ಕಾರಿಗೆ ಟ್ರಕ್ ಡಿಕ್ಕಿ | ಇಬ್ಬರು ಬಿಜೆಪಿ ನಾಯಕರ ಸಾವು; ಪೂರ್ವಯೋಜಿತ ಕೃತ್ಯ ಆರೋಪ

Date:

ಟ್ರಕ್ ಒಂದು ಕಾರಿಗೆ ಡಿಕ್ಕಿ ಹೊಡೆದು ಇಬ್ಬರು ಬಿಜೆಪಿ ನಾಯಕರು ಸಾವನ್ನಪ್ಪಿರುವ ಘಟನೆ ಭಾನುವಾರ ಮುಂಜಾನೆ ಒಡಿಶಾದ ಸಂಬಲ್‌ಪುರ್ ಜಿಲ್ಲೆಯಲ್ಲಿ ನಡೆದಿದೆ.

ಮೃತ ಬಿಜೆಪಿ ನಾಯಕರನ್ನು ದೇವೇಂದ್ರ ನಾಯಕ್ ಮತ್ತು ಮುರಳೀಧರ್ ಚುರಿಯಾ ಎಂದು ಗುರುತಿಸಲಾಗಿದೆ. ನಾಯಕ್ ಬಿಜೆಪಿಯ ಗೋಶಾಲಾ ಮಂಡಲ ಅಧ್ಯಕ್ಷರಾಗಿದ್ದರೆ, ಚುರಿಯಾ ಮಾಜಿ ಸರಪಂಚ್ ಆಗಿದ್ದರು. ಇವರಿಬ್ಬರೂ ಬಿಜೆಪಿಯ ಹಿರಿಯ ನಾಯಕಿ ನೌರಿ ನಾಯ್ಕ್‌ಗೆ ಆಪ್ತರಾಗಿದ್ದರು ಎಂದು ವರದಿಯಾಗಿದೆ.

ಕಾರಿನಲ್ಲಿ ಚಾಲಕ ಸೇರಿದಂತೆ ಆರು ಜನರಿದ್ದರು. ಅವರು ಭುವನೇಶ್ವರದಿಂದ ಕಾರ್ಡೋಲಾದಲ್ಲಿರುವ ತಮ್ಮ ನಿವಾಸಕ್ಕೆ ಹಿಂದಿರುಗುತ್ತಿದ್ದರು ಎಂದು ಪೊಲೀಸರು ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ? ಪ್ರಿಯಾಂಕಾ ಗಾಂಧಿ ಕೆನ್ನೆಯಂತೆ ನುಣುಪಾದ ರಸ್ತೆ ನಿರ್ಮಾಣ : ಬಿಜೆಪಿ ನಾಯಕನ ಹೇಳಿಕೆಗೆ ತೀವ್ರ ಖಂಡನೆ

ಎಲ್ಲಾ ಆರು ಜನರನ್ನು ಹತ್ತಿರದ ಆಸ್ಪತ್ರೆಗೆ ಕರೆದೊಯ್ಯಲಾಗಿದೆ. ಆ ಪೈಕಿ ಇಬ್ಬರು ಸಾವನ್ನಪ್ಪಿದ್ದಾರೆ ಎಂದು ವೈದ್ಯರು ಘೋಷಿಸಿದರು. ಗಾಯಾಳುಗಳು ಅಲ್ಲಿಯೇ ಚಿಕಿತ್ಸೆ ಪಡೆಯುತ್ತಿದ್ದರು.

