ಮಣಿಪುರ ಹಿಂಸಾಚಾರ | ಇಬ್ಬರು ಸಿಆರ್‌ಪಿಎಫ್ ಯೋಧರು ಹುತಾತ್ಮ

Date:

ಮಣಿಪುರದ ನರಂಸೇನಾ ಪ್ರದೇಶದಲ್ಲಿ ಶುಕ್ರವಾರ ಮಧ್ಯರಾತ್ರಿಯಲ್ಲಿ ನಡೆದ ಹಿಂಸಾಚಾರದಲ್ಲಿ ಇಬ್ಬರು ಕೇಂದ್ರೀಯ ಮೀಸಲು ಪೊಲೀಸ್ ಪಡೆ (ಸಿಆರ್‌ಪಿಎಫ್) ಯೋಧರು ಹುತಾತ್ಮರಾಗಿದ್ದಾರೆ. ಕುಕಿ ಸಮುದಾಯಕ್ಕೆ ಸೇರಿದ ಉಗ್ರರು ನಡೆಸಿದ ದಾಳಿಯಲ್ಲಿ ಸಿಬ್ಬಂದಿಗಳು ಪ್ರಾಣ ಕಳೆದುಕೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

ಪೊಲೀಸರ ಪ್ರಕಾರ, ಮಧ್ಯರಾತ್ರಿಯಲ್ಲಿ ಈ ದಾಳಿ ಆರಂಭವಾಗಿದ್ದು ಬೆಳಗಿನ ಜಾವ 2:15ರವರೆಗೆ ಸಿಆರ್‌ಪಿಎಫ್ ಸಿಬ್ಬಂದಿ ಮೇಲೆ ದಾಳಿ ಮಾಡಲಾಗಿದೆ. ಪ್ರಾಣ ಕಳೆದುಕೊಂಡ ಸಿಬ್ಬಂದಿಗಳು ರಾಜ್ಯದ ಬಿಷ್ಣುಪುರ್ ಜಿಲ್ಲೆಯ ನರಸೇನಾ ಪ್ರದೇಶದಲ್ಲಿ ನಿಯೋಜಿಸಲಾದ ಸಿಆರ್‌ಪಿಎಫ್ 128 ಬೆಟಾಲಿಯನ್‌ನವರು ಆಗಿದ್ದರು.

ಈ ನಡುವೆ ಮಣಿಪುರ ಮುಖ್ಯ ಚುನಾವಣಾ ಅಧಿಕಾರಿ ಪ್ರದೀಪ್ ಕುಮಾರ್ ಝಾ ಅವರು ಲೋಕಸಭೆ ಚುನಾವಣೆಯ ಎರಡನೇ ಹಂತದಲ್ಲಿ ಮಣಿಪುರದ ಹೊರಭಾಗದಲ್ಲಿ ಅಧಿಕ ಮತದಾನವಾಗಿದೆ ಮತ್ತು ಅಧಿಕ ಹಿಂಸಾಚಾರದ ಘಟನೆಗಳು ನಡೆದಿಲ್ಲ ಎಂದು ಶುಕ್ರವಾರ ತಿಳಿಸಿದ್ದಾರೆ.

ಇನ್ನಷ್ಟು ವಿಶೇಷ ಲೇಖನಗಳಿಗಾಗಿ, ಇಲ್ಲಿ ಕ್ಲಿಕ್ ಮಾಡಿ

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ...

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ, ತಮ್ಮ ಛಾಪು ಮೂಡಿಸುತ್ತ, ಕೊಡುಗೆ ನೀಡುತ್ತಾ, ಸಾಧಿಸುತ್ತಾ ಹೋಗಿದ್ದಾರೆ. ಇದು, ಅವರ ಕುರಿತು ವಿವಿಧ ಲೇಖಕ/ಲೇಖಕಿಯರಿಂದ ಒಂದು ಪುಟ್ಟ ದಾಖಲೀಕರಣ… ಸೃಜನಶೀಲತೆ,...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ...

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು! ಹೋಕ್ರಾಣಾ ಗ್ರಾಮದಲ್ಲಿ ಜನರ ನೀರಿನ ದಾಹವನ್ನೇ ಬಂಡವಾಳ ಮಾಡಿಕೊಂಡು ಖಾಸಗಿ ಬೋರ್‌ವೆಲ್‌ಗಳು ದರ್ಬಾರ್‌ ನಡೆಸುತ್ತೆವೆಯೇ? ಖುದ್ದು ಗ್ರಾಮಸ್ಥರ ಜೊತೆಗೆ ನಿಂತು...

