ಹೇಮಂತ್ ಸೊರೇನ್ ನಾಪತ್ತೆ: ದೆಹಲಿ ನಿವಾಸದಿಂದ 2 ಬಿಎಂಡಬ್ಲ್ಯು, 36 ಲಕ್ಷ ನಗದು ವಶಪಡಿಸಿಕೊಂಡ ಇಡಿ

Date:

ಜಾರ್ಖಂಡ್ ಸಿಎಂ ಹೇಮಂತ್ ಸೊರೇನ್ ದೆಹಲಿ ನಿವಾಸದಿಂದ ಜಾರಿ ನಿರ್ದೇಶನಾಲಯದ ಅಧಿಕಾರಿಗಳು 2 ಬಿಎಂಡಬ್ಲ್ಯು, 36 ಲಕ್ಷ ನಗದು ಹಾಗೂ ಕೆಲವು ಅಘೋಷಿತ ದಾಖಲೆಗಳನ್ನು ವಶಪಡಿಸಿಕೊಂಡಿದ್ದಾರೆ.

ದೆಹಲಿ ನಿವಾಸದಿಂದ ಹೇಮಂತ್ ಸೊರೇನ್ ನಾಪತ್ತೆಯಾಗಿರುವ ಕಾರಣದಿಂದ ಇ.ಡಿ ತಂಡಕ್ಕೆ ವಿಚಾರಣೆ ನಡೆಸಲು ಸಾಧ್ಯವಾಗುತ್ತಿಲ್ಲ. ಭೂ ಹಗರಣ ಸಂಬಂಧ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಸಂಪರ್ಕ ಹೊಂದಿರುವ ಹಿನ್ನೆಲೆಯಲ್ಲಿ ವಿಚಾರಣೆಗೊಳಪಡಿಸಲು ಸೊರೇನ್ ದೆಹಲಿ ನಿವಾಸಕ್ಕೆ ಇ.ಡಿ ಅಧಿಕಾರಿಗಳು ಆಗಮಿಸಿದ್ದರು. ಸೊರೇನ್ ನಾಪತ್ತೆಯಾದ ಕಾರಣ ಇಡಿ ಅಧಿಕಾರಿಗಳು ಕಳೆದ 13 ಗಂಟೆಗಳಿಂದ ಜಾರ್ಖಂಡ್ ನಿವಾಸದಲ್ಲಿಯೇ ಉಳಿದುಕೊಂಡಿದ್ದಾರೆ.

ಮೂಲಗಳ ಪ್ರಕಾರ ಇ.ಡಿ ತಂಡ ಸೊರೇನ್ ಸುಳಿವಿಗಾಗಿ ದೆಹಲಿ ವಿಮಾನ ನಿಲ್ದಾಣದಲ್ಲಿ ಕಣ್ಣಿಟ್ಟಿದೆ. ಜನವರಿ 27ರಂದು ಸೊರೇನ್ ಖಾಸಗಿ ಕಾರಣ ಹೇಳಿಕೊಂಡು ದೆಹಲಿಯಿಂದ ರಾಂಚಿಗೆ ಆಗಮಿಸಿದ್ದರು.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಈ ಸುದ್ದಿ ಓದಿದ್ದೀರಾ? ಈ ದಿನ ಸಂಪಾದಕೀಯ | ರಾಮ ನೆಲೆ ನಿಂತರೂ ನಿಲ್ಲದ ನಾಟಕ

ಇ.ಡಿ ಕ್ರಮ ಕೈಗೊಳ್ಳುವ ಭಯದಿಂದ ಕಳೆದ 18 ಗಂಟೆಗಳಿಂದ ಜಾರ್ಖಂಡ್ ನಾಪತ್ತೆಯಾಗಿದ್ದಾರೆ ಎಂದು ಬಿಜೆಪಿ ಆರೋಪಿಸಿದೆ. ರಾಜ್ಯದ ಬಗ್ಗೆ ಕಳವಳ ವ್ಯಕ್ತಪಡಿಸಿ ಜಾರ್ಖಂಡ್ ರಾಜ್ಯಪಾಲ ಸಿಪಿ ರಾಧಾಕೃಷ್ಣನ್ ಅವರಿಗೆ ಬಿಜೆಪಿ ರಾಜ್ಯ ನಾಯಕರು ಮನವಿ ಸಲ್ಲಿಸಿದ್ದಾರೆ.

ಇ.ಡಿ. ಈ ಮೊದಲು ಜನವರಿ 20ರಂದು ಸೊರೇನ್ ಅವರನ್ನು ವಿಚಾರಣೆಗೊಳಪಡಿಸಿತ್ತು. ವಿಚಾರಣೆ ಪೂರ್ಣಗೊಳ್ಳದ ಕಾರಣ ಜನವರಿ 29 ಅಥವಾ 31 ರಂದು ಪುನಃ ಲಭ್ಯವಾಗುವಂತೆ ಸಮನ್ಸ್ ನೀಡಿತ್ತು.

ಜಾರ್ಖಂಡ್ ನಿವಾಸದ ಬಳಿ 144 ಸೆಕ್ಷನ್ ಜಾರಿ

ಇ.ಡಿ.ಯಿಂದ ಬಂಧನಕ್ಕೊಳಗಾಗುವ ಭೀತಿಯ ಹಿನ್ನೆಲೆಯಲ್ಲಿ ಜಾರ್ಖಂಡ್‌ನ ರಾಂಚಿಯ ಹೇಮಂತ್ ಸೊರೇನ್ ನಿವಾಸದ ಬಳಿ 100 ಮೀಟರ್‌ವರೆಗೂ 144 ಸೆಕ್ಷನ್ ಜಾರಿಗೊಳಿಸಲಾಗಿದೆ. ಸಿಎಂ ನಿವಾಸದ ಜೊತೆ ರಾಜಭವನ ಹಾಗೂ ರಾಂಚಿಯ ಇ.ಡಿ ಕಚೇರಿ ಬಳಿಯಲ್ಲೂ ನಿಷೇಧಾಜ್ಞೆ ಜಾರಿಗೊಳಿಸಲಾಗಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...