ಈ ಅಪಘಾತದಲ್ಲಿ ಗಾಯಗೊಂಡ ಸುರೇಶ ಚಂದಾ ಮಾಧ್ಯಮಕ್ಕೆ ಪ್ರತಿಕ್ರಿಯೆ ನೀಡಿದ್ದು, “ವಾಹನವು ನಮ್ಮ ಕಾರಿಗೆ ಎರಡು ಬಾರಿ ಹಿಂದಿನಿಂದ ಡಿಕ್ಕಿ ಹೊಡೆದಿದೆ. ಯಾರೋ ಉದ್ದೇಶಪೂರ್ವಕವಾಗಿ ನಮ್ಮ ವಾಹನವನ್ನು ಡಿಕ್ಕಿ ಹೊಡೆಯಲು ಪ್ರಯತ್ನಿಸುತ್ತಿದ್ದಾರೆ ಎಂದು ಶಂಕಿಸಿದ ಚಾಲಕ, ಕಾಂತಪಲ್ಲಿ ಚೌಕದ ಬಳಿ ಹೆದ್ದಾರಿಯಿಂದ ಗ್ರಾಮಾಂತರ ರಸ್ತೆಯ ಕಡೆಗೆ ಕಾರನ್ನು ತಿರುಗಿಸಿದರು. ಆದರೆ ಬಳಿಕವೂ ಕಾರು ಹಿಂಬಾಳಿಸಿದೆ. ಈ ವೇಳೆ ಕಾರು ಪಲ್ಟಿಯಾಗಿದೆ. ಹೆದ್ದಾರಿಯಲ್ಲಿ ತಮ್ಮ ಕಾರಿಗೆ ಡಂಪರ್ ಎರಡು ಬಾರಿ ಡಿಕ್ಕಿ ಹೊಡೆಯುವವರೆಗೂ ನನಗೆ ಪ್ರಜ್ಞೆಯಿತ್ತು. ಆದರೆ ಮೂರನೇ ಬಾರಿ ಡಿಕ್ಕಿ ಹೊಡೆದಾಗ ಪ್ರಜ್ಞೆ ತಪ್ಪಿತು” ಎಂದು ಹೇಳಿದರು.

ಇದನ್ನು ಓದಿದ್ದೀರಾ? ಒಡಿಶಾ | ಅಲೆಮಾರಿ ಕುಟುಂಬದ ಐವರ ಬರ್ಬರ ಹತ್ಯೆ; ಐವರ ಅಪಹರಣ

“ಯಾರೋ ಉದ್ದೇಶಪೂರ್ವಕವಾಗಿ ಅಪಘಾತ ಮಾಡಿದ್ದಾರೆ ಎಂದು ನನಗೆ ಖಾತ್ರಿಯಿದೆ. ತಪ್ಪಿ ಒಮ್ಮೆ ವಾಹನಕ್ಕೆ ಡಿಕ್ಕಿ ಹೊಡೆಯಬಹುದು. ಹಿಂದಿನಿಂದ ಮೂರು ಬಾರಿ ಯಾಕೆ ಡಿಕ್ಕಿ ಹೊಡೆಯುತ್ತಾರೆ” ಎಂದು ಗಾಯಗೊಂಡ ಬಿಜೆಪಿ ಕಾರ್ಯಕರ್ತ ಪ್ರಶ್ನಿಸಿದ್ದಾರೆ.

ಗಾಯಾಳುಗಳನ್ನು ಭೇಟಿ ಮಾಡಿದ ನಂತರ ಮಾತನಾಡಿದ ಮಾಜಿ ಶಾಸಕ ರೆಂಗಾಳಿ ನಾಯ್ಕ್, “ಇದು ಅಪಘಾತವಲ್ಲ, ಉದ್ದೇಶಪೂರ್ವಕವಾಗಿ ಕಾರಿಗೆ ಡಿಕ್ಕಿ ಹೊಡೆಯಲಾಗಿದೆ, ಇದು ಯೋಜಿತ ಕೃತ್ಯ” ಎಂದು ಆರೋಪಿಸಿದರು. “ಯಾರೋ ಉದ್ದೇಶಪೂರ್ವಕವಾಗಿ ವಾಹನವನ್ನು ಮೂರು ಬಾರಿ ಹೊಡೆದಿದ್ದಾರೆ” ಎಂದರು.

WhatsApp Image 2025 11 17 at 3.21.17 PM
ಈ ದಿನ ಡೆಸ್ಕ್
+ posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...