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ...

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ ಬೃಹದೀಶ್ವರ ದೇವಸ್ಥಾನ, ಮತ್ತು ತಿರುಚಿರಾಪಳ್ಳಿಯ ಶ್ರೀ ರಂಗನಾಥಸ್ವಾಮಿ ದೇವಸ್ಥಾನಗಳಿಗೆ ಭೇಟಿ ನೀಡಿದರೂ, ತಮಿಳುನಾಡಿನ ಚೋಳ ಸಾಮ್ರಾಜ್ಯದ ಸಂಪ್ರದಾಯದ ಹಿನ್ನೆಲೆಯಿರುವ ಸೆಂಗೋಲ್...

ಇದನ್ನು ಓದಿದ್ದೀರಾ?  ಲೋಕಸಭೆ ಚುನಾವಣೆ| ಮಣಿಪುರದಲ್ಲಿ 3 ಬಾರಿ ಸ್ಫೋಟ; ಸೇತುವೆಗೆ ಹಾನಿ

“ಸುಮಾರು ಒಂದು ಗಂಟೆಯ ಹಿಂದೆ ನಾವು ಸ್ವೀಕರಿಸಿದ ಕೊನೆಯ ವರದಿಯವರೆಗೂ, ಮತದಾನದ ಶೇಕಡ 75ರ ವ್ಯಾಪ್ತಿಯಲ್ಲಿತ್ತು. ಯಾವುದೇ ಪ್ರಮುಖ ಬಿಕ್ಕಟ್ಟುಗಳು ವರದಿಯಾಗಿಲ್ಲ” ಎಂದು ಶುಕ್ರವಾರ ಮಣಿಪುರ ಮುಖ್ಯ ಚುನಾವಣಾಧಿಕಾರಿ ಹೇಳಿದ್ದಾರೆ. ಭಾರತೀಯ ಚುನಾವಣಾ ಆಯೋಗದ ಪ್ರಕಾರ ಮಣಿಪುರದಲ್ಲಿ ಎರಡನೇ ಹಂತದ ಚುನಾವಣೆಯಲ್ಲಿ ಅಂತಿಮವಾಗಿ ಶೇಕಡ 78.78ರಷ್ಟು ಮತದಾನ ನಡೆದಿದೆ.

“ಎರಡನೇ ಹಂತದ ಮತದಾನದ ವೇಳೆ ಜನರು ತಮ್ಮ ಹಕ್ಕು ಚಲಾಯಿಸಲು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿದ್ದರು. ಇವಿಎಂ ಸರಿಯಾಗಿ ಕಾರ್ಯನಿರ್ವಹಿಸದ ಘಟನೆಯೊಂದು ಮತಗಟ್ಟೆಯಲ್ಲಿ ವರದಿಯಾಗಿದೆ. ಉಳಿದಂತೆ ಎಲ್ಲಿಯೂ ಯಾವುದೇ ಅಡಚಣೆ ಉಂಟಾಗಿಲ್ಲ” ಎಂದು ತಿಳಿಸಿದರು.

“2019ರ ಚುನಾವಣೆಗೆ ಹೋಲಿಸಿದರೆ ಹೊರ ಮಣಿಪುರ ಕ್ಷೇತ್ರದಲ್ಲಿ ಮತದಾನವು ಹೆಚ್ಚು ಶಾಂತಿಯುತವಾಗಿದೆ. ಯಾವುದೇ ಪ್ರಮುಖ ಘಟನೆಗಳು ನಡೆದಿಲ್ಲ ಮತ್ತು ಮತದಾನವು ತುಂಬಾ ಉತ್ತೇಜನಕಾರಿಯಾಗಿದೆ” ಎಂದು ಝಾ ಹೇಳಿದ್ದರು.

ಇದನ್ನು ಓದಿದ್ದೀರಾ?  ಮಣಿಪುರ| ಇವಿಎಂ ನಾಶ; ಏ. 22ರಂದು 11 ಮತಗಟ್ಟೆಗಳಲ್ಲಿ ಮರು ಮತದಾನ

ಈ ಮೊದಲು, ಏಪ್ರಿಲ್ 19 ರಂದು ಮೊದಲ ಹಂತದ ಮತದಾನದ ವೇಳೆ ಹಲವು ಹಿಂಸಾಚಾರದ ಘಟನೆಗಳು ನಡೆದಿದೆ. ಇವಿಎಂ ಧ್ವಂಸಗೊಳಿಸಲಾದ ಕಾರಣದಿಂದಾಗಿ ಒಳ ಮಣಿಪುರ ಕ್ಷೇತ್ರದ 11 ಮತಗಟ್ಟೆಗಳಲ್ಲಿ ಏಪ್ರಿಲ್ 22 ರಂದು ಮರು ಮತದಾನ ನಡೆಸಲಾಗಿದೆ.

