಪಿಸಲಾಗಿದೆ. ಈ ಪ್ರಕರಣದಲ್ಲಿ ಸಜ್ಜನ್ ಅವರಿಗೆ 2025ರ ಫೆಬ್ರವರಿ 25ರಂದು ವಿಚಾರಣಾ ನ್ಯಾಯಾಲಯವು ಜೀವಾವಧಿ ಶಿಕ್ಷೆ ವಿಧಿಸಿದೆ.

1984ರಲ್ಲಿ ದೆಹಲಿಯಲ್ಲಿ ಸಂಭವಿಸಿದ ಭೀಕರ ಹಿಂಸಾಚಾರದಲ್ಲಿ ಒಟ್ಟು 2,733 ಮಂದಿಯನ್ನು ಕೊಲ್ಲಲಾಗಿತ್ತು. ಈ ಗಲಭೆಗೆ ಸಂಬಂಧಿಸಿದಂತೆ 587 ಎಫ್‌ಐಆರ್‌ಗಳು ದಾಖಲಾಗಿವೆ. ಈ ಪೈಕಿ,240 ಎಫ್‌ಐಆರ್‌ಗಳಲ್ಲಿ ‘ಆರೋಪಿ’ಗಳು ಪತ್ತೆಯಾಗಿಲ್ಲವೆಂದು ಪೊಲೀಸರು ಪ್ರಕರಣಗಳನ್ನು ಮುಕ್ತಾಯಗೊಳಿಸಿದ್ದಾರೆ. ಇನ್ನು, 250 ಪ್ರಕರಣಗಳಲ್ಲಿ ಆರೋಪಿಗಳು ಖುಲಾಸೆಗೊಂಡಿದ್ದಾರೆ. ಕೇವಲ 28 ಎಫ್‌ಐಆರ್‌ಗಳಲ್ಲಿ ಮಾತ್ರವೇ ಅಪರಾಧಿಗಳಿಗೆ ಶಿಕ್ಷೆ ವಿಧಿಸಲಾಗಿದೆ. ಈ 28 ಪ್ರಕರಣಗಳಲ್ಲಿ ಸುಮಾರು 400 ಜನರು ಶಿಕ್ಷೆಗೊಳಗಾಗಿದ್ದಾರೆ. ಇವರಲ್ಲಿ, ಮಾಜಿ ಸಂಸದ ಸಜ್ಜನ್ ಕುಮಾರ್ ಕೂಡ ಒಬ್ಬರು.

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...