ಏಳು ಹಂತಗಳ ಸಾರ್ವತ್ರಿಕ ಚುನಾವಣೆಗೆ ಮೊದಲ ಹಂತದ ಮತದಾನ ಏಪ್ರಿಲ್ 19 ರಂದು 21 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳಲ್ಲಿ 102 ಕ್ಷೇತ್ರಗಳಲ್ಲಿ ಯಶಸ್ವಿಯಾಗಿ ನಡೆದಿದೆ. ಏಪ್ರಿಲ್ 26ರಂದು 13 ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ 88 ಸ್ಥಾನಗಳಿಗೆ ಎರಡನೇ ಹಂತದ ಮತದಾನ ಸಂಜೆ 6 ಗಂಟೆಗೆ ಮುಕ್ತಾಯಗೊಂಡಿದೆ.

ಮೇ 7ರಂದು ಮುಂದಿನ ಸುತ್ತಿನ ಮತದಾನ ನಡೆಯಲಿದ್ದು, ಜೂನ್ 4ರಂದು ಮತ ಎಣಿಕೆ ಹಾಗೂ ಫಲಿತಾಂಶ ಪ್ರಕಟವಾಗಲಿದೆ.

eedina
ಈ ದಿನ ಡೆಸ್ಕ್‌
Website |  + posts

ಪೋಸ್ಟ್ ಹಂಚಿಕೊಳ್ಳಿ:

ಪೋಸ್ಟ್ ಹಂಚಿಕೊಳ್ಳಿ:

ಈ ಹೊತ್ತಿನ ಪ್ರಮುಖ ಸುದ್ದಿ

ವಿಡಿಯೋ

ಇದೇ ರೀತಿಯ ಇನ್ನಷ್ಟು ಲೇಖನಗಳು
Related

ತಮಿಳುನಾಡು ಚುನಾವಣೆ | ಪ್ರಾದೇಶಿಕ ಸಿದ್ಧಾಂತವನ್ನು ಮೀರಿ ಬೆಳೆಯುತ್ತಾ ರಾಷ್ಟ್ರೀಯವಾದ?

ತಮಿಳುನಾಡಿನ ಪಾರಂಪರಿಕ ಮಧುರೈನ ಸುಬ್ರಮಣ್ಯಸ್ವಾಮಿ ದೇವಸ್ಥಾನ, ಅರಿಯಲೂರ್ ಜಿಲ್ಲೆಯ ಗಂಗೈಕೊಂಡ ಚೋಳಪುರಂ...

ಅಸ್ಸಾಂ ಚುನಾವಣೆ: ಕಾಂಗ್ರೆಸ್ ಸೇರಿದ ಮಾಜಿ ಸಚಿವೆ ನಂದಿತಾ ಗೋರ್ಲೋಸಾ ಯಾರು?

ಅಸ್ಸಾಂ ವಿಧಾನಸಭಾ ಚುನಾವಣೆಗೆ (ಏಪ್ರಿಲ್ 9 ರಂದು ಒಂದೇ ಹಂತದಲ್ಲಿ ಮತದಾನ)...

ಡಾಲರ್ V/s ಯುವಾನ್: ಕೊಲ್ಲಿ ಯುದ್ಧ ಕರೆನ್ಸಿ ಯುದ್ಧವಾಗಿ ಮಾರ್ಪಾಡಾಗುತ್ತಿದೆಯೇ?

ಅಕಸ್ಮಾತ್ ಈ ಯುದ್ಧ ಮುಂದುವರೆದರೆ, ಕೆಲವು ದೇಶಗಳು ಡಾಲರ್ ಬದಲಿಗೆ ಯುವಾನ್...

ರಾಜ್ಯಸಭೆಗೆ ಸದಾನಂದಗೌಡರ ಪರ ಬಿಎಸ್‌ವೈ ; ದೇವೇಗೌಡರ ಪರ ಹೆಚ್‌ಡಿಕೆ ಲಾಬಿ

ಕೇಂದ್ರ ಉಕ್ಕು ಮತ್ತು ಭಾರಿ ಕೈಗಾರಿಕೆ ಸಚಿವ ಹೆಚ್‌.ಡಿ ಕುಮಾರಸ್ವಾಮಿ ನವದೆಹಲಿಯಲ್ಲಿ...